ಅನ್ನಭಾಗ್ಯ ಬಡವರಿಗೆ ವರದಾನ: ವರ್ತೂರ್
ಕೋಲಾರ: ಸಿಎಂ ಸಿದ್ಧರಾಮಯ್ಯನವರ ಅನ್ನಭಾಗ್ಯ ಯೋಜನೆ ಬಡವರ ಪಾಲಿಗೆ ವರದಾನವಾಗಿದೆ ಎಂದು ಶಾಸಕ ವರ್ತೂರು ಪ್ರಕಾಶ್ ಅಭಿಪ್ರಾಯಪಟ್ಟರು. ತಾಲೂಕಿನ ಅರಹಳ್ಳಿ ಗ್ರಾಮದಲ್ಲಿ ಅನ್ನಭಾಗ್ಯ ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಅವರು, ರಾಜ್ಯದಲ್ಲಿ ಬಡ ವರ್ಗದ ಜನತೆಗೆ ಮೂರು ಹೊತ್ತಿನ ತುತ್ತು ಕಲ್ಪಿಸುವ ಸಲುವಾಗಿ ಅನ್ನಭಾಗ್ಯ ಯೋಜನೆಯನ್ನು ಸಿದ್ಧರಾಮಯ್ಯನವರು ಅನುಷ್ಠಾನಗೊಳಿಸಿದ್ದಾರೆ ಎಂದರು. ಅನ್ನಭಾಗ್ಯ ಯೋಜನೆ ಜಾರಿಗೊಳಿಸಲು ಸಾಕಷ್ಟು ಅಪಸ್ವರಗಳು ಕೇಳಿ ಬಂದರೂ ಸಿದ್ಧರಾಮಯ್ಯನವರು ಇದ್ಯಾವುದನ್ನು ಲೆಕ್ಕಿಸದೆ ರಾಜ್ಯದ ಬಡವರ ಹಿತದೃಷ್ಟಿಯಿಂದ ಯೋಜನೆ ಜಾರಿಗೆ ಕೊಟ್ಟ ಮಾತಿನಂತೆ ನಡೆದುಕೊಂಡರು ಎಂದು ಹೇಳಿದರು. ಕ್ಷೇತ್ರದಲ್ಲಿನ ನ್ಯಾಯಬೆಲೆ ಅಂಗಡಿಗಳಲ್ಲಿ ಅನ್ನಭಾಗ್ಯ ಯೋಜನೆಯನ್ನು ಸಮರ್ಪಕವಾಗಿ ಜಾರಿಗೊಳಿಸದಿದ್ದರೆ ನ್ಯಾಯಬೆಲೆ ಅಂಗಡಿಗಳ ಪರವಾನಗಿ ರದ್ದುಪಡಿಸಲು ಜಿಲ್ಲಾಧಿಕಾರಿಗಳಿಗೆ ಆದೇಶಿಸುವುದಾಗಿ ಶಾಸಕರು ತಿಳಿಸಿದರು.ಕ್ಷೇತ್ರದಲ್ಲಿ ಬಡವರ್ಗದ ಜನತೆಯೇ ಹೆಚ್ಚಾಗಿ ವಾಸಿಸುವುದರಿಂದ ಯೋಜನೆ ಸದ್ಬಳಕೆಗೆ ನ್ಯಾಯಬೆಲೆ ಅಂಗಡಿ ಮಾಲೀಕರು ಮುಂದಾಗಬೇಕು ಮತ್ತು ಈ ಯೋಜನೆಯನ್ನು ಮಾನವೀಯ ಕಳಕಳಿಯ ದೃಷ್ಟಿಕೋನದಿಂದ ನೋಡಿದರೆ ಯೋಜನೆ ತಾನಾಗೆ ಬಡವರಿಗೆ ತಲುಪುತ್ತದೆ ಎಂದರಲ್ಲದೆ ಯೋಜನೆಯಲ್ಲಿ ಅಸಮರ್ಪಕತೆ ಕಂಡು ಬಂದರೆ ಸಹಿಸುವುದಿಲ್ಲ ಎಂದು ಎಚ್ಚರಿಸಿದರು. ವಿಧಾನಸಭೆ ಅಧಿವೇಶನ ಮುಗಿದ ಬಳಿಕ ಕ್ಷೇತ್ರಕ್ಕೆ ಸಂಬಂಧಪಟ್ಟ ಸರಕಾರಿ ಕಚೇರಿಗಳಿಗೆ ಭೇಟಿ ನೀಡಿ ಅಲ್ಲಿನ ನ್ಯೂನತೆಗಳನ್ನು ಸರಿಪಡಿಸುವುದಲ್ಲದೆ, ಆಡಳಿತದಲ್ಲಿ ಚುರುಕು ಮುಟ್ಟಿಸುವುದಾಗಿ ವರ್ತೂರು ಪ್ರಕಾಶ್ ಪ್ರಕಟಿಸಿದರು. ಬೆಗ್ಲಿ ಪ್ರಕಾಶ್, ರಘುರಾಂ, ವಕ್ಕಲೇರಿ ರಾಜಪ್ಪ, ಪಿ.ಎಲ್.ಡಿ ಬ್ಯಾಂಕ್ ಉಪಾಧ್ಯಕ್ಷ ಕೃಷ್ಣೇಗೌಡ, ಗ್ರಾಪಂ ಅಧ್ಯಕ್ಷ ಮುನಿಸ್ವಾಮಿರೆಡ್ಡಿ, ಉಪಾಧ್ಯಕ್ಷೆ ರತ್ನಮ್ಮ ಹನುಮಪ್ಪ, ಮಾಜಿ ಅಧ್ಯಕ್ಷ ಚಂದ್ರಶೇಖರ್, ಸದಸ್ಯ ವೆಂಕಟೇಶ್, ವಿಠೋಬ, ಲಿಂಗೇಗೌಡ, ಚಂದ್ರಣ್ಣ, ಹೊಗರಿ ರಮೇಶ್, ಅರಹಳ್ಳಿ ಕೃಷ್ಣಪ್ಪ, ಡೈರಿ ಸೀನಪ್ಪ, ಭಗವಂತಪ್ಪ, ಕೃಷ್ಣಪ್ಪ ಮತ್ತಿತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

