ಬೇಡಿಕೆಗಳಿಗೆ ಆಗ್ರಹಿಸಿ ಬೆಮೆಲ್ ಗುತ್ತಿಗೆ ಕಾರ್ಮಿಕರ ಧರಣಿ
ಕೆಜಿಎಫ್: ಕೇಂದ್ರ ಸ್ವಾಮ್ಯದ ಬೆಮೆಲ್ ಕಾರ್ಖಾನೆಯ ಕೆಜಿಎಫ್, ಬೆಂಗಳೂರು ಹಾಗೂ ಮೈಸೂರು ಭಾಗದ ಗುತ್ತಿಗೆ ಕಾರ್ಮಿಕ ಸಂಘದ ವತಿಯಿಂದ ಮಂಗಳವಾರ ಬೆಮೆಲ್ ಕಾರ್ಖಾನೆಯ ಮುಂಭಾಗ ಒಂದು ದಿನದ ಧರಣಿ ಹೋರಾಟ ಕೈಗೊಳ್ಳಲಾಗಿತ್ತು.
ಕಾರ್ಮಿಕರ ವಿವಿಧ ಬೇಡಿಕೆಗಳಾದ ವೇತನ ಪರಿಷ್ಕರಣೆ, ಬೋನಸ್ ನೀಡಿಕೆ, ದಿನ ಕೂಲಿ ಕಾರ್ಮಿಕರನ್ನು ಖಾಯಂಗೊಳಿಸಬೇಕು, ಸಾಮಾನ್ಯ ಕೆಲಸಕ್ಕೆ ಸಮಾನ ವೇತನ ನೀಡಬೇಕು, ಸೀಲಿಂಗ್ ಬೋನಸ್ 3500 ನೀಡುತ್ತಿರುವುದನ್ನು ರದ್ದುಗೊಳಿಸಿ 8.33 ಪೂರ್ಣ ಸಂಬಳ ಬೋನಸ್ ನೀಡಬೇಕು, ಬೆಮೆಲ್ ಗುತ್ತಿಗೆ ಕಾರ್ಮಿಕರಿಗೆ ಕಾರ್ಖಾನೆ ಸ್ಥಾಪನೆ ಕಾಯ್ದೆಯನ್ವಯ ನೀಡಲು ಮತ್ತು ಭವಿಷ್ಯ ನಿಧಿ ಹಾಗೂ ಗ್ರಾಚ್ಯುಟಿ ಹಣವನ್ನು ಹೆಚ್ಚಿಸಿಬೇಕು ಎಂದು ಬೆಮೆಲ್ ಗುತ್ತಿಗೆ ಕಾರ್ಮಿಕರ ಸಂಘದ ಕಾರ್ಯಕರ್ತರು ಒತ್ತಾಯಿಸಿದರು.
ಈ ವೇಳೆ ಮಾತನಾಡಿದ ಕಾರ್ಮಿಕ ಸಂಘದ ಅಧ್ಯಕ್ಷ ವೈ. ರವಿಕುಮಾರ್ ಬೆಮೆಲ್ ಕಾರ್ಖಾನೆಯಲ್ಲಿ ಹಲವು ವರ್ಷಗಳಿಂದ 10 ಸಾವಿರಕ್ಕೂ ಹೆಚ್ಚು ಗುತ್ತಿಗೆ ಕಾರ್ಮಿಕರು ಕಾರ್ಯನಿರ್ವಹಿಸುತ್ತಿದ್ದು ಇವರಿಗೆ ಕಡಿಮೆ ವೇತನ ಹಾಗೂ ಯಾವುದೇ ಸೌಲಭ್ಯ ನೀಡುತ್ತಿಲ್ಲ ಈ ಬಗ್ಗೆ ಈಗಾಗಲೇ ಕಾರ್ಮಿಕ ಆಯುಕ್ತರು, ಗುತ್ತಿಗೆ ಕಾರ್ಮಿಕರ ಸಲಹಾ ಸಮಿತಿ ಗಮನಕ್ಕೂ ತಂದಿದ್ದು ಮುಂದಿನ ದಿನಗಳಲ್ಲಿ ತಮ್ಮ ಬೇಡಿಕೆ ಈಡೇರದೆ ಇದ್ದಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಸಿದರು. ಪ್ರತಿಭಟನೆಯಲ್ಲಿ ಬೆಮೆಲ್ ಗುತ್ತಿಗೆ ಕಾರ್ಮಿಕರ ಸಂಘದ ಉಪಾಧ್ಯಕ್ಷ ಎಂ. ನಾಗಭೂಷಣಂ,ರಮೇಶ್ಕುಮಾರ್, ಸಿ. ಶಿವಕುಮಾರ್, ವೇಲನ್,ರಾಜನ್, ಶಿವಕುಮಾರ್, ಡಿ.ರಾಜೇಂದ್ರನ್, ಸೆಲ್ವಂ ಸೇರಿದಂತೆ ಮುಖಂಡರು, ಕಾರ್ಯಕರ್ತರು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

