ಬೈಕ್ ಡಿಕ್ಕಿ: ವ್ಯಕ್ತಿ ಸಾವು
ಕೆಜಿಎಫ್: ರಸ್ತೆ ದಾಟುತ್ತಿದ್ದ ವೇಳೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ.
ಬೆಮೆಲ್ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಆಲದಮರ ಬಳಿ ಇರುವ ಶಕ್ತಿ ಗಣೇಶ್ ದರ್ಶನ ಹೊಟೇಲ್ನಲ್ಲಿ ಕೆಲಸ ಮಾಡುತ್ತಿದ್ದ ಪತ್ರಿ ಶ್ರೀಕಂಠಪ್ಪ ಮೃತಪಟ್ಟವರು. ಬೆಳಗಿನ ಜಾವ ಎಂದಿನಂತೆ ವಾಯು ವಿಹಾರಕ್ಕೆ ಹೋಗಿದ್ದಾಗ ಸುಮಾರು 6.30ಕ್ಕೆ ಹಿಂತಿರುಗಿ ಹೊಟೇಲ್ಗೆ ಬರಲು ಬೆಮೆಲ್ ಕಾರ್ಖಾನೆಯ ಆರ್ ಅಂಡ್ ಡಿ ವಿಭಾಗದ ಮುಂದೆ ರಸ್ತೆ ದಾಟುತ್ತಿದ್ದರು.
ಆಗ ಕೆಜಿಎಫ್ ಕಡೆಯಿಂದ ಬಂದ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಪತ್ರಿ ಶ್ರೀಕಂಠಪ್ಪ ಅವರ ಎರಡೂ ಮೊಣಕಾಲು ಹಾಗೂ ಮತ್ತಿತರ ಭಾಗಗಳಿ ಗಂಭೀರ ಗಾಯಗಳಾದವು.
ಸ್ಥಳೀಯರು ಆಟೋವೊಂದರಲ್ಲಿ ಬೆಮೆಲ್ ಮೆಡಿಕಲ್ ಸೆಂಟರ್ಗೆ ಸಾಗಿಸಿದರು. ಅಲ್ಲಿ ಪ್ರಥಮ ಚಿಕಿತ್ಸೆ ನೀಡಿದ ನಂತರ ವೈದ್ಯರ ಸೂಚನೆಯಂತೆ ಹೆಚ್ಚಿನ ಚಿಕಿತ್ಸೆಗಾಗಿ ಕೋಲಾರದ ಎಸ್.ಎನ್.ಆರ್. ಆಸ್ಪತ್ರೆಗೆ ಕರೆದೊಯ್ಯುತ್ತಿರುವಾಗ ಮಾರ್ಗ ಮಧ್ಯೆ ಶ್ರೀಕಂಠಪ್ಪ ಸಾವನ್ನಪ್ಪಿದ್ದಾರೆ.
ದಂಡಾಯುದ ಪಾಣಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಎರಡು ಗುಂಪುಗಳ ನಡುವೆ ಘರ್ಷಣೆ: ಹಲವರಿಗೆ ಗಾಯ
ಚಿಂತಾಮಣಿ: ದಾರಿ ವಿಷಯವಾಗಿ ಆಲಂಬಗಿರಿ ಗ್ರಾಮದಲ್ಲಿ 2 ಗುಂಪುಗಳ ನಡುವೆ ಘರ್ಷಣೆಯಾಗಿ ಹಲವರು ತೀವ್ರವಾಗಿ ಗಾಯಗೊಂಡಿರುವ ಘಟನೆ ಗುರುವಾರ ನಡೆದಿದೆ.
ಚಿಂತಾಮಣಿ ತಾಲೂಕಿನ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಆಲಂಬಗಿರಿಯಲ್ಲಿ ಒಂದೇ ಕೋಮಿಗೆ ಸೇರಿದ ವರಲಕ್ಷ್ಮಿ ಹಾಗೂ ಮಂಜುಳಮ್ಮ ಎಂಬವರು ಮನೆ ಮುಂದೆ ದಾರಿ ವಿಷಯವಾಗಿ ಮಾತಿಗೆ ಮಾತು ಬೆಳೆಸಿದ್ದಾರೆ. ನಂತರ ಗುರುವಾರ ಈ ಸಂಬಂಧ ಪರ-ವಿರೋಧ ಎರಡು ಗುಂಪುಗಳು ಕೈ ಕೈ ಮಿಲಾಯಿಸಿದ ಪರಿಣಾಮ ಕೃಷ್ಣಪ್ಪ, ವರಲಕ್ಷ್ಮಿ ಹಾಗೂ ಮಂಜುಳಮ್ಮ ಎಂಬವರು ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಎರಡೂ ಗುಂಪಿನ ಕಡೆಯಿಂದ 15ಕ್ಕೂ ಹೆಚ್ಚು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ಘಟನೆ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಸೂಕ್ತ ಪೊಲೀಸ್ ಬಂದೋಬಸ್ತ್ಕಲ್ಪಿಸಲಾಗಿದೆ. ಅಲ್ಲದೆ, ಈ ಸಂಬಂಧ ಎರಡೂ ಕಡೆಯಿಂದ ದೂರು, ಪ್ರತಿದೂರು ಸಲ್ಲಿಕೆಯಾಗಿವೆ.
ವ್ಯಕ್ತಿ ಅನುಮಾನಾಸ್ಪದ ಸಾವು
ಚಿಂತಾಮಣಿ: ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ನೇಣಿಗೆ ಶರಣಾಗಿರುವ ಘಟನೆ ಪಟ್ಟಣದ ಇಡ್ಲಿಪಾಳ್ಯದಲ್ಲಿ ನಡೆದಿದೆ.
ತಾಲೂಕಿನ ಕೋಡೇಗಂಡ್ಲು ನಿವಾಸಿ ಶ್ರೀನಿವಾಸ್ ನೇಣಿಗೆ ಶರಣಾದ ವ್ಯಕ್ತಿ. ಪಟ್ಟಣದ ಗಾಂಧಿನಗರದ (ಇಡ್ಲಿಪಾಳ್ಯ) ಬಳಿ ಹಲವು ದಿನಗಳಿಂದ ವಾಸವಾಗಿದ್ದ. ಜೀವನದಲ್ಲಿ ಬೇಸತ್ತು ಆತ್ಮಹತ್ಯೆಗೆ ಶರಣಾಗಿರಬಹುದೆಂದು ಶಂಕಿಸಲಾಗಿದೆ. ಸುದ್ದಿ ತಿಳಿದ ಪೊಲೀಸರು ತಕ್ಷಣ ಸ್ಥಳಕ್ಕಾಗಮಿಸಿ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

