ಕೋಲಾರ

ಅಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನ

Published On :

ಚಿಂತಾಮಣಿ:  ತಾಲೂಕಿನ ಒಕ್ಕಲಿಗ ನೌಕರರ ಕ್ಷೇಮಾಭಿವೃದ್ಧಿ ಸಂಘದಡಿ 2013- 14ನೇ ಶೈಕ್ಷಣಿಕ ಸಾಲಿನಲ್ಲಿ ತಾಲೂಕಿನಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ಅತಿ ಹೆಚ್ಚು ಅಂಕ ಪಡೆದಿರುವ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಪಿಯುಸಿ ಮೇಲ್ಪಟ್ಟು ಉನ್ನತ ವ್ಯಾಸಾಂಗ ಮಾಡುತ್ತಿರುವ ತಾಲೂಕಿನ ಆರ್ಥಿಕವಾಗಿ ಹಿಂದುಳಿದ ಮತ್ತು ಅಂಗವಿಕಲ ವಿದ್ಯಾರ್ಥಿಗಳಿಗೆ ಸಹಾಯ ಧನ ವಿತರಣಾ ಕಾರ್ಯಕ್ರಮ ವನ್ನು ಏರ್ಪಡಿಸಲಾಗಿದೆ.
ತಾಲೂಕಿನಲ್ಲಿ ವಾಸವಾಗಿರುವ ಹಾಗೂ ಇದೇ ತಾಲೂಕಿನ ಶಾಲಾ-ಕಾಲೇಜುಗಳಲ್ಲಿ ವ್ಯಾಸಾಂಗ ಮಾಡಿರುವ ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ಈಗಾಗಲೇ ಅರ್ಜಿ ಸಲ್ಲಿಸುವಂತೆ ತಿಳಿಸಲಾಗಿದೆ. ಆಯ್ಕೆ ಆಗಿರುವ ವಿದ್ಯಾರ್ಥಿಗಳು ಮೇಲ್ಕಂಡ ದಿನಾಂಕದಂದು ಕಾರ್ಯಕ್ರಮಕ್ಕೆ ಹಾಜರಾಗಲು ಆಹ್ವಾನಿಸಲಾಗುವುದು.
ಒಕ್ಕಲಿಗ ನೌಕರರ ಕ್ಷೇಮಾಭಿವೃದ್ಧಿ ಸಂಘದ ನೋಂದಣಿಯಾಗಿದೆ.  ಕಾರ್ಯಕ್ರಮದಲ್ಲಿ ಸಂಘದ ಸದಸ್ಯತ್ವ ನೋಂದಣಿ ಅಭಿಯಾನ ಸಹ ಹಮ್ಮಿಕೊಂಡಿದ್ದು, ನೋಂದಣಿ ಶುಲ್ಕ 250 ನಿಗದಿಪಡಿಸಲಾಗಿದೆ. ಸದಸ್ಯರಾಗಬಯಸುವ ಕುಲಬಾಂಧವ ನೌಕರ ಮಿತ್ರರು ತಮ್ಮ ಇತ್ತೀಚಿನ 2 ಭಾವಚಿತ್ರ ನೀಡಿ ಸದಸ್ಯತ್ವ ನೋಂದಾಯಿಸಿಕೊಂಡು ಸಂಘದ ಬಲವರ್ಧನೆ ಮಾಡಲು ಕೋರಿದೆ.
ತಾಲೂಕಿನ ಸಮಸ್ತ ಒಕ್ಕಲಿಗ ಯುವಸೇನಾ ಬಳಗದವರು, ಕೆ.ಎಸ್.ಆರ್.ಟಿ.ಸಿ. ಒಕ್ಕಲಿಗ ನೌಕರ ಬಾಂಧವರು ಹಾಗೂ ಒಕ್ಕಲಿಗ ಯುವ ವಿದ್ಯಾರ್ಥಿ ಬಳಗದವರು ರಾಯಲ್ ಸಭಾಂಗಣದಲ್ಲಿ ಭಾನುವಾರ 11 ಗಂಟೆಗೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಸಂಘ ಅಧ್ಯಕ್ಷರು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.