ಪೌಷ್ಟಿಕ ಆಹಾರ ಜತೆ ಜೀವಸತ್ವ ಮಾತ್ರೆ ಸೇವಿಸಿ'
ಬಂಗಾರಪೇಟೆ: ಅಪೌಷ್ಟಿಕತೆ ಅನಾರೋಗ್ಯಕ್ಕೆ ಕಾರಣವಾಗಿದ್ದು ಮಕ್ಕಳು ಉತ್ತಮ ಪೌಷ್ಟಿಕ ಆಹಾರದ ಜತೆಗೆ ಜೀವ ಸತ್ವಗಳುಳ್ಳ ಮಾತ್ರೆಗಳನ್ನು ವಯಸ್ಸಿಗೆ ಅನುಗುಣವಾಗಿ ಸೇವಿಸುವುದರಿಂದ ಆರೋಗ್ಯ ಕಾಪಾಡಬಹುದೆಂದು ತಾಪಂ ಇಒ ಶ್ರೀನಿವಾಸ್ ತಿಳಿಸಿದರು.
ಪಟ್ಟಣದ ಬಿಇಒ ಕಚೇರಿ ಆವರಣದಲ್ಲಿರುವ ಬಿಆರ್ಸಿ ಕೇಂದ್ರದಲ್ಲಿ ತಾಲೂಕು ಮಟ್ಟದ ಮಕ್ಕಳಿಗೆ ಶಿಕ್ಷಣ ಇಲಾಖೆಯಿಂದ ಸರಬರಾಜಾದ ಪೌಷ್ಟಿಕಾಂಶದ ಮಾತ್ರೆಗಳನ್ನು ಮಕ್ಕಳಿಗೆ ವಿತರಿಸಿ ಮಾತನಾಡುತ್ತಾ, ಮಾತ್ರೆಗಳನ್ನು ಶಾಲೆಗಳಲ್ಲಿ ಮಕ್ಕಳಿಗೆ ನಿಯಮಾನುಸಾರ ಸಮರ್ಪಕವಾಗಿ ಮುಖ್ಯಶಿಕ್ಷಕರುಗಳು ಹಾಗೂ ಸಹ ಶಿಕ್ಷಕರುಗಳು ವಿತರಿಸಿ ಮಕ್ಕಳ ಆರೋಗ್ಯ ಮತ್ತು ಬೆಳವಣಿಗೆಯಲ್ಲಿ ಪ್ರಮುಖ ಪಾತ್ರವಹಿಸಬೇಕೆಂದು ತಿಳಿಸಿದರು.
ತಾಪಂ ಉಪಾಧ್ಯಕ್ಷ ಸಂಪಂಗಿರೆಡ್ಡಿ ಮಾತನಾಡಿ, ಕ್ಷೇತ್ರ ಸಿಬ್ಬಂದಿ ಶಾಲೆಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಈ ಮಾತ್ರೆಗಳು ಸಮರ್ಪಕವಾಗಿ ವಿತರಣೆಯಾಗುತ್ತಿರುವದರ ಬಗ್ಗೆ ಖಾತರಿಪಡಿಸಿಕೊಳ್ಳುವುದರ ಜತೆಗೆ ಮಕ್ಕಳು ಇವುಗಳನ್ನು ಊಟದ ನಂತರ ತೆಗೆದುಕೊಳ್ಳುತ್ತಿದ್ದಾರೆಯೇ ಎಂದು ಪರಿಶೀಲಿಸಲು ಶಿಕ್ಷಕರು ನಿಗಾವಹಿಸಬೇಕೆಂದರು. ಬಿಇಒ ಕೆ.ಜಯರಾಜ್ ಮಾತನಾಡಿದರು.
ಅಕ್ಷರ ದಾಸೋಹ ಸಹ ನಿರ್ದೇಶಕ ಸಿದ್ದರಾಜು, ಕ್ಷೇತ್ರ ಸಮನ್ವಯಾಧಿಕಾರಿ ಬಿ.ಜಿ.ಯುವರಾಜ್ ಆದರ್ಶ, ಮತ್ತಿತರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

