ವಿದ್ಯೆ ಕಲಿಸಿದ ಗುರುಗಳನ್ನು ಎಂದಿಗೂ ಮರೆಯದಿರಿ
ಚಿಕ್ಕಬಳ್ಳಾಪುರ: ಮಕ್ಕಳು ತಮ್ಮ ತಂದೆ, ತಾಯಿಗಳನ್ನು ಮತ್ತು ವಿದ್ಯೆ ಕಲಿಸಿದ ಗುರುಗಳನ್ನು ಎಂದಿಗೂ ಮರೆಯಬಾರದು. ಇದರ ಜೊತೆಗೆ ವಿದ್ಯಾದಾತರನ್ನು ಮತ್ತು ಶೈಕ್ಷಣಿಕ ಹಂತದಲ್ಲಿ ತಮ್ಮನ್ನು ಪ್ರೋತ್ಸಾಹಿಸಿ ಬೆಳೆಯಲು ಮುನ್ನಡೆಯಲು ಸಹಕರಿಸಿದ ಅನೇಕ ಸೇವಾದಾತರನ್ನು ಸಹ ನೆನಪಿನಲ್ಲಿಟ್ಟುಕೊಳ್ಳಬೇಕು ಎಂದು ಆದಿಚುಂಚನಗಿರಿ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ನುಡಿದರು.
ನಗರದ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ಕೆ.ಬಿ. ಪಿಳ್ಳಪ್ಪನವರ ಸ್ಮಾರಕ ದತ್ತಿ ವತಿಯಿಂದ ಕಳೆದ 12-13 ನೇ ಸಾಲಿನಲ್ಲಿ ಅತ್ಯುನ್ನತ ಶ್ರೇಣಿ ಪಡೆದ ವಿದ್ಯಾರ್ಥಿಗಳಿಗೆ ಪ್ರತಿ ವರ್ಷದಂತೆ ಈ ವರ್ಷವೂ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, ಇಂದಿನ ಕಾಲದಲ್ಲಿ ಪ್ರತಿಭೆ ಇರದವರಿಗೆಲ್ಲಾ ಸನ್ಮಾನ ನಡೆಯುವುದು ಸಾಮಾನ್ಯವಾಗಿರುವಾಗ ಪ್ರತಿಭೆ ಇರುವವರಿಗೆ ಸನ್ಮಾನ ಮಾಡುವುದು ಮಾಡುವವರು ಗುರುತಿಸುವವರು ವಿರಳವೇ ಸರಿ ಇದೊಂದು ಮಹತ್ವದ ಅಂಶ ಎಂದರು.
ಮಾಜಿ ಶಾಸಕ ಕೆ.ಪಿ. ಬಚ್ಚೇಗೌಡ ಮಾತನಾಡಿ, ದತ್ತಿ ಸ್ಥಾಪನೆಯಾಗಿ 10 ವರ್ಷಗಳಾಗಿದ್ದು, ಅಂದಿನಿಂದ ಈವರೆಗೆ ದತ್ತಿಯ ಹೆಸರಿನಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಉಚಿತ ವೈದ್ಯಕೀಯ ಶಿಬಿರ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳುತ್ತಿದ್ದು, ಇನ್ನೂ ಅನೇಕ ಸಮಾಜಸೇವಾ ಕಾರ್ಯಕ್ರಮಗಳನ್ನು ಕೈಗೊಂಡು ಹೋಗುತ್ತೇವೆ ಎಂದರು.
ವಿವಿಧ ಕ್ಷೇತ್ರಗಳಲ್ಲಿ ಮಹಾನ್ ಸೇವೆ ಸಲ್ಲಿಸಿದವರನ್ನು ಸನ್ಮಾನಿಸಲಾಗಿ, ಸರ್ಎಂವಿ ಫ್ರೌಡಶಾಲೆಯ ಮುಖ್ಯ ಶಿಕ್ಷಕರಾಗಿ ನಿವೃತ್ತರಾದ ಶ್ರೀನಿವಾಸಮೂರ್ತಿ, ಬಿಜಿಎಸ್ನ ಸಲಹೆಗಾರ ಎನ್. ಶಿವರಾಮರೆಡ್ಡಿ ಮತ್ತು ಅಗಲಗುರ್ಕಿಯ ಎನ್. ಮಂಜುನಾಥ್ ಅವರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲೆಯಲ್ಲಿ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯು ಪರೀಕ್ಷೆಯಲ್ಲಿ ಅತ್ಯಂತ ಹೆಚ್ಚು ಅಂಕ ಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.
ದತ್ತಿಯ ಅಧ್ಯಕ್ಷ ಡಾ.ಕೆ.ಪಿ. ಶ್ರೀನಿವಾಸಮೂರ್ತಿ, ಸದಸ್ಯರಾದ ಚನ್ನಬೈರೇಗೌಡ, ಚಂದ್ರಶೇಖರ್, ಕೋಚಿಮುಲ್ ನಿರ್ದೇಶಕ ಕೆ.ವಿ. ನಾಗರಾಜ್, ತಾ.ಪಂ ಮಾಜಿ ಉಪಾಧ್ಯಕ್ಷ ವೆಂಕಟನಾರಾಯಣಪ್ಪ, ಕೆ.ಆರ್. ರೆಡ್ಡಿ, ನಗರಸಭೆ ಮಾಜಿ ಅಧ್ಯಕ್ಷ ಎಂ. ಪ್ರಕಾಶ್, ಸದಸ್ಯರಾದ ಜಯಮ್ಮ ಪಿಳ್ಳಪ್ಪನವರ ಮುಂತಾದವರು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

