ಕೋಲಾರ

ಇಂದಿನಿಂದ ಅಹವಾಲು ಸ್ವೀಕಾರ

Published On :

ಚಿಕ್ಕಬಳ್ಳಾಪುರ:  ಸರ್ಕಾರಿ ಕಚೇರಿಗಳಲ್ಲಿ ಕೆಲಸ ಮಾಡಿಕೊಡಲು ನಿರ್ಲಕ್ಷ ತೋರಿ ವಿಳಂಬ ಮಾಡುವ, ಲಂಚಕ್ಕಾಗಿ ಒತ್ತಾಯಿಸುವ ಅಧಿಕಾರಿ, ಸಿಬ್ಬಂದಿ ವಿರುದ್ಧದ ದೂರು ಸ್ವೀಕರಿಸಲು ಲೋಕಾಯುಕ್ತರು ಸಾರ್ವಜನಿಕರ ಅಹವಾಲು ಸಭೆಯನ್ನು ಹಮ್ಮಿಕೊಂಡಿದ್ದಾರೆ.
ಜು.26ರಂದು ಬೆಳಗ್ಗೆ 11 ಗಂಟೆಗೆ ಚಿಕ್ಕಬಳ್ಳಾಪುರ ನಗರದಲ್ಲಿನ ತಾಲೂಕು ಪಂಚಾಯ್ತಿ ಕಚೇರಿ ಸಭಾಂಗಣ, ಮಧ್ಯಾಹ್ನ 3 ಗಂಟೆಗೆ ಗೌರಿಬಿದನೂರು ತಾಲೂಕಿನ ತಾಪಂ ಸಾಮರ್ಥ್ಯ ಸೌಧ, 30ರಂದು ಬೆಳಗ್ಗೆ 11 ಗಂಟೆಗೆ ಬಾಗೇಪಲ್ಲಿ ತಾಲೂಕಿನ ಪುರಸಭೆ ಸಭಾಂಗಣ ಹಾಗೂ ಮಧ್ಯಾಹ್ನ 3 ಗಂಟೆಗೆ ಗುಡಿಬಂಡೆ ತಾಲೂಕು ಪಂಚಾಯ್ತಿ ಸಭಾಂಗಣ, 31ರಂದು ಬೆಳಗ್ಗೆ 11 ಗಂಟೆಗೆ ಚಿಂತಾಮಣಿ ತಾಲೂಕಿನ ಮುರುಗಮಲ್ಲದ ಗ್ರಾಪಂ ಸಭಾಂಗಣ ಹಾಗೂ ಮಧ್ಯಾಹ್ನ 3 ಗಂಟೆಗೆ ಶಿಡ್ಲಘಟ್ಟ ತಾಲೂಕಿನ ತಾ.ಪಂ. ಕಚೇರಿ ಸಭಾಂಗಣದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಾಗುವುದು. ನಿಗದಿತ ದಿನಗಳಂದು ಆಯಾ ತಾಲೂಕು ವ್ಯಾಪ್ತಿಯ ಜನರು ಸರ್ಕಾರಿ ಕಚೇರಿಗಳಲ್ಲಿ ಕೆಲಸ ಮಾಡಿಕೊಡಲು ವಿಳಂಬ ಮಾಡುತ್ತಿದ್ದಲ್ಲಿ, ನಿರ್ಲಕ್ಷ್ಯ ತೋರುತ್ತಿದ್ದಲ್ಲಿ ಮತ್ತು ಹಣಕ್ಕೆ ಒತ್ತಾಯಿಸುತ್ತಿದ್ದಲ್ಲಿ ಅಂತಹ ಅಧಿಕಾರಿ, ಸಿಬ್ಬಂದಿ ವಿರುದ್ಧ ಸಾರ್ವಜನಿಕರು ದೂರುಗಳನ್ನು ನೀಡಬಹುದು.
ತಾಲೂ ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಲೋಕಾಯುಕ್ತ ಪೊಲೀಸ್ ಇನ್‌ಸ್ಪೆಕ್ಟರ್ ಎ.ಜಿ.ಮಂಜೇಗೌಡ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.