ಇಂದು ಪ್ರತಿಭಾ ಪುರಸ್ಕಾರ
ಕೋಲಾರ: ಜಿಲ್ಲೆಯ ಅರ್ಥಶಾಸ್ತ್ರ ಅಧ್ಯಯನ ಕೇಂದ್ರದ ವತಿಯಿಂದ ಜು.25 ರಂದು ಬೆಳಿಗ್ಗೆ 11.30ಕ್ಕೆ ದ್ವಿತೀಯ ಪಿ.ಯು.ಸಿ. ಅರ್ಥಶಾಸ್ತ್ರ ವಿಷಯದಲ್ಲಿ ಅತಿ ಹೆಚ್ಚು ಅಂಕ ಗಳಿಸಿರುವ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭವನ್ನು ನಗರದ ಪತ್ರಕರ್ತರ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ಪಪೂ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ಜಿ. ದೊರೆಸ್ವಾಮಿ ಕಾರ್ಯಕ್ರಮ ಉದ್ಘಾಟಿಸಲಿದ್ದು, ಅರ್ಥಶಾಸ್ತ್ರ ಅಧ್ಯಯನ ಕೇಂದ್ರದ ಗೌರವಾಧ್ಯಕ್ಷ ವೆಂಕಟರಾಮಯ್ಯ ಅಧ್ಯಕ್ಷತೆ ವಹಿಸುವರು. ಅರ್ಥಶಾಸ್ತ್ರ ಅಧ್ಯಯನ ಕೇಂದ್ರದ ಅಧ್ಯಕ್ಷ ಟಿ.ಚಂದ್ರಪ್ಪ ಆಶಯ ಭಾಷಣ ಮಾಡಲಿದ್ದು, ಅತಿಥಿಗಳಾಗಿ ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ಜೆ.ಜಿ. ನಾಗರಾಜ್, ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ವಿ.ಗೋಪಿನಾಥ್ ಭಾಗವಹಿಸುವರು.
ಪಪೂ ಕಾಲೇಜುಗಳ ಪ್ರಾಂಶುಪಾಲರ ಸಂಘದ ಅಧ್ಯಕ್ಷ ವರದರಾಜು, ಪಿ.ಯು. ಒಕ್ಕೂಟದ ಅಧ್ಯಕ್ಷ ಎಸ್. ವೆಂಕಟಸ್ವಾಮಿ, ಪಪೂ ಕಾಲೇಜುಗಳ ಉಪನ್ಯಾಸಕರ ಸಂಘದ ಅಧ್ಯಕ್ಷ ಟಿ.ಕೆ.ನಟರಾಜ್, ಅರ್ಥಶಾಸ್ತ್ರ ಅಧ್ಯಯನ ಕೇಂದ್ರದ ಕಾರ್ಯದರ್ಶಿ ನಾರಾಯಣಪ್ಪ ಭಾಗವಹಿಸಲಿದ್ದಾರೆ.
ಡಿ.ಎನ್.ದೊಡ್ಡಿ ಸರ್ಕಾರಿ ಪಪೂ ಕಾಲೇಜಿನ ಪ್ರಾಂಶುಪಾಲ ಆರ್.ಎಸ್. ಲಿಂಗದೇವರು, ದೊಡ್ಡನಾಯಕನಹಳ್ಳಿಯ ಸರ್ಕಾರಿ ಪಪೂ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಟಿ.ಫ್ರಾನ್ಸಿಸ್ ಜೇವಿಯರ್, ಸುಂದರಪಾಳ್ಯದ ಕಾಲೇಜಿನ ಪಿ.ಕೃಷ್ಣಪ್ಪರನ್ನು ಸನ್ಮಾನಿಸಲಾಗುವುದು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

