ಸಮಯಕ್ಕೆ ಬಾರದ ಬಸ್: ಪ್ರತಿಭಟನೆ
ಗೌರಿಬಿದನೂರು: ಗೌರಿಬಿದನೂರು ತಾಲೂಕು ಮಂಚೇನಹಳ್ಳಿ ಹೋಬಳಿ ಕೇಂದ್ರಕ್ಕೆ 10 ಕಿಲೋಮೀಟರ್ ದೂರದಲ್ಲಿರುವ ಕುಗ್ರಾಮ ಮರಿಮಾಕಲಹಳ್ಳಿಗೆ ಹೆಚ್ಚುವರಿಯಾಗಿ ಬಸ್ ಸಂಪರ್ಕ ಕಲ್ಪಿಸುವಂತೆ ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ. ಸಮಯಕ್ಕೆ ಬಾರದ ದೊಡ್ಡಬಳ್ಳಾಪುರ-ಮಂಚೇನಹಳ್ಳಿ ಸರ್ಕಾರಿ ಬಸ್ ಹೋಬಳಿ ಕೇಂದ್ರಕ್ಕೆ ತಲುಪುವ ಹೊತ್ತಿಗೆ ಸಮಯ ಮೀರುತ್ತಿದ್ದು, ಇದರಿಂದ ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಿಗೆ ಹೋಗಲಾರದೆ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ ಎಂದು ಪ್ರತಿಭಟನಾಕಾರರರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಗೌರಿಬಿದನೂರು ತಾಲೂಕು ಕೇಂದ್ರಕ್ಕೆ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರಕ್ಕೆ ಕಾಲೇಜಿಗೆ ತೆರಳಲು ವಿದ್ಯಾರ್ಥಿಗಳ ಸಮಸ್ಯೆ ಆಲಿಸದ ಅಧಿಕಾರಿಗಳು, ಗೌರಿಬಿದನೂರು ಕೆ.ಎಸ್.ಆರ್.ಟಿ.ಸಿ.ವಿಭಾಗದಿಂದ ಮರಿಮಾಕಲಹಳ್ಳಿಯಿಂದ ಮುಂಜಾನೆ 8.15 ಕ್ಕೆ ಬಸ್ ವ್ಯವಸ್ಥೆ ಕಲ್ಪಸಿಕೊಡುವುದರಿಂದ ಸಾರ್ವಜನಿಕರಿಗೂ ವೃದ್ಧರಿಗೆ, ಮಹಿಳೆಯರಿಗೆ, ರೋಗಿಗಳು, ಬಡ ಮಕ್ಕಳಿಗೆ, ವಿದ್ಯಾರ್ಥಿಗಳೂ ಸಹಕಾರಿಯಾಗಲಿದೆ ಎಂದು ಒತ್ತಾಯಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

