ಕೋಲಾರ

ಸೋಲು-ಗೆಲುವು ಸಮಾನವಾಗಿ ಸ್ವೀಕರಿಸೋಣ: ಮಂಜುನಾಥ್

Published On :

ಕೋಲಾರ: ಚುನಾವಣೆಯಲ್ಲಿ ಸೋಲು-ಗೆಲುವು ಸಹಜ ಇದನ್ನು ಸ್ಪರ್ಧಾತ್ಮಕವಾಗಿ ಹಾಗೂ ಸಮಾನವಾಗಿ ಸ್ವೀಕರಿಸಿ ಜಿಲ್ಲೆಯಲ್ಲಿನ ಎಲ್ಲ ಸರ್ಕಾರಿ ನೌಕರರ ಹಿತ ಕಾಪಾಡಲು ಪ್ರಯತ್ನಿಸೋಣವೆಂದು ಜಿಲ್ಲಾ ಸರ್ಕಾರಿ ನೌಕರರ ಸಂಘದ ಹಾಲಿ ಅಧ್ಯಕ್ಷ ಕೆ.ಎನ್. ಮಂಜುನಾಥ್ ತಿಳಿಸಿದರು.
ಜಿಲ್ಲಾ ಸರ್ಕಾರಿ ನೌಕರರ ಸಂಘಕ್ಕೆ ವಿವಿಧ 5 ಇಲಾಖೆಗಳಿಂದ ನಡೆದ ಚುನಾವಣೆಯಲ್ಲಿ ಸಂಘ ಬೆಂಬಲಿತ ವಿಜೇತ ಹಾಗೂ ಪರಾಜಿತ ಅಭ್ಯರ್ಥಿಗಳನ್ನು ಒಳಗೊಂಡ ನೌಕರರನ್ನು ಹಾಗೂ ಮುಖಂಡರನ್ನು ಉದ್ದೇಶಿಸಿ  ಸಂಘದ ಭವನದಲ್ಲಿ ಮಾತನಾಡಿದ ಅವರು, ಚುನಾವಣೆಯಲ್ಲಿ ಉತ್ತಮ ಫಲಿತಾಂಶ ಬಂದಿರುವುದು ಸಮಾಧಾನ ತರುವಂತಾಗಿದೆ. ಗೆದ್ದಿರುವವರಿಗೆ ಹೆಚ್ಚಿನ ಜವಾಬ್ದಾರಿ ಸಿಕ್ಕಿದೆ. ಸೋತವರು ಸಂಘವನ್ನು ಕಟ್ಟಲು ಶ್ರಮಿಸುವ ಮೂಲಕ ನೌಕರರ ಪ್ರೀತಿ ವಿಶ್ವಾಸ ಗಳಿಸಿ ಎಂದರು. ಕೇವಲ ಮೂರು ಸ್ಥಾನಗಳು ಕಳೆದುಕೊಂಡಿರುವ ಬಗ್ಗೆ ಯಾರೂ ಆತಂಕಪಡಬೇಕಾಗಿಲ್ಲ, ಗೆದ್ದವರು ಹಾಗೂ ಸೋತವರು ಸಂಘದ ದೃಷ್ಟಿಯಲ್ಲಿ ಎಲ್ಲರೂ ಸಮಾನರು, ನಾವೆಲ್ಲರು ಒಟ್ಟಿಗೆ ಹೋಗೋಣ ಎಂದ ಅವರು ಸೋಲು ಗೆಲುವಿನ ಬಗ್ಗೆ ಆತ್ಮ ವಿಮರ್ಶೆ ಮಾಡಿಕೊಂಡು ಸಂಘವು ಮುಂದಿನ ಹೆಜ್ಜೆ ಇಡಲಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ನೌಕರ ಸಂಘದ ಪ್ರಧಾನ ಕಾರ್ಯದರ್ಶಿ ರವಿಚಂದ್ರ, ಕಾರ್ಯದರ್ಶಿ ಅಶೋಕ್, ಖಜಾಂಚಿ ರಂಗಯ್ಯ ಮುಂತಾದವರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.