ಶಾಸಕ ಸುಬ್ಬಾರೆಡ್ಡಿ ಜನತಾ ದರ್ಶನ
ಬಾಗೇಪಲ್ಲಿ: ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅವರು ತಮ್ಮ ಸ್ವಗೃಹದಲ್ಲಿ ಜನತಾ ದರ್ಶನ ನಡೆಸಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದರು.
ನಂತರ ಮಾತನಾಡಿದ ಅವರು, ಈಗ ಸುಮಾರು 60 ಅರ್ಜಿಗಳು ಬಂದಿದ್ದು ಇವುಗಳಲ್ಲಿ ಬಹತೇಕ ಅನಾರೋಗ್ಯದಿಂದ ಪೀಡಿತರಾಗಿರುವ ಜನರು ವಿವಿಧ ಕಾಯಿಲೆಗಳಿಗೆ ಸಂಬಂಧಿಸಿರುವ ಚಿಕಿತ್ಸೆಗಾಗಿ ಅರ್ಜಿಗಳನ್ನು ಸಲ್ಲಿಸಿದ್ದಾರೆ.ಇಂತಹವುಗಳಲ್ಲಿ ಸುಮಾರು 15 ಜನರು ಗಂಭೀರ ಆರೋಗ್ಯ ಸಮಸ್ಯೆಗಳಿಗೆ ಗುರಿಯಾಗಿದ್ದಾರೆ. ಆದ್ದರಿಂದ ಈ ರೋಗಿಗಳನ್ನು ಕೂಡಲೇ ಚಿಕಿತ್ಸೆಗಾಗಿ ತಮ್ಮ ಸ್ವಂತ ಖರ್ಚಿನಲ್ಲಿ ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುವುದಾಗಿ ಭರವಸೆ ನೀಡಿದರು. ನಾನು ಶಾಸಕನಾಗುವುದಕ್ಕೂ ಮೊದಲೇ ಬಾಗೇಪಲ್ಲಿ ವಿಧಾನ ಸಭಾ ಕ್ಷೇತ್ರವನ್ನು ರೋಗ ಮುಕ್ತ ಕ್ಷೇತ್ರವನ್ನಾಗಿ ಮಾಡುತ್ತೇನೆ ಎಂದು ಭರವಸೆ ನೀಡಿದ್ದೆ. ಈ ಕ್ಷೇತ್ರವನ್ನು ರೋಗ ಮುಕ್ತ ಕ್ಷೇತ್ರವನ್ನಾಗಿಸುವುದೇ ನನ್ನ ಮುಖ್ಯ ಗುರಿಯಾಗಿದೆ ಎಂದ ಅವರು, ಕೆಲವೇ ದಿನಗಳಲ್ಲಿ ಆರೋಗ್ಯ ತಪಾಸಣಾ ಶಿಬಿರವನ್ನು ಏರ್ಪಡಿಸಲಾಗುವುದು ಎಂದು ತಿಳಿಸಿದರು. ಸ್ವೀಕರಿಸಿದ ಅರ್ಜಿಗಳನ್ನು ಕೂಲಂಕಷವಾಗಿ ಪರಿಶೀಲನೆ ನಡೆಸಿ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ಸಾರ್ವಜನಿಕರ ಸಮಸ್ಯೆಗಳಿಗೆ ಪರಿಹಾರ ಮಾಡುವುದಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಹೇಳಿದರು.
ಈ ಸಂದರ್ಭದಲ್ಲಿ ಮುಖಂಡರಾದ ಅಮರನಾಥರೆಡ್ಡಿ, ಶ್ರೀನಿವಾಸರೆಡ್ಡಿ, ರಘುನಾಥರೆಡ್ಡಿ, ಚೆಂಡೂರ್ ವೆಂಕಟೇಶ್, ಪ್ರಭಾಕರರೆಡ್ಡಿ ಮತ್ತಿತರರು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

