ಸಕ್ಕರೆ ಕಾಯಿಲೆ ರೋಗಿಗಳ ತಪಾಸಣೆ ಶಿಬಿರ
ಚಿಕ್ಕಬಳ್ಳಾಪುರ: ನಗರದ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಸಕ್ಕರೆ ಕಾಯಿಲೆ ರೋಗಿಗಳಿಗೆ ಕಣ್ಣಿನ ನರ ತಪಾಸಣೆ ಶಿಬಿರ ಯಶಸ್ವಿಯಾಗಿ ನಡೆಯಿತು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸರ್ಕಾರಿ ಜಿಲ್ಲಾ ಆಸ್ಪತ್ರೆ, ಆರ್.ಎಲ್. ಜಾಲಪ್ಪ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಮತ್ತು ಶ್ರೀ ದೇವರಾಜ ಅರಸು ವೈದ್ಯಕೀಯ ಮಹಾವಿದ್ಯಾಲಯದ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ನಡೆದ ಶಿಬಿರದಲ್ಲಿ 96 ಮಧುಮೇಹಿಗಳು ತಪಾಸಣೆ ಮಾಡಿಸಿಕೊಂಡರು. ಮೊದಲಿಗೆ ಮಧುಮೇಹಿಗಳಿಗೆ ಕಣ್ಣಿನ ಪರೀಕ್ಷೆ, ರಕ್ತ, ಮೂತ್ರ ಪರೀಕ್ಷೆಯನ್ನು ಮಾಡಲಾಯಿತು. ನಂತರ 45 ಜನರನ್ನು ಕಣ್ಣಿನ ಲೇಸರ್ ಶಸ್ತ್ರ ಚಿಕಿತ್ಸೆಗೆ ಆಯ್ಕೆ ಮಾಡಲಾಯಿತು.
ಶಿಬಿರಉದ್ಘಾಟಿಸಿ ಮಾತನಾಡಿದ ಜಿಲ್ಲಾ ಸರ್ಕಾರಿ ಆಸ್ಪತ್ರೆಯ ನೇತ್ರಾಧಿಕಾರಿ ಜಯರಾಮರೆಡ್ಡಿ, ಪ್ರತಿಯೊಬ್ಬ ಮನುಷ್ಯನಿಗೂ ಎಲ್ಲಕ್ಕಿಂತ ಆರೋಗ್ಯವೇ ಮುಖ್ಯವಾದುದು. ಈ ಹಿನ್ನೆಲೆಯಲ್ಲಿ ಆರೋಗ್ಯವನ್ನು ಕಾಪಾಡಿಕೊಳ್ಳಲು ಯಾರೇ ಆಗಲಿ ಹೆಚ್ಚಿಗೆ ಒತ್ತು ನೀಡಬೇಕು. ಆರೋಗ್ಯವಾಗಿದ್ದಾಗ ಮಾತ್ರ ಉತ್ತಮ ಜೀವನ ನಡೆಸಲು ಸಾಧ್ಯ ಎಂದರು.
ಜನರಿಗೆ ಆರೋಗ್ಯ ಸೇವೆ ಸುಲಭವಾಗಿ ದೊರೆಯಬೇಕು. ಈ ನಿಟ್ಟಿನಲ್ಲಿ ಸ್ವಯಂ ಸೇವಾ ಸಂಸ್ಥೆಗಳು ಉಚಿತ ಆರೋಗ್ಯ ಶಿಬಿರಗಳನ್ನು ಹಮ್ಮಿಕೊಳ್ಳಬೇಕು. ವಿಶೇಷವಾಗಿ ಗ್ರಾಮೀಣ ಭಾಗದಲ್ಲಿನ ಜನರಿಗೆ ಆರೋಗ್ಯ ಸೇವೆಯನ್ನು ಒದಗಿಸಬೇಕು. ಬಹಳಷ್ಟು ಮಂದಿ ತಮ್ಮ ಆರ್ಥಿಕ ಸಮಸ್ಯೆಗಳಿಂದ ತಮ್ಮ ಆರೋಗ್ಯದ ಕಡೆಗೆ ಗಮನಕೊಡುವುದಿಲ್ಲ. ಇದನ್ನು ಸ್ವಯಂ ಸೇವಾ ಸಂಸ್ಥೆಗಳು ಅರಿತು ಸಾಮಾಜಿಕ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಅದೇ ರೀತಿ ಉಚಿತ ಶಿಬಿರಗಳನ್ನು ಹಮ್ಮಿಕೊಂಡಾಗ ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳಬೇಕೆಂದರು.
ಮಧುಮೇಹ ಕಾಯಿಲೆ ಇರುವವರು ಎಚ್ಚರಿಕೆ ವಹಿಸಿ ನಡೆದುಕೊಂಡರೆ ಯಾವುದೇ ತೊಂದರೆಯಾಗುವುದಿಲ್ಲ. ಆದರೆ, ನಿರ್ಲಕ್ಷ್ಯ ವಹಿಸಿದರೆ ಗಂಭೀರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಶಿಬಿರದಲ್ಲಿ ಆರ್.ಎಲ್. ಜಾಲಪ್ಪ ಆಸ್ಪತ್ರೆಯ ಸಂಪರ್ಕಾಧಿಕಾರಿ ಎನ್. ಅಕ್ಷಯಕುಮಾರ್, ಆಹಾರ ತಜ್ಞ ಡಾ. ಮಾದವರೆಡ್ಡಿ, ಮತ್ತು ಕಣ್ಣಿನ ತಜ್ಞ ಡಾ. ದಿವಾಕರ್ ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

