ಕೋಲಾರ

'ಪರಿಸರ ವಾಸಿಯೇ ಉತ್ತಮ ವಾತಾವರಣ ಸೃಷ್ಟಿ'

Published On :

ಕ.ಪ್ರ.ವಾರ್ತೆ ಮಾಲೂರು ಜು. 26
ವಿದ್ಯಾರ್ಥಿಗಳು ಭವಿಷ್ಯದಲ್ಲಿ ಪರಿಸರವಾದಿಗಳಾಗುವ ಬದಲು ಪರಿಸರ ವಾಸಿಗಳಾದಾಗ ಮಾತ್ರ ಉತ್ತಮ ವಾತಾವರಣ ಸೃಷ್ಟಿಸಲು ಸಾಧ್ಯ ಎಂದು ಖ್ಯಾತ ಸಾಹಿತಿ, ಪ್ರಾಂಶುಪಾಲ ನಂಗಲಿ ಚಂದ್ರಶೇಖರ್ ಹೇಳಿದರು.
ಇಲ್ಲಿನ ಜೆಎಸ್ಎಸ್ ಪದವಿಪೂರ್ವ ಕಾಲೇಜಿನಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಇಂದಿನ ಯುವ ಜನಾಂಗದಲ್ಲಿ ಪರಿಸರದ ಕಾಳಜಿ ಇರಬೇಕು. ಅದಕ್ಕಾಗಿ ಪರಿಸರಕ್ಕಾಗಿ ವಾದಿಸುವುದನ್ನು ಬಿಟ್ಟು ಉತ್ತಮ ಪರಿಸರ ಸೃಷ್ಟಿಸುವ ಕಡೆ ಗಮನ ನೀಡಬೇಕು. ಜ್ಞಾನಾರ್ಜನೆಗೆ ಶಬ್ದ ಜ್ಞಾನಕ್ಕಿಂತ ಬಿಂಬ ಜ್ಞಾನ ಬೆಳೆಸಿಕೊಳ್ಳುವುದು ಉತ್ತಮ ಎಂದರು.
ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿರುವ ವಿಭಾಗದ ವಿಷಯಗಳ ಜತೆಯಲ್ಲಿ ಇತರೆ ವಿಷಯಗಳ ಬಗ್ಗೆ ತಿಳಿದುಕೊಳ್ಳಬೇಕು. ಆಗ ಮಾತ್ರ ವಿದ್ಯಾರ್ಥಿ ಪರಿಪೂರ್ಣನಾಗಲು ಸಾಧ್ಯ. ಈಗಿನ 5 ವರ್ಷ ಕಷ್ಟಪಟ್ಟು ವ್ಯಾಸಂಗ ಮಾಡಿದರೆ ಭವಿಷ್ಯದ 50 ವರ್ಷ ಸುಖವಾಗಿ ಬದುಕು ಸಾಗಿಸಬಹುದು ಎಂಬುದನ್ನು ವಿದ್ಯಾರ್ಥಿಗಳು ಅರಿತಿರಬೇಕು ಎಂದರು. ಖ್ಯಾತ ಹಿನ್ನೆಲೆ ಗಾಯಕ ಪಿಚ್ಚಳ್ಳಿ ಶ್ರೀನಿವಾಸ್ ಮಾತನಾಡಿ, ನಮ್ಮ ನಾಡಿನ ಜನಪದ ಸಂಸ್ಕೃತಿ ಮರೆಯಾಗುತ್ತಿರುವ ಇಂದಿನ ಸಂದರ್ಭದಲ್ಲಿ ಯುವ ಜನಾಂಗವು ಜನಪದ ಗೀತೆಗಳನ್ನು ಕಲಿಯುವ ಮೂಲಕ ನಮ್ಮ ನಾಡಿನ ಜನಪದ ಸೊಗಡು ಉಳಿಸಬೇಕು ಎಂದರು. ಕಾಲೇಜು ಪ್ರಾಂಶುಪಾಲ ಎಚ್.ಪಿ. ಶಿವಾನಂದ ಅಧ್ಯಕ್ಷತೆ ವಹಿಸಿದ್ದರು.ಕಾರ್ಯಕ್ರಮದಲ್ಲಿ ಅಕ್ಷತಾ ಪ್ರಾರ್ಥಿಸಿದರು. ನಿಖಿಲ್ ಸ್ವಾಗತಿಸಿದರು. ಸುಷ್ಮಾ ಕಾರ್ಯಕ್ರಮ ನಿರೂಪಿಸಿದರು. ಸಂಹಿತಾ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.