ಕೊಳವೆಬಾವಿ ಕೊರೆಸಲು ನೋಂದಣಿ ಮಾಡಿಸಿ
ಚಿಕ್ಕಬಳ್ಳಾಪುರ: ಅಂತರ್ಜಲಮಟ್ಟ ದಿನೇ ದಿನೇ ಕುಸಿಯುತ್ತಿರುವುದರ ನಡುವೆ ಇನ್ನೂ ಮುಂದೆ ಕೊಳವೆಬಾವಿಗಳನ್ನು ಕೊರೆಸಲು ಕರ್ನಾಟಕ ಅಂತರ್ಜಲ ಪ್ರಾಧಿಕಾರದಲ್ಲಿ ಕಡ್ಡಾಯವಾಗಿ ನೋಂದಣಿ ಮಾಡಿಸಬೇಕಾಗಿದೆ. ಅಂತರ್ಜಲದ ಮಿತಿ ಮೀರಿದ ಬಳಕೆ ನಿಯಂತ್ರಿಸಿ, ಅಂತರ್ಜಲ ಪಟ್ಟ ಅಭಿವೃದ್ಧಿಪಡಿಸಲು ಕರ್ನಾಟಕ ಅಂತರ್ಜಲ ಅಧಿನಿಯಮ ಮತ್ತು ನಿಯಮಾವಳಿ ಅನ್ವಯ ಅರ್ಜಿ ನಮೂನೆ, ಶುಲ್ಕದೊಂದಿಗೆ ಸಂಬಂಧಪಟ್ಟವರು ಕೊಳವೆಬಾವಿ ಕಡ್ಡಾಯವಾಗಿ ನೋಂದಣಿ ಮಾಡಿಸಿಕೊಳ್ಳುವ ನಿಯಮವನ್ನು ಜಾರಿಗೊಳಿಸಲಾಗಿದೆ. ಈ ಬಗ್ಗೆ ಸರ್ಕಾರ ಈಗಾಗಲೇ ಆದೇಶ ಹೊರಡಿಸಿದೆ. ನಿಯಮ ಉಲ್ಲಂಘಿಸಿದರೆ ಕಾನೂನು ರೀತ್ಯಾ ಕ್ರಮ ಕೈಗೊಳ್ಳಲಾಗುವುದು. ಹೆಚ್ಚಿನ ಮಾಹಿತಿಗೆ ಸದಸ್ಯ ಕಾರ್ಯದರ್ಶಿಗಳು, ಜಿಲ್ಲಾ ಅಂತರ್ಜಲ ಪ್ರಾಧಿಕಾರ, ಹಿರಿಯ ಭೂವಿಜ್ಞಾನಿಗಳು, ಅಂತರ್ಜಲ ವಿಭಾಗ, ಗಣಿ ಮತ್ತು ಭೂವಿಜ್ಞಾನ ಇಲಾಖೆ, ಚಿಕ್ಕಬಳ್ಳಾಪುರ, ಬೆಂಗಳೂರು ಹೆಚ್ಚುವರಿ ನಿರ್ದೇಶಕರನ್ನು ಸಂಪರ್ಕಿಸಬಹುದು.
ಕಾನೂನು ಕ್ರಮ: ಜಿಲ್ಲೆಯಲ್ಲಿ ಅಂತರ್ಜಲ ಪ್ರಾಧಿಕಾರದಲ್ಲಿ ನೋಂದಣಿ ಮಾಡಿಸದೆ ಅನಧಿಕೃತವಾಗಿ ಬೋರ್ವೆಲ್ ಕೊರೆಯುವ ರಿಗ್ ಯಂತ್ರಗಳ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಅಂತರ್ಜಲ ಪ್ರಾಧಿಕಾರದ ಅಧ್ಯಕ್ಷರಾದ ಡಾ.ವಿಶಾಲ್ ಆರ್. ತಿಳಿಸಿದ್ದಾರೆ.
ಅಂಗನವಾಡಿಗೆ ಅರ್ಜಿ ಆಹ್ವಾನ
ಚಿಕ್ಕಬಳ್ಳಾಪುರ: ಚಿಂತಾಮಣಿ ತಾಲೂಕಿನಾದ್ಯಂತ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಸ್ಥಳೀಯ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು 18 ರಿಂದ 44 ವರ್ಷದ ವಯೋವುತಿಯವರಾಗಿರಬೇಕು. ಸರ್ಕಾರದ ನಿಯಮಾನುಸಾರ ವಿಧವೆಯರಿಗೆ ಆದ್ಯತೆ ನೀಡಲಾಗುತ್ತದೆ. ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಯ ಪ್ರಕಟಣೆ ಹುದ್ದೆಗಳು ಖಾಲಿ ಇರುವ ಗ್ರಾಮದ ಗ್ರಾಮ ಪಂಚಾಯ್ತಿ, ಪ್ರಾಥಮಿಕ ಆರೋಗ್ಯ ಕೇಂದ್ರ, ಆಯಾ ಗ್ರಾಮದ ಶಾಲೆ, ಅಂಗನವಾಡಿ ಕೇಂದ್ರಗಳಲ್ಲಿ ಪ್ರಕಟಿಸಲಾಗಿದೆ. ನಿಗದಿಪಡಿಸಿರುವ ದಾಖಲೆಯೊಂದಿಗೆ ಅರ್ಜಿಯನ್ನು ಆ.24 ರೊಳಗೆ ಸಲ್ಲಿಸಬಹುದು ಎಂದು ಚಿಂತಾಮಣಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ತಿಳಿಸಿದ್ದಾರೆ.
