ಕೋಲಾರ

'ಸರ್ಕಾರಿ ಶಾಲೆಗಳಲ್ಲಿ ಮೂಲ ಸೌಕರ್ಯ ಕಲ್ಪಿಸಿ'

Published On :

ಕೆಜಿಎಫ್:  ನಗರದ ಸರ್ಕಾರಿ ಬಾಲಕರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಥಳೀಯ ಸ್ಟೇಟ್ ಬ್ಯಾಂಕ್ ಆಫ್ ಮೈಸೂರು ಶಾಖೆ ವತಿಯಿಂದ ಉಚಿತ ಸೀಲಿಂಗ್ ಫ್ಯಾನ್ ವಿತರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಸಮುದಾಯ ಸೇವೆಯಡಿ ಸ್ಟೇಟ್ ಬ್ಯಾಂಕ್ ಆಫ್ ಮೈಸೂರು ಶಾಖೆ ವತಿಯಿಂದ ಆಯಾ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಬೇಕಾಗಿರುವ ಸೌಲಭ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಈ ವರ್ಷವೂ ಸರ್ಕಾರಿ ಶಾಲೆಗೆ 10 ಫ್ಯಾನ್ಗಳನ್ನು ವಿತರಿಸಲಾಯಿತು.
ಮುಖ್ಯ ಅತಿಥಿ ನಗರಸಭೆ ಪೌರಾಯುಕ್ತ ವಿ.ಬಾಲಚಂದರ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಈ ಹಿಂದೆ ಎಲ್ಲರೂ ಸರ್ಕಾರಿ ಶಾಲೆಗಳಲ್ಲೇ ವಿದ್ಯಾಭ್ಯಾಸ ಮಾಡುತ್ತಿದ್ದವರು ದೇಶದ ಉನ್ನತ ಸ್ಥಾನದಲ್ಲಿದ್ದಾರೆ. ಆದರೆ, ಈಗ ಸರ್ಕಾರಿ ಶಾಲೆಗಳಲ್ಲಿ ಸರಿಯಾದ ಮೂಲ ಸೌಕರ್ಯವಿಲ್ಲದ ಕಾರಣ ಮಕ್ಕಳನ್ನು ಖಾಸಗಿ ಶಾಲೆಗಳಲ್ಲಿ ಸೇರಿಸುವಂತಹ ಪರಿಸ್ಥಿತಿ ಉಂಟಾಗಿದೆ.
 ಆದ್ದರಿಂದ ಬಡ ಕುಟುಂಬದ ಮಕ್ಕಳು ಮತ್ತು ಗ್ರಾಮೀಣ ಮಕ್ಕಳನ್ನು ದೇಶದ ಮುಂದಿನ ಪೀಳಿಗೆಯ ನೇತಾರರನ್ನಾಗಿ ಮಾಡಬೇಕಾಗಿರುವುದು ನಮ್ಮೆಲ್ಲರ ಕರ್ತವ್ಯ. ಈ ನಿಟ್ಟಿನಲ್ಲಿ ಸರ್ಕಾರ ಹಾಗೂ ಸ್ಟೇಟ್ ಬ್ಯಾಂಕ್ ಆಫ್ ಮೈಸೂರು ಇಂತಹ ಹಲವಾರು ಸಂಸ್ಥೆಗಳು ಸರ್ಕಾರಿ ಶಾಲೆಗಳಲ್ಲಿ ಓದುವ ಮಕ್ಕಳಿಗೆ ಬೇಕಾಗಿರುವ ಮೂಲ ಸೌಕರ್ಯಗಳನ್ನು ಒದಗಿಸಲು ಮುಂದಾಗಬೇಕಿದೆ ಎಂದರು.
