ಜಿಪಂ ಸಿಇಒ ಬಿ.ಎಸ್. ಶೇಖರಪ್ಪಗೆ ಬೀಳ್ಕೊಡುಗೆ
ಚಿಕ್ಕಬಳ್ಳಾಪುರ: ಕೊಡಗು ಜಿಲ್ಲಾಧಿಕಾರಿಯಾಗಿ ವರ್ಗಾವಣೆಗೊಂಡ ಚಿಕ್ಕಬಳ್ಳಾಪುರ ಜಿಪಂ ಸಿಇಒ ಆಗಿ ಕಾರ್ಯನಿರ್ವಹಿಸುತ್ತಿದ್ದ ಬಿ.ಎಸ್.ಶೇಖರಪ್ಪ ಅವರನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಿ ಬೀಳ್ಕೊಡಲಾಯಿತು.ನಗರದಲ್ಲಿ ಆಯೋಜಿಸಿದ್ದ ಸರಳ ಕಾರ್ಯಕ್ರಮದಲ್ಲಿ ಬಿ.ಎಸ್.ಶೇಖರಪ್ಪರವರು ಚಿಕ್ಕಬಳ್ಳಾಪುರ ಜಿಪಂ ಕಾರ್ಯ ನಿರ್ವಹಣಾಧಿಕಾರಿಯಾಗಿ ಕಾರ್ಯ ನಿರ್ವಹಿಸಿರುವ ವೈಖರಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಸನ್ಮಾನಿಸಲಾಯಿತು.
ವರ್ಗಾವಣೆ ಸಾಮಾನ್ಯ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಸುರೇಖಾ ವಿಜಯಪ್ರಕಾಶ್ ಮಾತನಾಡಿ, ಸರ್ಕಾರಿ ನೌಕರರಿಗೆ ವರ್ಗಾವಣೆ ವಿಷಯ ಸಾಮಾನ್ಯ ಸಂಗತಿಯಾದರೂ ಉತ್ತಮವಾಗಿ ಕಾರ್ಯ ನಿರ್ವಹಿಸಿರುವಂತಹವರು ಬೇರೆ ಕಡೆಗೆ ವರ್ಗಾವಣೆಯಾದಾಗ ಯಾರಿಗೆ ಆಗಲಿ ನೋವಾಗುತ್ತದೆ. ಈಗ ಅದೇ ಮನಸ್ಥಿತಿ ನಮ್ಮನ್ನು ಕಾಡುತ್ತಿದೆ ಎಂದರು. ಶೇಖರಪ್ಪ ಅಧಿಕಾರಿಗಳ ಸಮಸ್ಯೆ ತಿಳಿದುಕೊಂಡು ಬಗೆಹರಿಸುತ್ತಿದ್ದರು. ವಿವಿಧ ಇಲಾಖೆಗಳು ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡಿಕೊಂಡು ಪ್ರಗತಿ ಸಾಧಿಸುವುದರ ಬಗ್ಗೆ ಸಲಹೆ ನೀಡುತ್ತಿದ್ದರು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಬಿ.ಎಸ್.ಶೇಖರಪ್ಪ, ಜಿಲ್ಲೆಯ ಜನತೆ ಅಭಿವೃದ್ಧಿ ವಿಷಯದಲ್ಲಿ ನೀಡುತ್ತಿದ್ದ ಸಹಕಾರವನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಶಿಶು ಅಭಿವೃದ್ಧಿ ಯೋಜನಾಧಿಕಾರಿ, ಸಿಬ್ಬಂದಿ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

