ಕೋಲಾರ

ತಾಲೂಕು ಕಚೇರಿಗೆ ಎಬಿವಿಪಿ ಮುತ್ತಿಗೆ

Published On :

ಚಿಂತಾಮಣಿ: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದ ಸರ್ಕಾರಿ ಕಾಲೇಜು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡದೆ ಅನ್ಯಾಯ ಮಾಡುತ್ತಿರುವುದಾಗಿ ಆರೋಪಿಸಿ ಮಂಗಳವಾರ ಎಬಿವಿಪಿ ಸಂಘಟನೆ ವತಿಯಿಂದ ತಾಲೂಕು ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಪಟ್ಟಣದ ಕೆ.ಆರ್.ಬಡಾವಣೆಯಲ್ಲಿರುವ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಕಚೇರಿಯಲ್ಲಿ ಹಲವು ಅಧಿಕಾರಿಗಳು ಪಟ್ಟಣದ ಪ್ರತಿಷ್ಠಿತ ಕಾಲೇಜುಗಳ  ಜೊತೆ ಒಳ ಒಪ್ಪಂದ ಮಾಡಿಕೊಂಡು ಸರ್ಕಾರದಿಂದ ಬರುವ ವಿದ್ಯಾರ್ಥಿ ವೇತನವನ್ನು ಖಾಸಗಿ ಶಾಲೆಗಳಿಗೆ ಬಿಡುಗಡೆ ಮಾಡುವುದರ ಮೂಲಕ ಸರ್ಕಾರಿ ಕಾಲೇಜಿನಲ್ಲಿ ಓದುತ್ತಿರುವ ಬಡ ದಲಿತ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡುವುದರ ಮೂಲಕ ಸಮಾಜ ಕಲ್ಯಾಣ ಅಧಿಕಾರಿಗಳ ಮಲತಾಯಿ ಧೋರಣೆ ಅನುಸರಿಸುತ್ತಿದ್ದಾರೆ ಪ್ರತಿಭಟನಾಕಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ವ್ಯವಸ್ಥಾಪಕರ ಅಮಾನತು ಮಾಡಿ: ತಾಲೂಕು ಸಮಾಜ ಕಲ್ಯಾಣ ಇಲಾಖೆ ವ್ಯವಸ್ಥಾಪಕ ಮಹಮದ್ ಶೌಕತ್‌ಅಲಿ ಈ ಹಿಂದೆ ಕಾರ್ಯ ನಿರ್ವಹಿಸಿದ ಸ್ಥಳಗಳಲ್ಲಿಯೂ ಸಹ ಬಡ ದಲಿತರಿಗೆ ಅನ್ಯಾಯ ಮಾಡಿ ಶ್ರೀಮಂತ ಕಾಲೇಜು ಸಂಸ್ಥೆಗಳ ಜೊತೆ ಕೈ ಜೋಡಿಸಿ ಬರುವ ವಿದ್ಯಾರ್ಥಿ ವೇತನವನ್ನು ಅರ್ಹ ವಿದ್ಯಾರ್ಥಿ ಕೈಸೇರದೆ ಇರುವುದಕ್ಕೆ ಇವರ  ಬೇಜವಾಬ್ದಾರಿತನವೇ ಕಾರಣ  ಎಂದು ಆರೋಪಿಸಿದ್ದಾರೆ.
ಈ ಸಂಬಂಧ  ಎಬಿವಿಪಿ ಸಂಘಟನೆ ಹಲವು ಬಾರಿ ಪ್ರತಿಭಟನೆ ನಡೆಸಿದ್ದರೂ ಈ ಸಂಬಂಧ ಸತತವಾಗಿ  ನಿರ್ಲಕ್ಷ್ಯ ತೋರುತ್ತಿರುವುದಾಗಿ ಸಂಘಟನೆಯು ಆರೋಪಿಸಿದೆ.
ಇನ್ನು ಮುಂದಾದರೂ ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನ ಹರಿಸಿ ಸರ್ಕಾರಿ ಕಾಲೇಜು ಹಾಗೂ ಪಾಲಿಟೆಕ್ನಿಕ್‌ನಲ್ಲಿ ಓದುತ್ತಿರುವ ಬಡ ಎಸ್.ಸಿ,ಎಸ್.ಟಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಕೂಡಲೇ ಬಿಡುಗಡೆಗೊಳಿಸಬೇಕು ಎಂದು ಒತ್ತಾಯಿಸಿದರು.
ಸಂಘಟನೆ ಮುಖಂಡರಾದ ಮಂಜುನಾಥರೆಡ್ಡಿ, ಸುರೇಶ್, ವಿಜಯ್, ನರೇಶ್, ಮಂಜುನಾಥ್, ಲಕ್ಷ್ಮಣ್, ಲಾವಣ್ಯ, ಶ್ವೇತಾ, ಅರ್ಸಿಯಾ, ದೀಪಾ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.