ಪದಾಧಿಕಾರಿಗಳ ಪದಗ್ರಹಣ
ಕೆ.ಆರ್. ನಗರ: ರೋಟರಿ ಸಂಸ್ಥೆಯ 2013- 14ನೇ ಸಾಲಿನ ಅಧ್ಯಕ್ಷ ಮತ್ತು ಕಾರ್ಯದರ್ಶಿಯ ಪದಗ್ರಹಣ ಸಮಾರಂಭ ಇಲ್ಲಿನ ಐಎಂಎ ಭವನದಲ್ಲಿ ನಡೆಯಿತು.
ಅಧ್ಯಕ್ಷರಾಗಿ ಸಿ.ಆರ್. ಮಲ್ಲಿಕಾರ್ಜುನ್ ಮತ್ತು ಕಾರ್ಯದರ್ಶಿಯಾಗಿ ರವಿಶಂಕರ್ ಅಧಿಕಾರ ಸ್ವೀಕರಿಸಿದರು. ನಂತರ ನೂತನ ಅಧ್ಯಕ್ಷರು ಮಾತನಾಡಿ, ಸಮಾಜದ ಒಳಿತಿಗಾಗಿ ಸಂಸ್ಥೆ ವತಿಯಿಂದ ಅನೇಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು, ಪ್ರತಿ ವರ್ಷದಂತೆ ಪೊಲಿಯೋ, ಕಣ್ಣು ಮತ್ತು ಆರೋಗ್ಯದ ಉಚಿತ ತಪಾಸಣಾ ಶಿಬಿರ ನಡೆಸಲಾಗುವುದು.
ಕ್ರೀಡಾಪಟುಗಳಿಗೆ ಸನ್ಮಾನ
ಭಾರತೀನಗರ: ಇಲ್ಲಿಗೆ ಸಮೀಪದ ಚಂದೂಪುರದಲ್ಲಿ ನಡೆದ ಹೋಬಳಿಮಟ್ಟದ ಪ್ರಾಥಮಿಕ ಶಾಲಾ ಕ್ರೀಡಾಕೂಟದ ಪಂದ್ಯಾವಳಿಯಲ್ಲಿ ಜನನಿ ವಿದ್ಯಾಸಂಸ್ಥೆಯ ಕ್ರೀಡಾಪಟುಗಳು, ವಾಲಿಬಾಲ್, ಥ್ರೋಬಾಲ್, ಬಾಲ್ ಬ್ಯಾಡ್ಮಿಂಟನ್ನಲ್ಲಿ ಪ್ರಥಮ ಸ್ಥಾನ ಗಳಿಸಿ ತಾಲೂಕುಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಅಥ್ಸೆಟಿಕ್ಸ್ ವಿಭಾಗದಲ್ಲಿ ಬಿ.ಎಂ. ಸಹನಾ 100 ಮೀಟರ್ ಓಟದಲ್ಲಿ ದ್ವೀತಿಯ, ಶಾಟ್ಪುಟ್ನಲ್ಲಿ ಪ್ರಥಮ ಸ್ಥಾನ ಗಳಿಸಿದರೆ, ಕೆ.ಎಸ್. ಸಂಗೀತ 400 ಮೀಟರ್ ಓಟ ಹಾಗೂ ರಿಲೆಯಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಕ್ರೀಡಾಪಟುಗಳಿಗೆ ಹಾಗೂ ತರಬೇತಿ ನೀಡಿದ ದೈಹಿಕ ಶಿಕ್ಷಣ ಶಿಕ್ಷಕ ಬಸವರಾಜು ಅವರಿಗೆ ಅಭಿನಂದನೆ ಸಲ್ಲಿಸಲಾಯಿತು. ಕಾರ್ಯದರ್ಶಿ ಬಿ.ಕೆ.ಜಗದೀಶ್, ಮುಖ್ಯ ಶಿಕ್ಷಕಿ ಸೌಮ್ಯಾ, ಶಿಕ್ಷಕರು ಹಾಗೂ ಗೌತಮ್ ಭಾರದ್ವಾಜ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

