ಕೋಚಿಮುಲ್ ಅಭಿವೃದ್ಧಿಗೆ 65 ಕೋಟಿ ಬಿಡುಗಡೆ ಮಾಡಲು ಸಿಎಂಗೆ ಮನವಿ
ಕೋಲಾರ: ಅವಿಭಜಿತ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ಹಾಲು ಉತ್ಪಾದಕರ ಜೀವನಾಡಿಯಾಗಿರುವ ಕೋಚಿಮುಲ್ ಅಭಿವೃದ್ಧಿಗೆ ತಕ್ಷಣ 56 ಕೋಟಿ ರು.ಅನುದಾನ ಬಿಡುಗಡೆ ಮಾಡುವಂತೆ ಆಡಳಿತ ಮಂಡಳಿಯವರು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಸಲ್ಲಿಸಿದ್ದಾರೆ.
ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರಿ ಹಾಲು ಒಕ್ಕೂಟದ ಅಧ್ಯಕ್ಷ ಮಂಜುನಾಥ ರೆಡ್ಡಿ ಅವರ ನೇತೃತ್ವದಲ್ಲಿ ಒಕ್ಕೂಟದ ನಿರ್ದೇಶಕರು ಮುಖ್ಯಮಂತ್ರಿ ಹಾಗೂ ಗೌರಿಬಿದನೂರು ವಿಧಾನಸಭಾ ಕ್ಷೇತ್ರದ ಶಾಸಕರೂ ಆದ ವಿಧಾನಸಭೆಯ ಉಪಾಧ್ಯಕ್ಷ ಶಿವಶಂಕರರೆಡ್ಡಿ ಅವರಿಗೆ ಪ್ರತ್ಯೇಕವಾಗಿ ಭೇಟಿಯಾಗಿ ಚಿಕ್ಕಬಳ್ಳಾಪುರ ತಾಲೂಕಿನ ನಂದಿ ಕ್ರಾಸ್ ಬಳಿ ಸ್ಥಾಪಿಸಲು ಉದ್ದೇಶಿಸಿರುವ ಮೆರಾಡೇರಿ ಯೋಜನೆಗೆ 30 ಕೋಟಿ ಹಾಗೂ ಹಾಲಿನ ಪುಡಿ ತಯಾರಿಕಾ ಘಟಕಕ್ಕೆ 35 ಕೋಟಿ ಅನುದಾನ ನೀಡುವಂತೆ ಮನವಿ ಮಾಡಿದರು.
ಮುಖ್ಯಮಂತ್ರಿ ಹಾಗೂ ವಿಧಾನಸಭೆಯ ಉಪಾಧ್ಯಕ್ಷರು ಒಕ್ಕೂಟದ ಆಡಳಿತ ಮಂಡಳಿ ತೃಪ್ತಿಪಡುವ ರೀತಿಯಲ್ಲಿ ಭರವಸೆ ನೀಡಿದ್ದಾರೆಂದು ಒಕ್ಕೂಟದ ನಿರ್ವಾಹಕ ನಿರ್ದೇಶಕ ಎನ್. ಹನುಮೇಶ್ ತಿಳಿಸಿದ್ದಾರೆ.
ಅಧ್ಯಕ್ಷರ ನೇತೃತ್ವದ ನಿಯೋಗದಲ್ಲಿ ಒಕ್ಕೂಟದ ನಿರ್ದೇಶಕರಾದ ಕೆ. ಗುಡಿಯಪ್ಪ, ಕೆ.ವಿ. ನಾಗರಾಜು, ಜಯಸಿಂಹಕೃಷ್ಣಪ್ಪ, ಕೆ.ಎನ್. ನಾಗರಾಜು, ಎ.ವಿ. ಪ್ರಸನ್ನ, ಸಿ. ಮುನಿವೆಂಕಟಪ್ಪ, ಮದ್ದೇರಿ ಎಸ್. ರಾಮೇಗೌಡ , ಎಸ್.ವಿ. ಸುಬ್ಬಾರೆಡ್ಡಿ, ಎನ್.ಅಶ್ವಥಪ್ಪ ಹಾಗೂ ಗಂಗಮ್ಮ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

