ನೀರಿನ ಸಮಸ್ಯೆ ನಿವಾರಣೆಗೆ ಆದ್ಯತೆ; ವರ್ತೂರ್
ಕ.ಪ್ರ. ವಾರ್ತೆ, ಕೋಲಾರ, ಜು.18
ಕಳೆದ ಅವಧಿಯಲ್ಲಿ ಕೋಲಾರ ನಗರ ಸೇರಿದಂತೆ ಕ್ಷೇತ್ರದ ಬಹುತೇಕ ಕಡೆ ನೀರಿನ ಸಮಸ್ಯೆ ನಿವಾರಣೆ ಮಾಡಲು ತಾವು ಪ್ರಾಮಾಣಿಕವಾಗಿ ಕೆಲಸ ಮಾಡಿದ್ದರಿಂದ ಜನತೆಯ ಆಶೀರ್ವಾದ ಸಿಕ್ಕಿ ಮತ್ತೊಮ್ಮೆ ಶಾಸಕನಾಗಿದ್ದೇನೆ, ಎರಡನೇ ಅವಧಿಯಲ್ಲೂ ನೀರಿಗೆ ಮೊದಲ ಆದ್ಯತೆ ನೀಡುವ ಮೂಲಕ ಜ್ವಲಂತ ಸಮಸ್ಯೆ ನಿವಾರಣೆಗೆ ಕಟ್ಟಿಬದ್ಧನಾಗಿದ್ದೇನೆಂದು ಶಾಸಕ ಆರ್. ವರ್ತೂರ್ ಪ್ರಕಾಶ್ ತಿಳಿಸಿದರು.
ಅವರು ಗುರುವಾರ ನಗರದ ಪಿಸಿ ಬಡಾವಣೆಯ 4ನೇ ಕ್ರಾಸಿನಲ್ಲಿ ಹೊಸದಾಗಿ ಕೊರೆಸಿರುವ ಕೊಳವೆ ಬಾವಿಗೆ ಪಂಪು ಮೋಟಾರ್ ಅಳವಡಿಸಿ ನೀರು ಸರಬರಾಜಿಗೆ ಚಾಲನೆ ನೀಡಿದ ನಂತರ ಮಾತನಾಡಿದರು.
ನಗರಸಭೆಗೆ ಸೇರಿದ 13 ನೇ ವಾರ್ಡ್ನ ಸಾರ್ವಜನಿಕರಿಗೆ ನೀರು ಒದಗಿಸುವ ದೃಷ್ಟಿಯಿಂದ ಕೊರೆದಿರುವ ಕೊಳವೆ ಬಾವಿಯಲ್ಲಿ ಉತ್ತಮ ನೀರು ಸಿಕ್ಕಿದ್ದು ಜನತೆ ಸದುಪಯೋಗ ಮಾಡಿಕೊಳ್ಳಬೇಕೆಂದು ಕೋರಿದರಲ್ಲದೆ, ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ವಿ. ಗೋಪಿನಾಥ್ ಮತ್ತು 4ನೇ ಕ್ರಾಸಿನ ಜನತೆಯ ಮನವಿಗೆ ಸ್ಪಂದಿಸಿ ನೀರಿನ ವ್ಯವಸ್ಥೆ ಮಾಡಿರುವುದಾಗಿ ತಿಳಿಸಿದರು.
ಕೊಳವೆ ಬಾವಿಗಳು ಶಾಶ್ವತ ಪರಿಹಾರವಲ್ಲವೆಂಬುದು ನನಗೂ ಗೊತ್ತಿದೆ, ಈ ಹಿಂದಿನ ಸರ್ಕಾರದ ಅವಧಿಯಲ್ಲಿ ಶಾಶ್ವತ ಪರಿಹಾರಕ್ಕೆ ಸಾಕಷ್ಟು ಶ್ರಮಿಸಿದ್ದೇನೆ, ಕಾರಣಾಂತರಗಳಿಂದ ಸಾಧ್ಯವಾಗಲಿಲ್ಲ, ಮುಂದಿನ ದಿನಗಳಲ್ಲಿ ಪ್ರತಿಯೊಬ್ಬರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕುಡಿಯುವ ನೀರಿಗಾಗಿ ಶಾಶ್ವತ ಯೋಜನೆ ಜಾರಿಗಾಗಿ ಶ್ರಮಿಸುವುದಾಗಿ ಭರವಸೆ ನೀಡಿದರು.
ಪ್ರಸ್ತುತ ಬಜೆಟ್ನಲ್ಲಿ ಎತ್ತಿನಹೊಳೆ ಯೋಜನೆಗೆ 1 ಸಾವಿರ ಕೋಟಿ ರು. ಮತ್ತು ಡಾ. ಪರಮಶಿವಯ್ಯನವರ ವರದಿಗೆ ಡಿಪಿಆರ್ ತಯಾರಿಕೆಗೆ 50ಕೋಟಿ ರು. ಗಳನ್ನು ಮೀಸಲಿರಿಸಲಾಗಿದೆ. ಈ ಯೋಜನೆ ಕಾರ್ಯಗತಗೊಳಿಸಲು ತಾವು ಜಿಲ್ಲೆಯ ಇನ್ನಿತರ ಶಾಸಕರ ಜತೆಗೂಡಿ ಶ್ರಮಿಸುವುದಾಗಿ ಹೇಳಿದರು.
ಯರಗೋಳ್ ಯೋಜನೆಯ ಡ್ಯಾಂ ನಿರ್ಮಾಣ ಕಾಮಗಾರಿ ತಾಂತ್ರಿಕ ಕಾರಣಗಳಿಂದ ಸ್ಥಗಿತಗೊಂಡಿದ್ದು ಈಗ ಕಾಮಗಾರಿಗೆ ಮತ್ತೆ ಚಾಲನೆ ನೀಡಲಾಗಿದೆ. ಯೋಜನೆಗೆ ಸಂಬಂಧಪಟ್ಟಂತೆ ಪೈಪ್ಲೈನ್ ಮತ್ತು ಓವರ್ಹೆಡ್ ಟ್ಯಾಂಕುಗಳ ನಿರ್ಮಾಣ ಕಾಮಗಾರಿ ಮುಗಿದಿದ್ದು, ಇನ್ನು ಮೂರು ವರ್ಷಗಳಲ್ಲಿ ಯರಗೋಳ್ ಕುಡಿಯುವ ನೀರು ಜಿಲ್ಲೆಯ ಮೂರು ತಾಲೂಕುಗಳಿಗೆ ಪೂರೈಕೆಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ನಗರಸಭೆ ಮಾಜಿ ಅಧ್ಯಕ್ಷ ರಘುರಾಂ, ಸದಸ್ಯರಾದ ರಾಧಾಕೃಷ್ಣ, ಸೋಮಶೇಖರ್, ಮಾಜಿ ಸದಸ್ಯ ಮಂಜುನಾಥ್, ಮುಖಂಡರಾದ ಕೆ.ಜಿ.ರಂಗಪ್ಪ, ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ವಿ. ಗೋಪಿನಾಥ್, ಬೆಸ್ಕಾಂ ರಮೇಶ್, ಡಮರುಗ ಹರೀಶ್, ಅಪ್ಪಿ, ಮುರಳಿ, ಮುಖೇಶ್, ತ್ಯಾಗರಾಜ್ ಮುದ್ದಪ್ಪ, ಕಾಡಹಳ್ಳಿ ಶೇಖರ್, ತಿಪ್ಪೇನಹಳ್ಳಿ ನಾಗೇಶ್ ಮತ್ತಿತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

