'ಕ್ರೀಡೆಗೆ ವೇಳೆ ಮೀಸಲಿಡಿ'
ಚಿಕ್ಕಬಳ್ಳಾಪುರ: ನಿರಂತರವಾಗಿ ಕೈಗೊಳ್ಳುವ ಕೆಲಸ ಕಾರ್ಯಗಳಿಂದ ಎದುರಾಗುವ ಒತ್ತಡಗಳ ನಡುವೆಯೂ ಸಮಯವನು ಮೀಸಲಿರಿಸಿಕೊಂಡು ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಮನಸ್ಸು ಉಲ್ಲಾಸಗೊಳ್ಳುತ್ತದೆ. ಈ ಹಿನೆಲೆಯಲ್ಲಿ ಪ್ರತಿಯೊಬ್ಬರು ಕ್ರೀಡೆಗಳಲ್ಲಿ ತಮ್ಮನು ತೊಡಗಿಸಿಕೊಳ್ಳಬೇಕೆಂದು ಎನ್ಸಿಸಿ ರಾಜ್ಯ 8ನೇ ವಿಭಾಗದ ಕಮಾಂಡೆಂಟ್ ಕರ್ನಲ್ ರಾಜಬೀರ್ ಸಿಂಗ್ ಸಲಹೆ ನೀಡಿದ್ದಾರೆ.
ನಗರದ ಹೊರ ವಲಯದ ಸಿ.ವಿ.ವಿ ಕ್ರೀಡಾಂಗಣದಲ್ಲಿ 17 ನೇ ದತ್ತಿ ದಿನಾಚರಣೆ ಮತ್ತು ಸಿ.ವಿ.ವಿ. ಜಯಂತಿ ಅಂಗವಾಗಿ ಕೆ.ವಿ ಮತ್ತು ಪಂಚಗಿರಿ ದತ್ತಿ ತಮ್ಮ ಸಂಸ್ಥೆಯ ಸಿಬ್ಬಂದಿ ವರ್ಗದವರಿಗಾಗಿ ಏರ್ಪಡಿಸಿದ್ದ ಕ್ರೀಡಾಕೂಟವನು ಉದ್ಘಾಟಿಸಿ ಅವರು ಮಾತನಾಡಿದರು.
ಕೆ.ವಿ. ಶಿಕ್ಷಣ ದತ್ತಿಯು ತಮ್ಮ ಸಂಸ್ಥೆಯಲ್ಲಿ ಕಾರ್ಯ ನಿರ್ವಹಿಸುವ ಸಿಬ್ಬಂದಿಗೆ ಪ್ರತಿ ವರ್ಷ ಕ್ರೀಡಾಕೂಟಗಳನು ಹಮ್ಮಿಕೊಂಡು ಬರುತ್ತಿರುವುದು ಶ್ಲಾಘನೀಯ. ಪ್ರತಿದಿನ ಕೆಲಸದ ಜಂಜಾಟದಲ್ಲಿರುವ ಸಿಬ್ಬಂದಿಗಳ ನಡುವೆ ಉತ್ತಮ ಬಾಂಧವ್ಯದ ವಾತಾವರಣ ನಿರ್ಮಾಣವಾಗುತ್ತದೆ. ಮೇಲು ಕೀಳು ಎಂಬ ಭಾವನೆಯೂ ದೂರವಾಗುತ್ತದೆ ಎಂದರು.
ಪ್ರತಿಯೊಬ್ಬರು ಕ್ರೀಡೆಗಳಿಗೆ ಇಂತಿಷ್ಟು ಸಮಯವನು ಮೀಸಲಿಡಬೇಕು. ಕ್ರೀಡೆಗಳಲ್ಲಿ ನಿರಂತರವಾಗಿ ಭಾಗವಹಿಸುವುದರಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯ ವೃದ್ಧಿಯಾಗುತ್ತದೆ ಎಂದರು.
ದಿವಂಗತ ಸಿ.ವಿ. ವೆಂಕಟರಾಯಪ್ಪನವರು ತಮ್ಮ ದೂರದೃಷ್ಟಿಯಿಂದ ಚಿಕ್ಕಬಳ್ಳಾಪುರದಲ್ಲಿ ಶಿಕ್ಷಣ ಸಂಸ್ಥೆಗಳನು ಪ್ರಾರಂಭಿಸಿ, ಅನೇಕ ಬಡ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಸಿಗುವಂತೆ ಮಾಡಿದ್ದಾರೆ. ಕೆ.ವಿ. ಶಿಕ್ಷಣ ದತ್ತಿಯಲ್ಲಿ ವ್ಯಾಸಂಗ ಮಾಡಿದ ಅನೇಕರು, ಇಂದು ಉನತ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೆ ಸಿ.ವಿ.ವೆಂಕಟರಾಯಪ್ಪರವರ ಕೊಡುಗೆ ಮಹತ್ತರವಾದುದು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಕೆ.ವಿ ಮತ್ತು ಪಂಚಗಿರಿ ಶಿಕ್ಷಣ ದತ್ತಿಯ ಅಧ್ಯಕ್ಷ ಕೆ.ವಿ. ನವೀನ್ ಕಿರಣ್ ಮಾತನಾಡಿ, ಕ್ರೀಡೆಗಳಲ್ಲಿ ಭಾಗವಹಿಸುವಂತಹ ಮನೋಭಾವನೆ ಪ್ರತಿಯೊಬ್ಬರಲ್ಲೂ ಬರಬೇಕು. ಪೋಷಕರು ತಮ್ಮ ಮಕ್ಕಳಿಗೆ ಕೇವಲ ಶಿಕ್ಷಣವನು ಕೊಡಿಸಬೇಕೆಂಬ ಯೋಚನೆಯಲ್ಲಿ ಮಕ್ಕಳು ಕ್ರೀಡೆಗಳಲ್ಲಿ ಭಾಗವಹಿಸದಂತೆ ತಡೆಯುವಂತಹ ಕೆಲಸವನು ಮಾಡಬಾರದು. ಶಿಕ್ಷಣವು ಜ್ಞಾನವನು ಹೆಚ್ಚಿಸುತ್ತದೆ. ಕ್ರೀಡೆಗಳು ದೈಹಿಕ ಮತ್ತು ಮಾನಸಿಕ ಆರೋಗ್ಯವನು ಕಾಪಾಡುತ್ತದೆ. ಒಳ್ಳೆಯ ಭಾವನೆಗಳನು ಬೆಳೆಸಿಕೊಳ್ಳುವಂತಾಗಲು ಪ್ರಮುಖ ಪಾತ್ರ ವಹಿಸುತ್ತದೆ ಎಂದರು.
ಕೆ.ವಿ ಮತ್ತು ಪಂಚಗಿರಿ ಶಿಕ್ಷಣ ದತ್ತಿಯ ಸದಸ್ಯರಾದ ವಿ.ಮುನಿಯಪ್ಪ ಎ. ಕೊಂಡಪ್ಪ, ಯಾಸಿನ್ಖಾನ್, ನಿರ್ಮಲ ಪ್ರಭು, ಆಡಳಿತಾಧಿಕಾರಿ ಡಾ ಪಿ. ಸಾಯಿಪ್ರಭು, ಸುಜಾತ ನವೀನ್ಕಿರಣ್ ಮುಂತಾದವರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

