ಕೋಲಾರ

ಶಿಕ್ಷಕರ ಬೇಡಿಕೆ ಈಡೇರಿಸಲು ಡಿಡಿಪಿಐಗೆ ಒತ್ತಾಯ

Published On :

ಕೋಲಾರ: ಜಿಲ್ಲೆಯ ಶಿಕ್ಷಕರ ಪ್ರಮುಖ ಬೇಡಿಕೆಗಳನ್ನು ಈಡೇರಿಸಬೇಕೆಂದು ಜಿಲ್ಲಾ ಸರ್ಕಾರಿ ನೌರರ ಸಂಘದ ಅಧ್ಯಕ್ಷ ಕೆ.ಎನ್. ಮಂಜುನಾಥ್ ಅವರು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್.ವಿ. ಪದ್ಮನಾಭ್ ಅವರನ್ನು ಒತ್ತಾಯಿಸಿದ್ದಾರೆ. ಶಿಕ್ಷಕರ ಸಂಘದ ಪ್ರತಿನಿಧಿಗಳೊಂದಿಗೆ ಡಿಡಿಪಿಐ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಅವರು, ಈಗಾಗಲೇ ವಿಳಂಬವಾಗಿರುವ ಮುಖ್ಯ ಶಿಕ್ಷಕರ ಮತ್ತು ಪದವಿಧರ ಶಿಕ್ಷಕರ ಬಡ್ತಿಗಳನ್ನು ಶೀಘ್ರವಾಗಿ ನೀಡಬೇಕೆಂದು ತಿಳಿಸಿದರು. 25 ರಿಂದ 30 ವರ್ಷಗಳ ಕಾಲ ಒಂದೇ ಹುದ್ದೆಯಲ್ಲಿ ನಿರಂತರವಾಗಿ ಸೇವೆ ಸಲ್ಲಿಸಿರುವ ಶಿಕ್ಷಕರಿಗೆ ಸರ್ಕಾರದ ಆದೇಶದಂತೆ 1 ಬಡ್ತಿ ನೀಡಬೇಕು. ವೈದ್ಯಕೀಯ ವೆಚ್ಚದ ಬಿಲ್ಲುಗಳನ್ನು ಸರ್ಕಾರಕ್ಕೆ ಕಳುಹಿಸಿ ಶೀಘ್ರ ಹಣ ಬಿಡುಗಡೆ ಮಾಡಿಸಬೇಕು, ವಿಳಂಬವಾಗಿರುವ ವೇತನವನ್ನು ಶಿಕ್ಷಕರಿಗೆ ತುರ್ತಾಗಿ ನೀಡಬೇಕು ಮತ್ತು ಹೆಚ್.ಆರ್.ಎಂ.ಎಸ್.ನಲ್ಲಿ ಶಿಕ್ಷಕರ ಸೇವಾ ವಿವರಗಳು ಭರ್ತಿ ಮಾಡಲು ಒತ್ತಾಯಿಸಿದರು. ಬೇಡಿಕೆಗಳಿಗೆ ಸ್ಪಂದಿಸಿದ ಉಪನಿರ್ದೇಶಕರು, ಈ ತಿಂಗಳ 29ಅಥವಾ 30 ರಂದು ಮುಖ್ಯ ಶಿಕ್ಷಕರ ಮತ್ತು ಪದವಿದರೇತರ ಶಿಕ್ಷಕರಿಗೆ ಬಡ್ತಿ ನೀಡಲು ಕೌನ್ಸೆಲಿಂಗ್ ಕರೆಯಲಾಗುವುದೆಂದು ಭರವಸೆ ನೀಡಿದರಲ್ಲದೆ, ಉಳಿದ ಬೇಡಿಕೆಗಳನ್ನು ಶೀಘ್ರವಾಗಿ ಈಡೇರಿಸುವುದಾಗಿ ನಿಯೋಗಕ್ಕೆ ಆಶ್ವಾಸನೆ ನೀಡಿದರು. ಸರ್ಕಾರಿ ನೌಕರರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎನ್.ರವಿಚಂದ್ರ, ಕಾರ್ಯದರ್ಶಿ ಅಶೋಕ್, ಎಂ.ನಾಗರಾಜ್, ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ವೆಂಕಟಶಿವಪ್ಪ, ಎಂ.ಎನ್. ಶ್ರೀನಿವಾಸಮೂರ್ತಿ , ಮಂಜುನಾಥ್, ಪ್ರದೀಪ್‌ಕುಮಾರ್ ನಿಯೋಗದಲ್ಲಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.