ಕೋಲಾರ

ಹೋಂಡ ಕಂಪನಿಗೆ ನೀರು ಹರಿಸಲು ಬಿಡುವುದಿಲ್ಲ: ಮಂಜುನಾಥ್ಗೌಡ

Published On :

ಕ.ಪ್ರ.ವಾರ್ತೆ  ಮಾಲೂರು  ಜು. 20
ಮಾಲೂರು ತಾಲೂಕಿನ ಕೆರೆಗಳಿಗೆ ನೀರು ಹರಿಸದೆ ನೇರವಾಗಿ ನರಸಾಪುರದ ಹೋಂಡ ಕಂಪನಿಗೆ ನೀರು ಹರಿಸಲು ಯಾವೂದೇ ಕಾರಣಕ್ಕೂ ಬಿಡುವುದಿಲ್ಲ ಎಂದು ಶಾಸಕ ಮಂಜುನಾಥ್ಗೌಡ ತಿಳಿಸಿದ್ದಾರೆ.
ಪಟ್ಟಣದ ಕೃಷಿಕ ಸಮಾಜದಲ್ಲಿ ಶನಿವಾರ ಆಯೋಜಿಸಲಾಗಿದ್ದ ಮಾಲೂರು ತಾಲೂಕಿನ ಹಾಲು ಉತ್ಪಾದಕರ ಸಹಕಾರ ಸಂಘಗಳ ಕಾರ್ಯದರ್ಶಿಗಳಿಗೆ 97ನೇ ಸಂವಿಧಾನದ ತಿದ್ದುಪಡಿ ವಿಷಯ ಕುರಿತು ಒಂದು ದಿನದ ವಿಶೇಷ ತರಬೇತಿ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು. ರಾಜಕೀಯ ಜನಪ್ರತಿನಿಧಿಗಳ ಇಚ್ಛಾಶಕ್ತಿ ಕೊರತೆಯಿಂದ ತಮಿಳುನಾಡಿಗೆ ಬೆಂಗಳೂರಿನ 8 ಟಿಎಂಸಿ ಕೊಳಚೆ ನೀರು ಹರಿದು ಹೋಗುತ್ತಿತ್ತು. ಆದರೆ, ಸ್ಥಳೀಯ ಹೋರಾಟಕ್ಕೆ ಮನ್ನಣೆ ನೀಡದೆ ರಾಜ್ಯ ಸರ್ಕಾರವು ಬಹುರಾಷ್ಟ್ರೀಯ ಕಂಪನಿ ಹೋಂಡಕ್ಕೆ ಈ ವರ್ತೂರು ಕೋಡಿ ನೀರು ನೀಡಲು ಮುಂದಾಗಿದೆ. ಕಾರ್ಖಾನೆಗೆ ನೀರು ನೀಡಲು ನಮ್ಮ ತಕರಾರು ಇಲ್ಲ. ಆದರೆ, ವರ್ತೂರು ಕೋಡಿ ಬಳಿಯಲ್ಲಿ ನೀರು ಶುದ್ಧೀಕರಣ ಘಟಕ ಸ್ಥಾಪಿಸಿ, ತಾಲೂಕಿನ ಕೆರೆಗಳಿಗೆ ನೀರು ಹರಿಸಿ ನಂತರ ಹೋಂಡ ಕಂಪನಿಗೆ ನೀರು ನೀಡಲಿ ಎಂದರು. ತಾಲೂಕಿನ ಅಭಿವೃದ್ಧಿಗಾಗಿ ವಿಧಾನ ಸಭೆಯ ಅಧೀವೇಶನದಲ್ಲಿ ಚರ್ಚೆಯಲ್ಲಿ ಭಾಗವಹಿಸಿ ತಾಲೂಕಿನ ಪರವಾಗಿ ಮಾತನಾಡುತ್ತಿದ್ದು,ವರ್ತೂಕು ಕೋಡಿ ನೀರು ಮೊದಲು ನಮಗೆ ನಂತರ ಹೋಂಡಕ್ಕೆ ಎಂದು ಈಗಾಗಲೇ ರಾಜ್ಯ ಸರ್ಕಾರಕ್ಕೆ ತಿಳಿಸಲಾಗಿದೆ ಎಂದರು. ಕೋ-ಚಿ ಜಿಲ್ಲಾ ಸಹಕಾರ ಹಾಲು ಒಕ್ಕೂಟದ ಮಾಜಿ ಅಧ್ಯಕ್ಷ ಡಾ.ಪ್ರಸನ್ನ, ಮಾಜಿ ಉಪಾಧ್ಯಕ್ಷ ಕೆ.ಆರ್.ಬೀರಪ್ಪ, ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷ ಕೃಷ್ಣಾ ರೆಡ್ಡಿ ಮತ್ತಿತರರು ಮಾತನಾಡಿದರು. ಕೋಲಾರ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಪಿ.ಎನ್.ಕೃಷ್ಣಾರೆಡ್ಡಿ ಅಧ್ಯಕ್ಷತೆ ವಹಿಸಿದ್ದರು. ಹಾಲು ಉತ್ಪಾದಕ ಸಂಘಗಳ ನೌಕರರ ಸಂಘದ ಅಧ್ಯಕ್ಷ ಕೆ.ನಾರಾಯಣಗೌಡ, ತಾಲೂಕು ಜೆಡಿಎಸ್ ಅಧ್ಯಕ್ಷ ಚಂದ್ರಶೇಖರ್ಗೌಡ, ನಂಜೇಗೌಡ, ರಾಜಣ್ಣ,ಪಾಪಣ್ಣ, ರವಿ, ನಂಜುಂಡಪ್ಪ ಮತ್ತಿತರರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.