ಚಿಕ್ಕಬಳ್ಳಾಪುರದಲ್ಲೂ ಡಿಪ್ಲೋಮೊ ವಿದ್ಯಾರ್ಥಿಗಳ ಪ್ರತಿಭಟನೆ
ಚಿಕ್ಕಬಳ್ಳಾಪುರ: ಡಿಪ್ಲೋಮೊ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಪರೀಕ್ಷೆಗಳಲ್ಲಿ ಈ ಹಿಂದೆ ಇದ್ದಂತೆ ಕ್ಯಾರಿ ಓವರ್ ಪದ್ದತಿಯನ್ನು ಕೂಡಲೇ ಜಾರಿಗೊಳಿಸಬೇಕು ಎಂದು ಎಸ್ಎಫ್ಐ ಸಂಘಟನೆ ಒತ್ತಾಯಿಸಿದೆ. ನಗರದ ಶಿಡ್ಲಘಟ್ಟ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಭಾರತ ವಿದ್ಯಾರ್ಥಿ ಫೆಡರೇಷನ್ ಜಿಲ್ಲಾ ಘಟಕ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕ್ಯಾರಿ ಓವರ್ ಪದ್ದತಿ ಜಾರಿಗೆ ತರುವುದರ ಬಗ್ಗೆ ಒತ್ತಿ ಹೇಳಿತು. ಡಿಪ್ಲೋಮಾ ಪರೀಕ್ಷೆಯಲ್ಲಿ ಕ್ಯಾರಿ ಓವರ್ ಪದ್ಧತಿ ತೆಗೆದು ಹಾಕಿರುವುದರಿಂದ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಬೇಕಾದ ವಾತಾವರಣ ನಿರ್ಮಾಣವಾಗುತ್ತಿದೆ. ಇಂತಿಷ್ಟು ವಿಷಯಗಳಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ವರ್ಷಕ್ಕೆ ದಾಖಲಾತಿ ನೀಡದೆ, ಇರುವುದರಿಂದ ಮನೆಗಳಲ್ಲಿ ಉಳಿದುಕೊಳ್ಳಬೇಕಾದಾಗ ವಿದ್ಯಾರ್ಥಿಗಳು ಶಿಕ್ಷಣದಿಂದ ದೂರ ಉಳಿಯುತ್ತಾರೆ.ಈ ಹಿನ್ನೆಲೆಯಲ್ಲಿ ಇಂತಿಷ್ಟು ವಿಷಯಗಳನ್ನು ಉತ್ತೀರ್ಣರಾಗಬೇಕೆಂಬ ನಿಯಮವನ್ನು ಕೈ ಬಿಟ್ಟು ಕ್ಯಾರಿ ಓವರ್ ಪದ್ದತಿಯನ್ನು ಜಾರಿಗೊಳಿಸಿ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಬೇಕು. ಡಿಪ್ಲೋಮಾದಲ್ಲೂ ಪದವಿ ಪರೀಕ್ಷೆ ಮಾದರಿಯಲ್ಲಿ ಪರೀಕ್ಷೆಯನ್ನು ನಡೆಸಬೇಕೆಂದು ಒತ್ತಾಯಿಸಿತು.
ಎಸ್ಎಫ್ಐ ಜಿಲ್ಲಾ ಸಂಚಾಲಕ ಕುಂದಲಗುರ್ಕಿ ಮುನೀಂದ್ರ, ವಿದ್ಯಾರ್ಥಿ ಮುಖಂಡರಾದ ರವಿ, ಸುದರ್ಶನ್, ಶಿವಪ್ಪ, ಈಶ್ವರ್, ಸೋನಿ ಸೇರಿದಂತೆ ಮುಂತಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

