ಕೋಲಾರ

ಶಿಕ್ಷಕರ ನೇಮಕಕ್ಕೆ ಒತ್ತಾಯಿಸಿ ರಸ್ತೆತಡೆ

Published On :

ಗುಡಿಬಂಡೆ: ಪಟ್ಟಣದ ಆದರ್ಶ ವಿದ್ಯಾಲಯದಲ್ಲಿ ಶಿಕ್ಷಕರ ಕೊರತೆ ಕಾಡುತ್ತಿದ್ದು, ಅಧಿಕಾರಿಗಳು ಶಿಕ್ಷಕರನ್ನು ಒತ್ತಾಯಿಸುವಲ್ಲಿ ವಿಫಲರಾಗಿದ್ದಾರೆಂದು ಆರೋಪಿಸಿ ಶಾಲೆಯ ವಿದ್ಯಾರ್ಥಿಗಳು ಶಾಲೆ ಬಹಿಷ್ಕರಿಸಿ ನಂತರ ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು.
ಪಟ್ಟಣದ ಆದರ್ಷ ಶಾಲೆಯಲ್ಲಿ ಶಿಕ್ಷಕರ ಕೊರತೆಯಿಂದಾಗಿ ಪಾಠಪ್ರವಚನಗಳು ಕುಂಠಿತವಾಗಿವೆಂದು ಪೋಷಕರು ಹಾಗೂ ವಿದ್ಯಾರ್ಥಿಗಳು ಇದೇ ತಿಂಗಳ ಜು.16ರಂದು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ, ಮೂರು ದಿನಗಳೊಳಗೆ ಸಮಸ್ಯೆ ಬಗೆಹರಿಸದಿದ್ದರೆ ಸಾಮೂಹಿಕವಾಗಿ ಶಾಲೆಯನ್ನು ಬಹಿಷ್ಕರಿಸಿ ಕಚೇರಿಗೆ ಬೀಗ ಜಡಿದು ಸಮಸ್ಯೆ ಪರಿಹಾರವಾಗುವವರೆಗೂ ಪ್ರತಿಭಟನೆ ನಡೆಸಲಾವುದೆಂದು ತಿಳಿಸಿದ್ದರು. ಆದರೆ ಐದು ದಿನ ಕಳೆದರೂ ಶಿಕ್ಷಕರನ್ನು ನೇಮಿಸದೇ ವಿದ್ಯಾರ್ಥಿಗಳ  ಭವಿಷ್ಯದ ಜೊತೆ ಚೆಲ್ಲಾಟ ವಾಡುತ್ತಿದ್ದಾರೆ ಎಂದು ಪೋಷಕರು ಹಾಗೂ ವಿದ್ಯಾರ್ಥಿಗಳು ಸುಮಾರು 3 ಗಂಟೆಗಳ ಕಾಲ ಪ್ರತಿಭಟನೆ ನಡೆಸಿದರು. ಸಮಸ್ಯೆ ಪರಿಹರಿಸಲು ಬಿ.ಇ.ಒ ಹಾಗೂ ಆರಕ್ಷಕ ವೃತ್ತ ನಿರೀಕ್ಷಕ ವಿದ್ಯಾರ್ಥಿಗಳ ಪೋಷಕರೊಂದಿಗೆ ಮಾತುಕತೆ ನಡೆಸಿದರು. ತಾಲೂಕಿನಲ್ಲಿ ಅನೇಕ ಶಾಲೆಗಳಲ್ಲಿ ಶಿಕ್ಷಕರ ಕೊರತೆಯಿದ್ದರೂ ಸಹ ಆದರ್ಶ ಶಾಲೆಗೆ ಇತರೆ ಶಾಲೆಗಳಿಂದ ಹಾಗೂ ಬಿ.ಆರ್.ಪಿ ಗಳನ್ನು ಶಾಲೆಗೆ ನಿಯೋಜಿಸಲಾಗುವುದು ಎಂದು ತಿಳಿಸಿದರು. ಆದರೆ ಇದಕ್ಕೆ ಒಪ್ಪದ ಪೋಷಕರು ನಮಗೆ ಶಾಶ್ವತ ಪರಿಹಾರ ದೊರಕಿಸಿಕೊಡಬೇಕು ಎಂದು ಖಡಕ್ಕಾಗಿ ತಿಳಿಸಾದ, ಜು.23ರ ಬೆಳಿಗ್ಗೆ 11 ಗಂಟೆಗೆ ಸಾರ್ವಜನಿಕ ಶಿಕ್ಷಣ ಇಲಾಕೆ ಉಪನಿರ್ದೇಶಕರು ಪಟ್ಟಣಕ್ಕೆ ಆಗಮಿಸಿ ಪರಿಹಾರ ದೊರಕಿಸಿಕೊಡುವುದಾಗಿ ಭರವಸೆ ನೀಡಿದ ನಂತರ ಪೋಷಕರು ನಾಳೆವರೆಗೂ ನಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸುವುದಿಲ್ಲ. ಸಮಸ್ಯೆ ಬಗೆಹರಿಸದಿದ್ದರೆ ಇನ್ನೂ ಉಗ್ರ ಹೋರಾಟ ನಡೆಸುವುದಾಗಿ ತಿಳಿಸಿ ಪ್ರತಿಭಟನೆಗೆ ತಾತ್ಕಲಿಕ ತೆರೆ ಎಳೆದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.