ನಾಳೆ ಸರ್ಕಾರಿ ನೌಕರಸಂಘದ ಚುನಾವಣೆ
ಕೋಲಾರ: ಜಿಲ್ಲಾ ಸರ್ಕಾರಿ ನೌಕರರ ಸಂಘದ ಜಿಲ್ಲಾ ಕಾರ್ಯಕಾರಿ ಸಮಿತಿಗೆ ಜು. 22 ರಂದು ಚುನಾವಣೆ ನಡೆಯಲಿದೆ. ನಗರದ ಸರ್ಕಾರಿ ಬಾಲಕರ ಜೂನಿಯರ್ ಕಾಲೇಜಿನಲ್ಲಿ ಬೆಳಗ್ಗೆ 11 ರಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದ್ದು, ಮತದಾರರು ಗುರುತಿನ ಚೀಟಿ ತರಬೇಕೆಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.ಸಮಾಜ ಕಲ್ಯಾಣ-ಹಿಂದುಳಿದ ಮತ್ತು ಅಲ್ಪಸಂಖ್ಯಾತರ ಇಲಾಖೆ, ಕರ್ನಾಟಕ ಸಹಕಾರ ವಿಮಾ ಇಲಾಖೆ, ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಎನ್ಸಿಸಿ ಮತ್ತು ಕಾರಗೃಹ ಈ ಇಲಾಖೆಗಳಿಂದ 9 ಸ್ಥಾನಗಳಿಗೆ 23 ಮಂದಿ ಕಣದಲ್ಲಿ ಉಳಿದಿದ್ದು,1530 ಮಂದಿ ಮತದಾರರಿದ್ದಾರೆ, 8 ಮತಗಟ್ಟೆ ವ್ಯವಸ್ಥೆ ಮಾಡಲಾಗಿದ್ದು, 16 ಮಂದಿ ಮತಗಟ್ಟೆ ಅಧಿಕಾರಿಗಳಾಗಿ ಕಾರ್ಯನಿರ್ವಹಿಸುವರು. ಪ್ರತಿನಿಧಿಗಳ ಚುನಾವಣಾ ಅಧಿಕಾರಿಗಳಾಗಿ ನಿವೃತ್ತ ಮುಖ್ಯ ಶಿಕ್ಷಕ ನರಸಿಂಹಯ್ಯ ಹಾಗೂ ಸಹಾಯಕ ಚುನಾವಣಾಧಿಕಾರಿಯಾಗಿ ಎಚ್.ಎಂ.ರಾಮಚಂದ್ರಪ್ಪ ಕಾರ್ಯನಿರ್ವಹಿಸಲಿದ್ದಾರೆ.
26 ರಂದು ಕವಿ, ಕಾವ್ಯ, ಚುಟುಕು
ಚಿಂತಾಮಣಿ: ತಾಲೂಕು ಕನ್ನಡ ಸಾಹಿತ್ಯ ವೇದಿಕೆ ಹಾಗೂ ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ನಗರದ ಮಹಾತ್ಮ ಗಾಂಧಿ ಬಾಲಕರ ಪ್ರೌಢಶಾಲೆಯಲ್ಲಿ ಶಾಲಾ ಅಂಗಳದಲ್ಲಿ ಕವಿ, ಕಾವ್ಯ, ಚುಟುಕು ಸಿಂಚನ ಹಾಗೂ ಕನ್ನಡ ಸ್ವಚ್ಛ ಕನ್ನಡ ಕಾರ್ಯಕ್ರಮವನ್ನು ಜು.26ರಂದು ಮಧ್ಯಾಹ್ನ 1 ಗಂಟೆಗೆ ಏರ್ಪಡಿಸಲಾಗಿದೆ ಎಂದು ಚುಸಾಪ ಪ್ರಧಾನ ಸಂಚಾಲಕರಾದ ಎಸ್.ಸಿ. ಶ್ರೀನಿವಾರೆಡ್ಡಿ ತಿಳಿಸಿದ್ದಾರೆ. ಮಹಾತ್ಮ ಗಾಂಧಿ ಬಾಲಕರ ಸರ್ಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕ ಕೆ.ಎನ್.ರಮಣಾರೆಡ್ಡಿ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಲಿದೆ. ಪ್ರಾಂಶುಪಾಲ ಜನಾರ್ದನ್ ಮುಖ್ಯ ಅತಿಥಿಗಳಾಗಿ ಆಗಮಿಸುವರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

