ಕೋಲಾರ

ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಒತ್ತಾಯ

Published On :

ಕ.ಪ್ರ.ವಾರ್ತೆ ,  ಚಿಂತಾಮಣಿ ,  ಜು. 23
ನಾರಾಯಣಹಳ್ಳಿ ಗ್ರಾಮದಲ್ಲಿ ಇರುವ ಬೋವಿ ಸಮುದಾಯ ಒಗ್ಗಟ್ಟನ್ನು ಮುರಿಯಲು ಹಲವು ರಾಜಕೀಯ ಮುಖಂಡರು ಬೋರ್‌ವೆಲ್ ಕೊರೆಸುವ ವಿಷಯದಲ್ಲಿ ಸಲ್ಲದ ವಿವಾದ ಸೃಷ್ಟಿಸಿದ್ದಾರೆ. ಸಮುದಾಯದ ಜನರ ಮೇಲೆ ಹಾಗೂ ಮುಗ್ಧ ಮಹಿಳೆಯರ ಮೇಲೆ ಪೊಲೀಸ್ ಲಾಠಿ ಚಾರ್ಜ್ ನಡೆಸಿರುವ ಕ್ರಮ ಖಂಡಿಸಿ, ಈ ಬಗ್ಗೆ ಜಿಲ್ಲಾಧಿಕಾರಿ ತನಿಖೆ ನಡೆಸಿ ತಪ್ಪತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಬೋವಿ ಮಹಾಸಭಾ ರಾಜ್ಯಾಧ್ಯಕ್ಷ ಅರ್.ಮುನಿರಾಜು ಆಗ್ರಹಿಸಿದ್ದಾರೆ.
ಚಿನ್ನಸಂದ್ರ ಗ್ರಾಪಂ ವ್ಯಾಪ್ತಿಯ ನಾರಾಯಣಹಳ್ಳಿಯಲ್ಲಿ ಸುಮಾರು ಬೋವಿ ಸಮಾಜದ 120 ಕೂಲಿ ಕಾರ್ಮಿಕ ಕುಟುಂಬಗಳಿವೆ. ಗ್ರಾಮದ ಎಲ್ಲಾ ಕುಟುಂಬಗಳು ಹಲವಾರು ವರ್ಷಗಳಿಂದ ಪ್ರೀತಿ -ವಿಶ್ವಾಸದಿಂದ ಜೀವನ ಸಾಗಿಸುತ್ತಿದ್ದರು. ಆದರೆ, ಬೋವಿ ಸಮುದಾಯದ ಒಗ್ಗಟ್ಟನ್ನು ಸಹಿಸದ ಹಲವು ರಾಜಕೀಯ ಮುಖಂಡರು ಗ್ರಾಮದಲ್ಲಿ ಹಲವು ದಿನಗಳ ಹಿಂದೆ ನಡೆದ ಬೋರ್‌ವೆಲ್ ಕೊರೆಸುವ ವಿಷಯದಲ್ಲಿ 2 ಗುಂಪುಗಳನ್ನಾಗಿ ಮಾಡಿ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಮುಂದಾಗಿದ್ದಾರೆ. ಅಲ್ಲದೆ, ಬೋವಿ ಸಮಾಜದವರ ಮೇಲೆ ಪೊಲೀಸರ ಲಾಠಿಯಿಂದ ಮುಗ್ಧ ಮಹಿಳೆಯರ ಮೇಲೆ ಹಲ್ಲೆ ಮಾಡಿರುವ ಪ್ರಕರಣ ಜಿಲ್ಲಾಧಿಕಾರಿ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಆರ್.ಮುನಿರಾಜು ಒತ್ತಾಯಿಸಿದ್ದಾರೆ.
ಶಾಂತಿಸಭೆ:  ಮುಂದಿನ ವಾರ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ನಾರಾಯಣಹಳ್ಳಿ ಗ್ರಾಮದಲ್ಲಿ ಶಾಂತಿ ಸಭೆ ನಡೆಸಲು ಜಿಲ್ಲಾಧಿಕಾರಿ ಜೊತೆ ಚರ್ಚಿಸಿ, ಸೂಕ್ತ ದಿನಾಂಕ ನಿಗದಿಪಡಿಸಲಾಗಿದೆ. ಈ ಸಭೆಗೆ ಜಿಲ್ಲಾ ರಕ್ಷಣಾಧಿಕಾರಿಗಳು, ತಾಲೂಕು ದಂಡಾಧಿಕಾರಿಗಳು ಮತ್ತು ಸ್ಥಳೀಯ ಪೊಲೀಸ್ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸುವುದಾಗಿ ತಿಳಿಸಿದ್ದಾರೆ ಎಂದಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.