ಭೂಗಳ್ಳರಿಗೆ ಸಚಿವ ಮುನಿಯಪ್ಪ ಬೆಂಬಲ: ವರ್ತೂರ್
ಕೋಲಾರ: ಸರ್ಕಾರಿ ಕೆರೆ ಕಬಳಿಸಲು ಭೂಗಳ್ಳರಿಗೆ ಕೇಂದ್ರ ಸಚಿವ ಕೆ.ಎಚ್. ಮುನಿಯಪ್ಪ ಬೆಂಬಲ ನೀಡುತ್ತಿದ್ದಾರೆಂದು ಶಾಸಕ ಆರ್. ವರ್ತೂರ್ ಪ್ರಕಾಶ್ ಆರೋಪಿಸಿದ್ದಾರೆ. ಯಾವುದೇ ದಾಖಲೆಗಳಿಲ್ಲದ ಸರ್ಕಾರಿ ಜಮೀನನ್ನು ಕಾಂಗ್ರೆಸ್ ಮುಖಂಡ ಹಾಗೂ ನಗರಸಭೆ ಮಾಜಿ ಅಧ್ಯಕ್ಷ ಊರುಬಾಗಿಲು ಶ್ರೀನಿವಾಸ್ ಎಂಬುವರು ಕಬಳಿಸಲು ಯತ್ನಿಸುತ್ತಿದ್ದು ಇದಕ್ಕೆ ವಿಧಾನ ಪರಿಷತ್ ಸದಸ್ಯ ನಜೀರ್ ಅಹಮ್ಮದ್ ಅವರ ಬೆಂಬಲವಿರುವುದರಿಂದ ಕೆ.ಹೆಚ್. ಮುನಿಯಪ್ಪನವರು ತಮ್ಮ ಸ್ವಾರ್ಥ ರಾಜಕಾರಣಕ್ಕಾಗಿ ಅಧಿಕಾರಿಗಳ ಮೇಲೆ ಒತ್ತಡ ತರುತ್ತಿದ್ದಾರೆಂದು ದೂರಿದ್ದಾರೆ. ಯಾವುದೇ ಕಾರಣಕ್ಕೂ ಸರ್ಕಾರಿ ಭೂಮಿ ಇಲ್ಲವೇ ಕೆರೆಗಳನ್ನು ಕಬಳಿಸುವರಿಗೆ ಸಹಕಾರ ನೀಡದಂತೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದೇನೆ. ಆದರೆ, ಕಳೆದ ಶನಿವಾರ ಕೆ.ಹೆಚ್. ಮುನಿಯಪ್ಪನವರು ನಗರಸಭೆ ಆಯುಕ್ತರಿಗೆ ನೇರವಾಗಿ ದೂರವಾಣಿ ಕರೆ ಮಾಡಿ ಊರುಬಾಗಿಲು ಶ್ರೀನಿವಾಸ್ಗೆ ಖಾತೆ ಮಾಡಿಕೊಡುವಂತೆ ಆದೇಶಿಸಿದ್ದಾರೆಂದು ತಿಳಿಸಿದ್ದಾರೆ. ಆರು ಬಾರಿ ಕೋಲಾರ ಕ್ಷೇತ್ರದಿಂದ ಸಂಸತ್ಗೆ ಆಯ್ಕೆಯಾಗಿ ಸಚಿವರೂ ಆಗಿರುವ ಕೆ.ಎಚ್.ಮುನಿಯಪ್ಪ ಅವರು ಜಿಲ್ಲೆಗೆಯಾವುದೇ ಶಾಶ್ವತವಾದ ಅಭಿವೃದ್ಧಿ ಕೆಲಸಗಳನ್ನು ಮಾಡಲಾಗಿಲ್ಲ, ಭೂಗಳ್ಳರಿಗೆ ಸಹಕಾರ ನೀಡುತ್ತಾ ಜಿಲ್ಲೆಯನ್ನು ಕಡೆಗಣಿಸುತ್ತಿದ್ದಾರೆಂದು ಟೀಕಿಸಿದ್ದಾರೆ. ಸರ್ಕಾರಿ ಮತ್ತು ಕೆರೆ ಜಮೀನುಗಳನ್ನು ಕಬಳಿಸುವ ಭೂಗಳ್ಳರಿಗೆ ಕೆ.ಹೆಚ್. ಮುನಿಯಪ್ಪ ಬೆಂಬಲ ನೀಡಿದ್ದೇ ಆದಲ್ಲಿ ತಾವು ಬೀದಿಗಳಿದು ಹೋರಾಟ ಮಾಡುವುದಾಗಿ ಎಚ್ಚರಿಸಿದ್ದಾರಲ್ಲದೆ, ನಗರಸಭೆ ಆಯುಕ್ತರು ಸಹ ಈ ಸಂಬಂಧ ಕ್ಯಾತೆ ಮಾಡಬಾರದು ಎಂದು ಸೂಚಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

