23ರಿಂದ ನಾಗರಿಕ ಬಂದೂಕು ತರಬೇತಿ
ಕೆಜಿಎಫ್: ಕೆಜಿಎಫ್ ಪೊಲೀಸ್ ಜಿಲ್ಲೆಯ ಬಂಗಾರಪೇಟೆ, ಕೆಜಿಎಫ್ ಕ್ಷೇತ್ರಗಳ ನಾಗರಿಕರ ಆತ್ಮರಕ್ಷಣೆಗಾಗಿ ಉಚಿತ ಬಂದೂಕು ತರಬೇತಿಯನ್ನು ಜು.23 ರಿಂದ ಏರ್ಪಡಿಸಲಾಗಿದೆ ಎಂದು ಕೆಜಿಎಫ್ ಪೊಲೀಸ್ ವರಿಷ್ಠಾಧಿಕಾರಿ ಡಾ.ರೋಹಿಣಿ ಕಟೋಚ್ ಸಫೆಟ್ ಪ್ರಕಟಣೆಯಲ್ಲಿ ತಿಳಿಸಿದರು. ಸಮಸ್ತ ನಾಗರಿಕರ ಹಿತದೃಷ್ಟಿಯಿಂದ ಕೆಜಿಎಫ್ ಪೊಲೀಸ್ ಇಲಾಖೆಯು ಬಂದೂಕು ತರಬೇತಿಯನ್ನು ಜು.23 ರಿಂದ 29ರ ವರೆಗೆ ನಡೆಯಲಿದ್ದು ಮೊದಲನೇ ತಂಡಕ್ಕೆ ಚಾಂಪಿಯನ್ರೀಫ್ನ ಡಿಎಆರ್ ಕೇಂದ್ರ ಸ್ಥಾನದಲ್ಲಿ ಪ್ರತಿನಿತ್ಯ ಬೆಳಗ್ಗೆ 8 ರಿಂದ 9 ಗಂಟೆಯ ವರೆಗೆ ನಡೆಸಲಾಗುವುದ ರಿಂದ ಇದರ ಸದುಪಯೋಗ ಪ್ರತಿಯೊಬ್ಬರಿಗೂ ಅತ್ಯವಶ್ಯಕವಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಡಾ.ರೋಹಿಣಿಕಟೋಚ್ ಸಫೆಟ್ ತಿಳಿಸಿದ್ದಾರೆ. ಬಂಗಾರಪೇಟೆ ತಾಲೂಕಿನ ಆಸಕ್ತಿ ನಾಗರಿಕರು ತಂತಮ್ಮ ಸರಹದ್ದು ಪೊಲೀಸ್ ಠಾಣೆಗಳಲ್ಲಿ ಗುಣ ನಡೆತೆ ಪ್ರಮಾಣ ಪತ್ರವನ್ನು ಪಡೆದು ಜು.22ರ ಒಳಗಾಗಿ ಸಶಸ್ತ್ರ ಪೊಲೀಸ್ ನಿರೀಕ್ಷಕರು ಡಿಎಆರ್ ಕೆಜಿಎಫ್ ಇವರಲ್ಲಿ ಅರ್ಜಿಯನ್ನು ಸಲ್ಲಿಸುವಂತೆ ಸೂಚಿಸಿದ್ದು ಹೆಚ್ಚಿನ ವಿವರಗಳಿಗೆ ಪೊಲೀಸ್ ಅಧಿಕಾರಿಗಳನ್ನು ಅಥವಾ ಡಿಎಆರ್ನ ಆರ್ಪಿಐ ಅವರನ್ನು ಸಂಪರ್ಕಿಸಲು ತಿಳಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

