ಜಿಲ್ಲಾ ಬಿಜೆಪಿ ನೂತನ ಅಧ್ಯಕ್ಷರಾಗಿ ಕೃಷ್ಣಾರೆಡ್ಡಿ?
ಕೋಲಾರ: ಜಿಲ್ಲೆಯ ಬಿಜೆಪಿ ನೂತನ ಜಿಲ್ಲಾಧ್ಯಕ್ಷರ ಆಯ್ಕೆಯ ಪ್ರಕ್ರಿಯೆಯನ್ನು ಅಂತ್ಯಗೊಳಿಸಿರುವ ಪಕ್ಷದ ರಾಜ್ಯ ವರಿಷ್ಠರು ಭಾನುವಾರ ಸರ್ವ ಸಮ್ಮತ ಅಧ್ಯಕ್ಷರ ಹೆಸರನ್ನು ಪ್ರಕಟಿಸಲು ನಿರ್ಧರಿಸಿದ್ದಾರೆ.
ಹಾಲಿ ಜಿಲ್ಲಾಧ್ಯಕ್ಷ ಎನ್.ಲಕ್ಷ್ಮಯ್ಯ ಅಧಿಕಾರದ ಅವಧಿ ಮುಕ್ತಾಯಗೊಂಡಿರುವ ಹಿನ್ನಲೆಯಲ್ಲಿ, ಪಕ್ಷವನ್ನು ಜಿಲ್ಲೆಯಲ್ಲಿ ಸಮರ್ಥವಾಗಿ ಸಂಘಟಿಸಬಲ್ಲ ಮುಖಂಡನಿಗಾಗಿ ಶೋಧನೆ ನಡೆಸಿದ್ದ ಪಕ್ಷದ ವರಿಷ್ಠರು ಮಾಲೂರು ತಾಲೂಕಿನಲ್ಲಿ ಬಿಜೆಪಿಗೆ ಶಕ್ತಿ ತುಂಬುವ ಮೂಲಕ ಜಿಲ್ಲೆಯ ಇನ್ನಿತರ ಕಡೆಗಳಲ್ಲೂ ಸಂಘಟನೆ ಮಾಡುವ ಉದ್ದೇಶದಿಂದ ಮಾಲೂರು ತಾಲೂಕಿನ ಎಪಿಎಂಸಿ ಅಧ್ಯಕ್ಷರೂ, ಅದೇ ತಾಲೂಕಿನ ಬಿಜೆಪಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದ ಕೃಷ್ಣಾರೆಡ್ಡಿಯವರಿಗೆ ಪಕ್ಷ ಸಂಘಟನೆಯ ಸಾರಥ್ಯ ವಹಿಸಲು ಒಲವು ತೋರಿದ್ದು, ನಾಳೆ ಅಂತಿಮ ನಿರ್ಧಾರ ಪ್ರಕಟವಾಗುವ ಸಾಧ್ಯತೆಗಳಿವೆ.
ಆಕಾಂಕ್ಷಿಗಳು: ಇವರಲ್ಲದೆ, ಬಿಜೆಪಿ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಹಾಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನೀಲಿ ಕೆ.ಜೈಶಂಕರ್, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಓಂಶಕ್ತಿ ಚಲಪತಿ, ಪ್ರಧಾನ ಕಾರ್ಯದರ್ಶಿ ಕನ್ನತ್ತ ಮುನಿವೆಂಕಟಪ್ಪ, ಶ್ರೀನಿವಾಸಪುರ ತಾಲೂಕಿನ ಜಯರಾಮರೆಡ್ಡಿ, ಬಂಗಾರಪೇಟೆಯ ನಾಗಪ್ರಕಾಶ್, ಖಜಾಂಚಿ ಸತ್ಯನಾರಾಯಣರಾವ್, ಪ್ರಮೀಳಾ ಮಲ್ಲಿಕಾರ್ಜುನ್ ಸೇರಿದಂತೆ 11 ಮಂದಿಯ ಹೆಸರು ಕೇಳಿ ಬಂದಿದ್ದು, ಪಕ್ಷದ ವರಿಷ್ಠರು ಒಕ್ಕಲಿಗರೊಬ್ಬರಿಗೆ ಅವಕಾಶ ಕಲ್ಪಿಸುವ ಉದ್ದೇಶ ಹೊಂದಿದ್ದಾರೆ ಎನ್ನಲಾಗಿದೆ.
ವಿಧಾನಪರಿಷತ್ ಸದಸ್ಯರಾದ ವೈ.ಎ.ನಾರಾಯಣಸ್ವಾಮಿ, ಡಿ.ಎಸ್.ವೀರಯ್ಯ ಇನ್ನಿತರರು ಒಕ್ಕಲಿಗರಿಗೆ ಪ್ರಾಮುಖ್ಯತೆ ನೀಡುವ ಮೂಲಕ ಜಿಲ್ಲೆಯಲ್ಲಿ ಕುಸಿದಿರುವ ಪಕ್ಷಕ್ಕೆ ಶಕ್ತಿ ನೀಡಬೇಕೆಂದು ಬಯಸಿದ್ದಾರೆಂದು ಗೊತ್ತಾಗಿದೆ.
ಭಾನುವಾರ ಕೋಲಾರದ ಕೆಇಬಿ ಸಮುದಾಯ ಭವನದಲ್ಲಿ ಜಿಲ್ಲಾ ಬಿಜೆಪಿ ಸಭೆ ಕರೆಯಲಾಗಿದ್ದು, ಇಲ್ಲಿ ನೂತನ ಅಧ್ಯಕ್ಷರ ಹೆಸರು ಪ್ರಕಟಿಸಲಾಗುತ್ತದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

