ನಿಗಮ/ಮಂಡಳಿ ಅಧ್ಯಕ್ಷ ಸ್ಥಾನ ಸಿಗೋವರೆಗೂ ಗಡ್ಡ ತೆಗೆಯಲ್ಲ: ಶಾಸಕ ನಾರಾಯಣ ಸ್ವಾಮಿ ಶಪಥ
ಬಂಗಾರಪೇಟೆ: ಕ್ಷೇತ್ರದ ನೂತನ ಕಾಂಗ್ರೆಸ್ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಅವರು ತಮಗೆ ನಿಗಮ, ಮಂಡಳಿ ಅಧ್ಯಕ್ಷ ಸ್ಥಾನ ಲಭಿಸುವವರೆಗೂ ಗಡ್ಡ ಬೋಳಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹೌದು ಇದು ನಿಜ.
ಶಾಸಕ ಎಸ್.ಎನ್. ನಾರಾಯಣಸ್ವಾಮಿ ಚುನಾವಣೆಯಲ್ಲಿ ಯಾರೂ ನಿರೀಕ್ಷೆ ಮಾಡದಷ್ಟು 29ಸಾವಿರ ಮತಗಳ ಅಂತರದಿಂದ ಶಾಸಕಾರಿ ಚುನಾಯಿತರಾದವರು. ಕೋಲಾರ ಜಿಲ್ಲೆಯಿಂದ ಪಕ್ಷದಿಂದ ಕೇವಲ ಇಬ್ಬರು ಮಾತ್ರ ಶಾಸಕರಾಗಿದ್ದು ಶ್ರೀನಿವಾಸಪುರದಿಂದ ರಮೇಶ್ಕುಮಾರ್ ಮತ್ತು ಎಸ್.ಎನ್.ನಾರಾಯಣಸ್ವಾಮಿ ಗೆದ್ದಿರುವುದರಿಂದ ರಮೇಶ್ಕುಮಾರ್ಗೆ ಮಂತ್ರಿ ಸ್ಥಾನ ಸಿಗಲಿಲ್ಲ. ಕ್ಷೇತ್ರದ ಶಾಸಕರು ಮಂತ್ರಿ ಗಿರಿಗಾಗಿ ಭಾರಿ ಲಾಬಿ ಮಾಡಿದರು. ಆದರೆ ಅದೃಷ್ಟ ಫಲಿಸಲಿಲ್ಲ. ಮಂತ್ರಿ ಗಿರಿ ಧಕ್ಕದಿದ್ದರೇನಂತೆ ನಿಗಮ, ಮಂಡಳಿ ಅಧ್ಯಕ್ಷ ಸ್ಥಾನವಾದರೂ ಕೊಡುವಂತೆ ಈಗಾಗಲೇ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್, ಮುಖ್ಯಮಂತ್ರಿ ಸಿದ್ದರಾಮಯ್ಯರವರ ಮೇಲೆ ಒತ್ತಡ ಹೇರಲಾಗಿದೆ. ಅಲ್ಲದೆ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಲೋಕಸಭೆ ಚುನಾವಣೆಗೆ ಕಾರ್ಯಕರ್ತರನ್ನು ಸಜ್ಜುಗೊಳಿಸಲು ಮತ್ತಷ್ಟು ಅಧಿಕಾರ ಬೇಕಿದ್ದು ಈ ಹಿನ್ನೆಲೆಯಲ್ಲಿ ತಮಗೆ ಅಂಬೇಡ್ಕರ್ ನಿಗಮ ಮಂಡಳಿ ಅಥವಾ ಒಳ ಚರಂಡಿ ಮಂಡಳಿ ಅಧ್ಯಕ್ಷ ಸ್ಥಾನ ಬೇಕೆಂದು ಪಟ್ಟು ಹಿಡಿದಿದ್ದಾರೆ. ಶಾಸಕರ ಈ ಬೇಡಿಕೆಗೆ ಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷರಿಂದರೂ ಸಕಾರಾತ್ಮವಾಗಿ ಉತ್ತರ ಬಂದಿದ್ದು ಇನ್ನು ಒಂದೆರಡು ತಿಂಗಳಲ್ಲಿ ಶಾಸಕ ನಾರಾಯಣಸ್ವಾಮಿ ಆಸೆ ಈಡೇರಲಿದ್ದು, ತಮ್ಮ ಕನಸು ಈಡೇರುವ ತನಕ ನಾನು ಗಡ್ಡ ತೆಗೆಯುವುದಿಲ್ಲ ಎಂದು ಶಪಥ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

