ರೈಲಿಂದ ಬಿದ್ದು ಯುವತಿ ಸಾವು
ಕ.ಪ್ರ.ವಾರ್ತೆ ಕೆಜಿಎಫ್ ಜು. 26
ಬೆಂಗಳೂರು-ಮಾರಿಕುಪ್ಪಂ ಸ್ವರ್ಣ ಪ್ಯಾಸೆಂಜರ್ ರೈಲಿನಿಂದ ಇಳಿಯುವಾಗ ವಿದ್ಯಾರ್ಥಿನಿಯೊಬ್ಬಳು ಸಿಲುಕಿಕೊಂಡು ಸ್ಥಳದಲ್ಲೇ ಮೃತಪಟ್ಟ ಘಟನೆ ನಗರದ ಉರಿಗಾಂ ರೈಲ್ವೆ ನಿಲ್ದಾಣ ಬಳಿ ಸಂಭವಿಸಿದೆ.
ಬೆಮೆಲ್ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಜಯನಗರ ನಿವಾಸಿ ವಿ. ರಾಜೇಂದ್ರನ್ ಅವರ ಮಗಳಾದ ಪ್ರಿಯಾ(19) ಮೃತಪಟ್ಟ ದುರ್ದೈವಿ. ಬೆಂಗಳೂರಿನ ಮಹಾರಾಣಿ ಯುವತಿಯರ ಕಾಲೇಜಿನಲ್ಲಿ ಬಿಎಸ್ಸಿ ವ್ಯಾಸಾಂಗ ಮಾಡುತ್ತಿದ್ದು ಶುಕ್ರವಾರ ಬೆಳಿಗ್ಗೆ ಬೆಂಗಳೂರಿನಿಂದ ಸ್ವರ್ಣ ಪ್ಯಾಸೆಂಜರ್ ರೈಲಿನಲ್ಲಿ ಬರುತ್ತಿದ್ದು ಕೆಜಿಎಫ್ನ ಉರಿಗಾಂ ರೈಲ್ವೆ ನಿಲ್ದಾಣದಲ್ಲಿ ರೈಲು ಚಾಲನೆಗೊಂಡ ಸಮಯದಲ್ಲಿ ಇಳಿಯುವಾಗ ಪ್ರಿಯಾ ರೈಲಿನಡಿಗೆ ಸಿಲುಕಿಕೊಂಡಿದ್ದರಿಂದ ಈ ದುರಂತ ಸಂಭವಿಸಿದೆ ಎಂದು ರೈಲ್ವೆ ಪೊಲೀಸರು ತಿಳಿಸಿದ್ದಾರೆ. ಮೃತಪಟ್ಟ ಯುವತಿಯ ಮೊಬೈಲ್ ಫೋನ್ನಿಂದ ಆಕೆ ತೆಂದೆ ವಿ. ರಾಜೇಂದ್ರನ್ ಅವರಿಗೆ ವಿಷಯ ತಿಳಿಸಲಾಯಿತು. ಬೆಮೆಲ್ ಕಾರ್ಖಾನೆಯ ಎಲ್.ಡಬ್ಲೂ. ವಿಭಾಗದಲ್ಲಿ ಕೆಲಸ ನಿರ್ವಹಿಸುತ್ತಿರುವ ರಾಜೇಂದ್ರನ್ ತಮ್ಮ ಪತ್ನಿ ಡಿ. ಜಯರಾಣಿ ಅವರೊಂದಿಗೆ ಉರಿಗಾಂ ರೈಲ್ವೆ ನಿಲ್ದಾಣಕ್ಕೆ ಆಗಮಿಸಿದರು. ಬಂಗಾರಪೇಟೆ ರೈಲ್ವೆ ಪೊಲೀಸ್ ಅಧಿಕಾರಿ ಆರ್.ಎಸ್. ಕೊಟಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ನಂತರ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ನಂತರ ಮೃತ ದೇಹವನ್ನು ಪೋಷಕರಿಗೆ ಒಪ್ಪಿಸಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

