ಕೋಲಾರ

26ರಂದು ಕವಿ, ಕಾವ್ಯ, ಕಾರ್ಯಕ್ರಮ

Published On :

ಚಿಂತಾಮಣಿ:  ತಾಲೂಕು ಕನ್ನಡ ಸಾಹಿತ್ಯ ವೇದಿಕೆ ಹಾಗೂ ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ನಗರದ ಮಹಾತ್ಮ ಗಾಂಧಿ ಬಾಲಕರ ಪ್ರೌಢಶಾಲೆಯಲ್ಲಿ ಶಾಲಾ ಅಂಗಳದಲ್ಲಿ ಕವಿ, ಕಾವ್ಯ, ಚುಟುಕು ಸಿಂಚನ ಹಾಗೂ ಕನ್ನಡ ಸ್ವಚ್ಛ ಕನ್ನಡ ಕಾರ್ಯಕ್ರಮವನ್ನು ಜು.26ರಂದು ಮಧ್ಯಾಹ್ನ 1 ಗಂಟೆಗೆ ಏರ್ಪಡಿಸಲಾಗಿದೆ ಎಂದು ಚುಸಾಪ ಪ್ರಧಾನ ಸಂಚಾಲಕರಾದ ಎಸ್.ಸಿ. ಶ್ರೀನಿವಾರೆಡ್ಡಿ ತಿಳಿಸಿದ್ದಾರೆ. ಮಹಾತ್ಮ ಗಾಂಧಿ ಬಾಲಕರ ಸರ್ಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕ ಕೆ.ಎನ್.ರಮಣಾರೆಡ್ಡಿ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಲಿದೆ. ಬಾಲಕರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಜನಾರ್ದನ್ ಅತಿಥಿಗಳಾಗಿ ಆಗಮಿಸುವರು.  ಚು.ಸಾ.ಪ. ಜಿಲ್ಲಾಧ್ಯಕ್ಷ ಎಂ.ಆರ್. ನಾಗರಾಜರಾವ್, ಸಾಹಿತಿಗಳು, ಕಲಾವಿದರು ಭಾಗವಹಿಸಲಿದ್ದಾರೆ ಎಂದು ವಿವರಿಸಿದ್ದಾರೆ.
ಮಾಜಿ ಶಾಸಕರಿಗೆ ಹಾಲಿ ಶಾಸಕರ ತರಾಟೆ
ಚಿಂತಾಮಣಿ: ಕುಡಿಯುವ ನೀರಿನ ವಿಚಾರದಲ್ಲಿ ಜನರನ್ನು ಎತ್ತಿಕಟ್ಟಿ ಕ್ಷುಲ್ಲಕ ರಾಜಕಾರಣ ಮಾಡುವವರು ವಾಸ್ತವಾಂಶ ಅರ್ಥಮಾಡಿಕೊಳ್ಳಬೇಕು ಎಂದು ಮಾಜಿ ಶಾಸಕ ಸುಧಾಕರ್ ವಿರುದ್ಧ ಜೆಡಿಎಸ್ ಶಾಸಕ ಜೆ.ಕೆ.ಕೃಷ್ಣಾರೆಡ್ಡಿ ಪರೋಕ್ಷ ವಾಗ್ದಾಳಿ ನಡೆಸಿದರು.ಪಟ್ಟಣದ ಹೊರ ವಲಯದ ಬೂರಗಮಾಕಲಹಳ್ಳಿಯ ಸಂಜೀವ ಸಮುದಾಯ ಭವನದಲ್ಲಿ ತಾಲೂಕು ಜೆಡಿಎಸ್ ಘಟಕ ಏರ್ಪಡಿಸಿದ್ದ ಅಭಿನಂದನಾ ಸಮಾವೇಶದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಎರಡು ದಿನಗಳ ಹಿಂದೆ ನಾರಾಯಣಹಳ್ಳಿ ಗ್ರಾಮದಲ್ಲಿ ಗ್ರಾಮಸ್ಥರ ಒತ್ತಾಯದ ಮೇರೆಗೆ ಕುಡಿಯುವ ನೀರು ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಕೊಳವೆಬಾವಿ ಕೊರೆಯಲು ಮುಂದಾದಾಗ ಮಾಜಿ ಶಾಸಕ ಸುಧಾಕರ್ ಕುಮ್ಮಕ್ಕಿನಿಂದ ಮುಗ್ಧ ಜನರನ್ನು ಎತ್ತಿಕಟ್ಟಿ ಕುಡಿಯುವ ನೀರಿನಲ್ಲಿ ರಾಜಕಾರಣ ಮಾಡುತ್ತಿರುವ ನಿಮ್ಮ ಧೋರಣೆ ಸರಿಪಡಿಸಿಕೊಳ್ಳಿ ಎಂದು ಶಾಸಕ ಜೆ.ಕೆ.ಕೃಷ್ಣಾರೆಡ್ಡಿ ಪರೋಕ್ಷವಾಗಿ ಮಾಜಿ ಶಾಸಕ ಸುಧಾಕರ್ ವಿರುದ್ಧ ಆರೋಪಿಸಿದರು. ಆ.5 ರಿಂದ ಒಂದು ಪಂಚಾಯ್ತಿ ಮುಖಾಂತರ ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರವಾಸ ಕೈಗೊಂಡು ಪಕ್ಷಭೇದ ಮರೆತು ಕುಡಿಯುವ ನೀರು, ರಸ್ತೆ ಸೇರಿದಂತೆ ವಿವಿಧ ಸಮಸ್ಯೆಗಳ ಬಗ್ಗೆ ಜೆಡಿಎಸ್ ಮುಖಂಡರ ಜೊತೆ  ತಾನು ಪ್ರವಾಸ ಕೈಗೊಳ್ಳುವುದಾಗಿ ಸಭೆಯಲ್ಲಿ ಕಾರ್ಯಕರ್ತರಿಗೆ ಆತ್ಮಸ್ಥೈರ್ಯ ತುಂಬಿದರು.  ಮತದಾರ ಪ್ರಭುಗಳು ನನ್ನನ್ನು ಗೆಲ್ಲಿಸಲು ಸಹಕರಿಸಿದ ಎಲ್ಲಾ ಜೆಡಿಎಸ್ ಕಾರ್ಯಕರ್ತರು ಹಾಗೂ ಗೆಲವಿಗೆ ಪರೋಕ್ಷವಾಗಿ ಕಾರಣರಾದವರಿಗೆ ಕೃತಜ್ಞತೆ ಸಲ್ಲಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.