ಸೌಲಭ್ಯಕ್ಕೆ ಆಗ್ರಹಿಸಿ ಹಾಸ್ಟೆಲ್ ವಿದ್ಯಾರ್ಥಿಗಳ ಪ್ರತಿಭಟನೆ
ಬಂಗಾರಪೇಟೆ: 'ದೇವರು ವರ ಕೊಟ್ಟರೂ ಪೂಜಾರಿ ಕೊಡಲ್ಲ' ಎಂಬ ಗಾದೆ ಮಾತಿನಂತೆ ಸರ್ಕಾರ ಬಡ ಮಕ್ಕಳ ವಸತಿ ನಿಲಯಗಳಿಗೆ ಹಲವು ಮೂಲ ಸೌಲಭ್ಯಗಳನ್ನು ಒದಗಿಸಿದ್ದರೂ ಸಹ ಇಲ್ಲಿನ ಅಧಿಕಾರಿಗಳು ಮಕ್ಕಳಿಗೆ ಕಲ್ಪಿಸದೆ ವಂಚಿಸಲಾಗುತ್ತಿದೆ ಎಂದು ಆರೋಪಿಸಿ ವಸತಿ ನಿಲಯ ವಿದ್ಯಾರ್ಥಿಗಳ ಮಕ್ಕಳು ಸಮಾಜ ಕಲ್ಯಾಣ ಇಲಾಖೆ ಕಚೇರಿ ಧರಣಿ ಧರಣಿ ಮಾಡಿದರು.
ಪಟ್ಟಣದ ಸರ್ಕಾರಿ ಬಾಲಕರ ವಿದ್ಯಾರ್ಥಿಗಳ ವಸತಿ ನಿಲಯದಲ್ಲಿ ಯಾವುದೇ ಅಗತ್ಯ ಅನುಕೂಲಗಳಿಲ್ಲಿಲ್ಲ. ಪ್ರತಿ ದಿನ ಅವ್ಯವಸ್ಥೆಯಲ್ಲಿ ಕಾಲ ಕಲೆಯಬೇಕು. ಈ ಬಗ್ಗೆ ಹಲವು ಬಾರಿ ವಾರ್ಡನ್ ಗಮನಕ್ಕೆ ತಂದಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ವಿದ್ಯಾರ್ಥಿಗಳು ದೂರಿದರು.
ವಸತಿ ನಿಲಯದಲ್ಲಿ ಮಲಗಲು ಚಾಪೆಗಳಿಲ್ಲ. ಊಟ-ತಿಂಡಿಗೆ ಪೂರಕವಾದ ತಟ್ಟೆ, ನೀರು ಕುಡಿಯಲು ಲೋಟಗಳ ಸೌಲಭ್ಯವಿಲ್ಲ. ನಿಲಯದಲ್ಲಿ ಗಬ್ಬುನಾತ ಬೀರುವುದು. ಸರ್ಕಾರದ ಆದೇಶದಂತೆ ಪ್ರತಿದಿನ ಊಟ ಕೊಡುವುದಿಲ್ಲ. ಹೀಗೆ ಇಲ್ಲಗಳ ನಡುವೆ ನಾವು ಕಾಲ ಕಳೆಯುತ್ತಿದ್ದೇವೆ. ಪ್ರತಿಭಟನೆ ಮಾಡುವಾಗ ಅಧಿಕಾರಿಗಳು ಸ್ಥಳಕ್ಕೆ ಬಂದು ಸಮಸ್ಯೆ ಬಗೆಹರಿಸುವ ಮಾತುಗಳನ್ನು ಆಡುತ್ತಾರೆ. ಮತ್ತೆ ಈ ಕಡೆ ಮುಖ ಸಹ ಹಾಕುವುದಿಲ್ಲ ಎಂದು ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆಯನ್ನು ತೀವ್ರವಾಗಿ ಖಂಡಿಸಿದರು.
ವಸತಿ ನಿಲಯವನ್ನು ಅನುಕೂಲವಿರುವ ಕಡೆ ಸ್ಥಳಾಂತರಿಸಬೇಕು. ನಿಲಯಕ್ಕೆ ಸೂಕ್ತ ಶೌಚಾಲಯಗಳನ್ನು ಕಲ್ಪಿಸಬೇಕು. ಸರ್ಕಾರದ ಆದೇಶದಂತೆ ಊಟ ಕೊಡಬೇಕು. ಕುಡಿಯುವ ನೀರಿನ ಸಮಸ್ಯೆ ಇದ್ದು ಶುದ್ಧೀಕರಣ ಯಂತ್ರವನ್ನು ಅಳವಡಿಸಬೇಕು. ಹದಗೆಟ್ಟಿರುವ ಸೋಲಾರ್ ಯಂತ್ರವನ್ನು ದುರಸ್ತಿಗೊಳಿಸಬೇಕು. ಇತರೇ ಅಗತ್ಯ ಸೌಲಭ್ಯಗಳನ್ನು ಕಲ್ಪಿಸದಿದ್ದರೆ ನಿಲಯಕ್ಕೆ ಬೀಗ ಜಡಿದು ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.
ಅರ್ಧ ಗಂಟೆ ಕಚೇರಿಗೆ ಬೀಗ ಹಾಕಿ ಪ್ರತಿಭಟನೆ ಮಾಡಿದರು. ಪ್ರತಿಭಟನೆ ನೇತೃತ್ವವನ್ನು ವೆಂಕಟಪ್ಪ, ಮುನಿರಾಜು, ಕೇಶವ, ಸಂತೋಷ್ ಮತ್ತಿತರರು ವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