ಬೇಸಿಗೆ ಕಾಲದಲ್ಲಿ ಕೊಠಡಿಗಳಲ್ಲಿ ತಾಪಮಾನ ಹೆಚ್ಚಾಗುವುದರಿಂದ ಶಾಲಾ ಮಕ್ಕಳಿಗೆ ಹಲವಾರು ಸಮಸ್ಯೆ ಉಂಟಾಗುತ್ತಿತ್ತು. ಇದೀಗ ಎಸ್ಬಿಎಂ ಬ್ಯಾಂಕ್ ವತಿಯಿಂದ ಕೊಡುಗೆಯಾಗಿ ನೀಡಲಾದ 10 ಫ್ಯಾನ್ಗಳಿಂದ ಮಕ್ಕಳಿಗೆ ಉತ್ತಮ ರೀತಿ ಸಹಕಾರಿಯಾಗಲಿದೆ ಎಂದು ತಿಳಿಸಿದರು.
ಅಧ್ಯಕ್ಷತೆ ವಹಿಸಿದ್ದ ಸ್ಟೇಟ್ ಬ್ಯಾಂಕ್ ಆಫ್ ಮೈಸೂರು ಕೆಜಿಎಫ್ ಶಾಖೆ ವ್ಯವಸ್ಥಾಪಕ ವಿಕ್ರಮ್ಕುಂದನ್ ಮಾತನಾಡಿ, ಸಮಾಜದ ಒಳಿತಿಗಾಗಿ ಎಸ್ಬಿಎಂ ಬ್ಯಾಂಕ್ ವತಿಯಿಂದ ಪ್ರತಿವರ್ಷ ಕ್ಷೇತ್ರದಲ್ಲಿರುವ ಸರ್ಕಾರಿ ಶಾಲೆಗಳಿಗೆ ಸಸಿಗಳನ್ನು ನೆಡುವುದು, ಡೆಸ್ಕ್ಗಳು, ಟೇಬಲ್ಗಳು, ಚೇರ್ಗಳು ಮುಂತಾದ ಅಗತ್ಯ ಸೌಲಭ್ಯಗಳನ್ನು ನೀಡುವ ಮೂಲಕ ಸೇವೆ ಸಲ್ಲಿಸುತ್ತಿದೆ.  
ಅದರಂತೆ ಈ ವರ್ಷವೂ ಸಹ ಸರ್ಕಾರಿ ಬಾಲಕರ ಹಿರಿಯ ಪ್ರಾಥಾಮಿಕ ಶಾಲೆಗೆ 10 ಉಷಾ ಸೀಲಿಂಗ್ ಫ್ಯಾನ್ ನೀಡಲಾಗಿದೆ ಎಂದರು.
ಮುಖ್ಯ ಶಿಕ್ಷಕಿ ವತ್ಸಲ ಮಾತನಾಡಿ, ಸರ್ಕಾರಿ ಶಾಲೆಗೆ ಬರುವ ಮಕ್ಕಳಿಗೆ ಸರ್ಕಾರ ಸರಿಯಾದ  ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕಾಗಿದೆ. ಎಸ್ಬಿಎಂ ಬ್ಯಾಂಕ್ ವ್ಯವಸ್ಥಾಪಕರು ಶಾಲೆಗೆ 10 ಫ್ಯಾನ್ಗಳನ್ನು ನೀಡಿದ್ದು, ಮಕ್ಕಳಿಗೆ ಹೆಚ್ಚು ಅನುಕೂಲವಾಗಲಿದೆ ಎಂದರು.
ಎಸ್ಬಿಎಂ ಬ್ಯಾಂಕ್ನ ಅಧಿಕಾರಿ ಎನ್.ಆರ್. ಪುರುಷೋತ್ತಮ್, ಗ್ರಾಹಕರಾದ ಬಾಲಕೃಷ್ಣ, ಸೇರಿದಂತೆ ಶಾಲೆಯ ಇತರೆ ಶಿಕ್ಷಕ ಶಿಕ್ಷಕಿಯರು ವಿದ್ಯಾರ್ಥಿಗಳು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.