ಕೌಟುಂಬಿಕ ಕಲಹ: ವ್ಯಕ್ತಿ ಕೊಲೆ
ಕ.ಪ್ರ.ವಾರ್ತೆ ಕೆಜಿಎಫ್ ಜು. 21
ಹಳೇ ದ್ವೇಷದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬನ ಮೇಲೆ ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ಕೊಲೆ ಮಾಡಿರುವ ಘಟನೆ ನಗರದಲ್ಲಿ ಭಾನುವಾರ ಸಂಜೆ ನಡೆದಿದೆ.
ಾಂಪಿಯನ್ರೀಫ್ ಪೊಲೀಸ್ ಠಾಣಾ ವ್ಯಾಪ್ತಿಯ ಡಬ್ಲ್ಯೂ.ಟಿ. ಬ್ಲಾಕ್ ನಿವಾಸಿ ಎಂ.ಗೋಪಿ (21) ಕೊಲೆಯಾದ ವ್ಯಕ್ತಿ. ಅದೇ ಬಡಾವಣೆಯ ಸುರೇಶ್ಬಾಬು ಅಲಿಯಾಸ್ ಬಿಲ್ಲಾ ಹತ್ಯೆ ಆರೋಪಿ. ಈ ಇಬ್ಬರ ಮಧ್ಯೆ 3 ವರ್ಷಗಳಿಂದ ಕೌಟುಂಬಿಕ ಕಲಹದಿಂದಾಗಿ ಜಳವಾಗುತ್ತಿತ್ತು. ಭಾನುವಾರ ಸಂಜೆ ಗೋಪಿ ತನ್ನ ಮನೆ ಸಮೀಪದ ರೀಡಿಂಗ್ ರೂಂ ಬಳಿ ಕುಳಿತ್ತಿದ್ದಾಗ ಅಲ್ಲಿಗೆ ಬಂದ ಬಿಲ್ಲಾ ನಿನ್ನ ಬಳಿ ಮಾತನಾಡಬೇಕು ಎಂದು ಹೇಳಿ ಕರೆದೊಯ್ದಿದ್ದ. ಬಳಿಕ ಮಾರಕಾಸ್ತ್ರದಿಂದ ಏಕಾಏಕಿ ಗೋಪಿಯ ಕತ್ತು, ಭುಜ ಮತ್ತು ಎದೆಯ ಭಾಗಕ್ಕೆ ಹಲ್ಲೆ ನಡೆಸಿ ಪರಾರಿಯಾಗಿದ್ದಾನೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಗೋಪಿಯನ್ನು ಸ್ಥಳೀಯ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಕೋಲಾರದ ಆಸ್ಪತ್ರೆಗೆ ಕರೆದೊಯ್ಯುವಂತೆ ವೈದ್ಯರು ತಿಳಿಸಿದರು. ಅಂತೆಯೇ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಗೋಪಿ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಕೊಲೆಗೈದು ಪರಾರಿಯಾಗಿರುವ ಆರೋಪಿ ಬಿಲ್ಲಾ ವಿರುದ್ಧ ಹಲವಾರು ಅಪರಾಧ ಪ್ರಕರಣಗಳು ದಾಖಲಾಗಿರುವ ಬಗ್ಗೆ ಪೊಲೀಸರು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಚಾಂಪಿಯನ್ರೀಫ್ ವೃತ್ತ ನಿರೀಕ್ಷಕ ಸಲೀಂ, ಎಎಸ್ಐ ತುಳಸೀದಾಸ್ ಭೇಟಿ ನೀಡಿ ಪರಿಶೀಲಿಸಿದರು. ಮೃತನ ತಾಯಿ ಧನಲಕ್ಷ್ಮಿ ನೀಡಿದ ದೂರಿನ ಮೇರೆಗೆ ಕೊಲೆ ಪ್ರಕರಣ ದಾಖಲಿಸಿ, ಆರೋಪಿ ಪತ್ತೆಗೆ ಕ್ರಮ ಜರುಗಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

