ಗೌಡರ ಫೋಟೋ ತೆಗೆದದ್ದಕ್ಕೆ ಆಕ್ರೋಶ
ಚಿಕ್ಕಬಳ್ಳಾಪುರ: ರಾಜಕೀಯ ದುರುದ್ದೇಶದಿಂದ ಮುಖ್ಯಮಂತ್ರಿ ಕಚೇರಿಯಲ್ಲಿದ್ದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರವರ ಭಾವಚಿತ್ರವನ್ನು ತೆಗೆದು ಹಾಕಿರುವುದು ಖಂಡನೀಯ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ವಿ.ನಾಗರಾಜ್ ಟೀಕಿಸಿದ್ದಾರೆ. ಪತ್ರಿಕಾ ಹೇಳಿಕೆ ನೀಡಿರುವ ಅವರು, ಹಿರಿಯ ರಾಜಕಾರಣಿ ಹೆಚ್.ಡಿ. ದೇವೇಗೌಡರವರು ಮುಖ್ಯಮಂತ್ರಿಯಾಗಿ, ಪ್ರಧಾನಿಯಾಗಿ ಜನಪರ ಉತ್ತಮ ಆಡಳಿತ ನೀಡುವ ಮೂಲಕ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಜನರ ಕಲ್ಯಾಣಕ್ಕಾಗಿ ತಮ್ಮದೇ ಆದ ಯೋಜನೆ, ಕಾರ್ಯಕ್ರಮಗಳನ್ನು ಜಾರಿಗೆಗೆ ತಂದು ಕೊಡುಗೆಯನ್ನು ನೀಡಿದ್ದಾರೆ. ಕನ್ನಡಿಗೊಬ್ಬರೊಬ್ಬರು ಪ್ರಧಾನಿ ಸ್ಥಾನವನ್ನು ಅಲಂಕರಿಸಿದ ಕೀರ್ತಿಯನ್ನು ರಾಜ್ಯಕ್ಕೆ ತಂದುಕೊಟ್ಟಿದ್ದಾರೆ. ಇಂತಹ ವ್ಯಕ್ತಿಯ ಭಾವಚಿತ್ರವನ್ನು ಸಿಎಂ ಕಚೇರಿಯಲ್ಲಿ ಕಳೆದ ಅನೇಕ ವರ್ಷಗಳಿಂದಿರಿಸಲಾಗಿತ್ತು. ಆದರೆ, ಇದೀಗ ಮುಖ್ಯಮಂತ್ರಿಯಾಗಿರುವ ಸಿದ್ಧರಾಮಯ್ಯನವರು ರಾಜಕೀಯ ದುರುದ್ದೇಶದಿಂದ ತಮ್ಮ ಕಚೇರಿಯಲ್ಲಿದ್ದ ಹೆಚ್.ಡಿ. ದೇವೇಗೌಡರವರ ಭಾವಚಿತ್ರವನ್ನು ತೆಗೆಸಿ ಹಾಕಿದ್ದಾರೆ. ಈ ಮೂಲಕ ಸೇಡಿನ ರಾಜಕಾರಣ ಮಾಡಲು ಹೊರಟಿದ್ದಾರೆ ಎಂದು ಟೀಕಿಸಿದ್ದಾರೆ. ಹಿಂದೆ ಯಡಿಯೂರಪ್ಪ, ಸದಾನಂದಗೌಡ, ಜಗದೀಶೆ ಶೆಟ್ಟರ್ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಭಾವಚಿತ್ರವನ್ನು ತೆಗೆಯದೇ ಹಾಗೆಯೇ ಇಟ್ಟಿರುವುದನ್ನು ಇದೀಗ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ತೆಗೆಸುವುದರ ಅವಶ್ಯಕತೆ ಏನು ಇತ್ತು ಕೇವಲ ರಾಜಕೀಯವಾಗಿ ನಡೆದ ವಿದ್ಯಮಾನಗಳನ್ನು ಗಮನದಲ್ಲಿಟ್ಟುಕೊಂಡು ಇಂತಹ ವರ್ತನೆಯನ್ನು ಅವರು ತೋರಿದ್ದಾರೆ. ಒಬ್ಬ ಮುಖ್ಯಮಂತ್ರಿಯಾಗಿ ಈ ರೀತಿಯ ರಾಜಕಾರಣ ಮಾಡುವುದು ಸರಿಯಲ್ಲ ಎಂದಿರುವ ಅವರು, ಕೂಡಲೇ ಹೆಚ್.ಡಿ. ದೇವೇಗೌಡರವರ ಭಾವಚಿತ್ರವನ್ನು ಯಥಾಸ್ಥಿತಿಯಲ್ಲಿ ಮುಖ್ಯಮಂತ್ರಿಗಳ ಕಚೇರಿಯಲ್ಲಿಡಬೇಕು. ಇಲ್ಲದಿದ್ದಲ್ಲಿ ಹೋರಾಟವನ್ನು ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

