'ರೈತರು ಕೃಷಿ ಯೋಜನೆ ನೆರವು ಪಡೆಯಲಿ'
ಗೌರಿಬಿದನೂರು: ಭೂಮಿಯ ಫಲವತ್ತತೆ ಕಾಪಾಡಿ, ಕಾಲಕಾಲಕ್ಕೆ ಅವಶ್ಯಕ ಪೋಷಕಾಂಶ ಒದಗಿಸುತ್ತಾ ಉತ್ತಮ ಇಳುವರಿ ಪಡೆದು ಮಾದರಿ ಬೇಸಾಯ ಪದ್ಧತಿ ಅನುಸರಿಸುವುದು ರೈತನ ಜವಾಬ್ದಾರಿ ಆಗಬೇಕು ಎಂದು ತಾಲೂಕು ಸಹಾಯಕ ಕೃಷಿ ಅಧಿಕಾರಿ ಎಂ.ಅನುರೂಪ ತಿಳಿಸಿದರು.
ತಾಲೂಕಿನ ಬಿಸಲಹಳ್ಳಿಯಲ್ಲಿ ಏರ್ಪಡಿಸಿದ್ದ ಭೂ ಚೇತನ ಯೋಜನೆಯಡಿ ಹೋಬಳಿಮಟ್ಟದ ರೈತರ ತರಬೇತಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು, ಸರ್ಕಾರವು ಪ್ರತಿ ವರ್ಷ ರೈತರಿಗಾಗಿ ಹತ್ತು ಹಲವಾರು ಉಪಯುಕ್ತ ಯೋಜನೆ ಜಾರಿಗೆ ತರುತ್ತಿದೆ. ಅವುಗಳನ್ನು ಸಮರ್ಪಕವಾಗಿ ಸದುಪಯೋಗಪಡಿಸಿಕೊಂಡು ಪೂರ್ಣ ಪ್ರಮಾಣದ ಪ್ರಯೋಜನ ಪಡೆಯುವ ಮೂಲಕ ತಮ್ಮ ಜಮೀನಿನಲ್ಲಿ ಉತ್ತಮ ಇಳುವರಿ ಪಡೆಯಬೇಕಾಗಿದೆ ಎಂದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕೃಷಿ ವಿಶ್ವವಿದ್ಯಾಲಯದ ಬೇಸಾಯಶಾಸ್ತ್ರ ವಿಜ್ಞಾನಿ ಡಾ.ಗೀತಾ ಮಾತನಾಡಿ, ರೈತರು ಬೇಸಾಯ ಪದ್ಧತಿಯಲ್ಲಿ ಆಗಿಂದಾಗ್ಗೆ ಎದುರಾಗುವ ಸಮಸ್ಯೆಗಳಿಗೆ ಸಂಬಂಧಪಟ್ಟ ಕೃಷಿ ಅಧಿಕಾರಿಗಳೊಂದಿಗೆ ಸಮಾಲೋಚಿಸಿ ನೂತನ ತಂತ್ರಜ್ಞಾನ ಮತ್ತು ಆಧುನೀಕರಣ ರೂಢಿಸಿಕೊಂಡು ಉತ್ತಮ ಇಳುವರಿ ಪಡೆಯಬೇಕಾಗಿದೆ ಎಂದು ತಿಳಿಸಿದರು.
ಸಸ್ಯರೋಗ ತಜ್ಞ ಡಾ.ಕರುಣ ಮಾತನಾಡಿದರು. ಮಂಚೇನಹಳ್ಳಿ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಕೆ.ಭವ್ಯಾ, ಜಿ.ಪಂ. ಸದಸ್ಯೆ ರಾಧಮ್ಮ, ಜಿಪಂ ಮಾಜಿ ಸದಸ್ಯ ಪಿ.ಎನ್.ಜಗನ್ನಾಥ್, ಗ್ರಾ.ಪಂ ಅಧ್ಯಕ್ಷೆ ಲಕ್ಷ್ಮೀ ರಮೇಶ್, ಸದಸ್ಯ ಕಾಂತರಾಜು, ಹಾಲಿ-ಮಾಜಿ ಗ್ರಾಪಂ ಸದಸ್ಯರು, ರೈತ ಅನುವುಗಾರರು ಹಾಗೂ ಅನೇಕ ಮಂದಿ ಸ್ಥಳೀಯ ರೈತರು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

