ಕೋಲಾರ

ತಾಲೂಕು ಅಧಿಕಾರಿಗಳ ನಿರ್ಲಕ್ಷ್ಯ: ದಲಿತ ಮುಖಂಡರ ಆರೋಪ

Published On :

ಚಿಕ್ಕಬಳ್ಳಾಪುರ: ತಾಲೂಕು ಮಟ್ಟದಲ್ಲಿ ದಲಿತರ ಕುಂದು ಕೊರತೆ ಆಲಿಸುವ ಸಭೆಗಳನ್ನು ಬೇಕಾಬಿಟ್ಟಿ ಕರೆಯಲಾಗುತ್ತಿದೆ. ನಿರ್ಲಕ್ಷ್ಯ ಧೋರಣೆಯಿಂದ ಸಭೆಗಳಿಗೆ ಸಮರ್ಪಕವಾಗಿ ಅಧಿಕಾರಿಗಳೇ ಬರುವುದಿಲ್ಲ. ಸಮಸ್ಯೆಗಳ ಪಟ್ಟಿ ಮಾಡಿಕೊಂಡು ಆಗಮಿಸುವ ದಲಿತ ಮುಖಂಡರಿಗೆ ದಿಢೀರನೇ ಸಭೆ ಮುಂದೂಡಿರುವ ಬಗ್ಗೆಯೂ ತಿಳಿಯುವುದಿಲ್ಲ. ಹೀಗೆ ದಲಿತರನ್ನು ಅಧಿಕಾರಿಗಳು ಸತಾಯಿಸುತ್ತಿದ್ದಾರೆ ಎಂದು ದಲಿತ ಮುಖಂಡರು ಜಿಲ್ಲಾಡಳಿತದ ಮುಂದೆ ತಮ್ಮ ಅಳಲು ತೋಡಿಕೊಂಡಿದ್ದಾರೆ.  
ಶನಿವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪರಿಶಿಷ್ಟ ಜಾತಿ ವರ್ಗದ ಮೇಲಿನ ದೌರ್ಜನ್ಯ ನಿಯಂತ್ರಿಸಲು ಜಿಲ್ಲಾ ಜಾಗೃತಿ ಉಸ್ತುವಾರಿ ಸಮಿತಿ ಸಭೆಯಲ್ಲಿ ಭಾಗವಹಿಸಿದ ಬಹುತೇಕ ಮುಖಂಡರು ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆಗೆ ಅಸಮಾಧಾನ ವ್ಯಕ್ತಪಡಿಸಿದರು.
ಅಧಿಕಾರಿಗಳ ವಿರುದ್ಧ ಆರೋಪ: ದಲಿತ ಮುಖಂಡ ಕೆ.ಸಿ.ರಾಜಾಕಾಂತ್ ಮಾತನಾಡಿ, ಸ್ಮಶಾನಕ್ಕೆ ಜಾಗದ ಸಮಸ್ಯೆಯಿಂದ ಜಿಲ್ಲೆಯ ಹಲವೆಡೆ ದಲಿತರು ಶವ ಸಂಸ್ಕಾರಕ್ಕೆ ಪರದಾಡುತ್ತಿದ್ದಾರೆ. ಜಿಲ್ಲಾಡಳಿತ ದಲಿತರಿಗಾಗಿ ಪ್ರತ್ಯೇಕ ಸ್ಮಶಾನಕ್ಕಾಗಿ ಜಾಗವನ್ನು ಸಮರ್ಪಕವಾಗಿ ಗುರುತಿಸಿಲ್ಲ. ಈ ಹಿನ್ನೆಲೆಯಲ್ಲಿ ಅಂತ್ಯ ಸಂಸ್ಕಾರಕ್ಕೆ ತೊಂದರೆಯಾದಾಗೆಲ್ಲಾ ಶವವನ್ನು ಸಂಬಂಧಪಟ್ಟ ಕಚೇರಿಗಳಿಗೆ ತಂದು ಅನೇಕ ಬಾರಿ ಪ್ರತಿಭಟನೆ ನಡೆಸಲಾಗಿದೆ. ಆಗ ಕೇವಲ ತಾತ್ಕಾಲಿಕ ಭರವಸೆ ಸಿಗುತ್ತದೆಯಾದರೂ ಸಹ ಕೊನೆಗೆ ಸಮಸ್ಯೆ ಬಗೆಹರಿಯವುದಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು.ಅಧಿಕಾರಿಗಳ ಭರವಸೆ: ಜಿಲ್ಲೆಯಲ್ಲಿನ ಪರಿಶಿಷ್ಟ ಜಾತಿ, ಪಂಗಡದ ದೌರ್ಜನ್ಯ ಪ್ರಕರಣಗಳನ್ನು ಕಾನೂನಿನಡಿಯಲ್ಲಿ ಪೊಲೀಸ್ ಹಾಗೂ ಸಂಬಂಧಿಸಿದ ಇಲಾಖೆಗಳ ಸಹಯೋಗದಲ್ಲಿ ಶೀಘ್ರವೇ ಇತ್ಯರ್ಥಪಡಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಆರ್.ವಿಶಾಲ್ ಭರವಸೆ ನೀಡಿದರು.
ಚಿಕ್ಕಬಳ್ಳಾಪುರ ಶಾಸಕ ಡಾ.ಕೆ.ಸುಧಾಕರ್, ಹಿರಿಯ ವಕೀಲ ದೊರೆಸ್ವಾಮಿ, ಉಪ ವಿಭಾಗಾಧಿಕಾರಿ  ಕೆ.ಟಿ. ಶಾಂತಲಾ, ಜಿಪಂ ಯೋಜನಾ ನಿರ್ದೇಶಕ ವೆಂಕಟರಮಣಪ್ಪ, ಪ್ರಭಾರಿ ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಕೃಷ್ಣಪ್ಪ, ದಲಿತ ಮುಖಂಡರಾದ ಸು.ಧಾ.ವೆಂಕಟೇಶ್, ಬಿ.ಎನ್.ಗಂಗಾಧರ್ ಸೇರಿದಂತೆ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.