ಮನೆ ಬೀಗ ಮುರಿದು ಒಡವೆ, ನಗದು ಕಳವು
ಕೆಜಿಎಫ್: ಮನೆ ಬೀಗ ಮುರಿದು ಒಳ ನುಗ್ಗಿದ ಕಳ್ಳರು ಬೀರುವಿನಲ್ಲಿಟ್ಟಿದ್ದ ಚಿನ್ನದ ಒಡವೆಗಳು ಹಾಗೂ ನಗದನ್ನು ಕಳವು ಮಾಡಿಕೊಂಡು ಹೋಗಿರುವ ಘಟನೆ ನಡೆದಿದೆ. ಚಾಂಪಿಯನ್ರೀಫ್ ಪೊಲೀಸ್ ಠಾಣಾ ವ್ಯಾಪ್ತಿಯ ಜಿ. ಬ್ಲಾಕ್ ನಿವಾಸಿ ವಸಂತ್ಕುಮಾರ್ ಬೆಂಗಳೂರಿನ ಇಂಡಿಯನ್ ಎಕ್ಸಪ್ರೆಸ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು ರಾತ್ರಿ ಕೆಲಸಕ್ಕೆ ಹೋಗಿದ್ದು ಅವರ ಪತ್ನಿ ಲತಾ ತಮ್ಮ ತಂಗಿ ಮನೆಗೆ ಹೋಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಮಂಗಳವಾರ ಬೆಳಗ್ಗೆ ವಸಂತ್ಕುಮಾರ್ ಕೆಲಸದಿಂದ ಬಂದು ನೋಡಿದಾಗ ಮನೆಗೆ ಹಾಕಿದ್ದ ಬೀಗವನ್ನು ಮುರಿದು ಒಳ ಪಆವೇಶಿಸಿದ ಕಳ್ಳರು ಬೀರುವಿನಲ್ಲಿಟ್ಟಿದ್ದ 80 ಗ್ರಾಂ ಚಿನ್ನದ ಒಡವೆಗಳು, 350 ಗ್ರಾಂ ಬೆಳ್ಳಿ ಆಭರಣಗಳು, 90,700 ನಗದು ಮತ್ತು 5 ರೇಷ್ಮೆ ಸೀರೆಗಳು ಸೇರಿದಂತೆ ಒಟ್ಟು 3.4 ಲಕ್ಷ ಮೌಲ್ಯ ಕಳವು ಮಾಡಿಕೊಂಡು ಹೋಗಿರುವುದಾಗಿ ವಸಂತ್ಕುಮಾರ್ ಚಾಂಪಿಯನ್ರೀಫ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಸ್ಥಳಕ್ಕೆ ಕೆಜಿಎಫ್ ಪೊಲೀಸ್ ರಕ್ಷಣಾಧಿಕಾರಿ ಡಾ. ರೋಹಿಣಿಕಟೋಚ್ ಸಫೆಟ್ ಭೇಟಿ ನೀಡಿ ಪರಿಶೀಲಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

