ಜಿಲ್ಲಾಸ್ಪತ್ರೆಗೆ ವಿಶ್ವ ಆರೋಗ್ಯ ಸಂಸ್ಥೆ ತಂಡ ಭೇಟಿ
ಕೋಲಾರ: ವಿಶ್ವ ಆರೋಗ್ಯ ಸಂಸ್ಥೆಯ ಪ್ರಾದೇಶಿಕ ಸಲಹೆಗಾರ್ತಿ ಡಾ.ಕ್ಯಾಥಲೀನ್ ಎ.ಹಾಲೋವೆ ಇಲ್ಲಿನ ಜಿಲ್ಲಾ ಎಸ್ಎನ್ಆರ್ ಆಸ್ಪತ್ರೆಗೆ ಭೇಟಿ ನೀಡಿ ಅಭಿವೃದ್ಧಿ ಕಾರ್ಯ ಪರಿಶೀಲಿಸಿದರು.
ಶನಿವಾರ ಮಧ್ಯಾಹ್ನ ಆಸ್ಪತ್ರೆಗೆ ಭೇಟಿ ನೀಡಿದ್ದ ಅವರು, ಜಿಲ್ಲೆಯಲ್ಲಿ ಜನತೆಗೆ ಎದುರಾಗುವ ವೈದ್ಯಕೀಯ ಸಮಸ್ಯೆಗಳು, ಒದಗಿಸಬೇಕಾದ ಔಷಧಿಗಳ ಕುರಿತು ಮಾಹಿತಿ ಪಡೆದುಕೊಂಡರು.
ಜಿಲ್ಲಾಸ್ಪತ್ರೆ ಹಾಗೂ ಜಿಲ್ಲೆಯ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಅಗತ್ಯವಾದ ಔಷಧಿಗಳ ಪ್ರಮಾಣ, ಗುಣಮಟ್ಟ, ಬಳಕೆ ಪ್ರಮಾಣ, ಬೇಡಿಕೆ ಕುರಿತು ಜಿಲ್ಲಾಸ್ಪತ್ರೆಯ ಪ್ರಭಾರಿ ಶಸ್ತ್ರ ಚಿಕಿತ್ಸಕ ಡಾ.ಎಸ್.ಜಿ.ನಾರಾಯಣಸ್ವಾಮಿ, ಪ್ರಭಾರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಶಶಿಕಾಂತ್ ದಾಸ್ ಅವರಿಂದ ಮಾಹಿತಿ ಪಡೆದುಕೊಂಡರು.ಜಿಲ್ಲೆಯಲ್ಲಿ ರೋಗಿಗಳಿಗೆ ಅಗತ್ಯವಾದ ಇತರೆ ಔಷಧಿಗಳ ಕುರಿತು ಪರಿಶೀಲಿಸಿದ ಅವರು, ಈ ಕುರಿತು ರಾಜ್ಯ ಸರ್ಕಾರಕ್ಕೆ ಶಿಫಾರಸ್ಸು ಮಾಡುವುದಾಗಿ ತಿಳಿಸಿದರು.
ಸಾರ್ವಜನಿಕರಿಗೆ ಮತ್ತಷ್ಟು ಉಪಯುಕ್ತ ಔಷಧಿಗಳ ಪ್ರಮಾಣ, ಅಗತ್ಯಕ್ಕೆ ತಕ್ಕಂತೆ ಪೂರೈಕೆಗೆ ಕ್ರಮ ಕೈಗೊಳ್ಳುವ ಅಗತ್ಯವಿದೆ ಎಂದರು. ರಾಜ್ಯ ಔಷಧ ನಿಯಂತ್ರಣ ಮಂಡಳಿ ಉಪನಿರ್ದೇಶಕ ಡಾ.ಶ್ರೀಧರಮೂರ್ತಿ ಹಾಜರಿದ್ದು, ಜಿಲ್ಲೆಯಲ್ಲಿನ ಔಷಧಿಗಳ ಗುಣಮಟ್ಟ, ದಾಸ್ತಾನು ಮತ್ತಿತರ ಅಂಶಗಳ ಕುರಿತು ಮಾಹಿತಿ ನೀಡಿದರು.ಜಿಲ್ಲಾಸ್ಪತ್ರೆ ವೈದ್ಯರಾದ ಡಾ.ಶಿವಣ್ಣ, ಔಷದಿ ವಿಭಾಗದ ಕೆ.ಟಿ.ಸುರೇಶ್ ಬಾಬು, ಮಾಲಿನಿ ನಾಗರಾಜ್ ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

