ಲೋಕಾಯುಕ್ತರಿಗೆ ದೂರು ನೀಡಿದ್ದಕ್ಕೆ ಥಳಿತ: ರೈತ ಮುಖಂಡರ ಆರೋಪ
ಕ.ಪ್ರ.ವಾರ್ತೆ , ಕೋಲಾರ , ಜು.30
ನಕಲಿ ಕೀಟನಾಶಕ ಔಷಧಿ ಮಾರಾಟ ವಿರುದ್ಧ ಲೋಕಾಯುಕ್ತರಿಗೆ ದೂರು ನೀಡಿದ್ದರಿಂದ ತಮ್ಮ ವಿರುದ್ಧ ನಕಲಿ ಕೀಟ ನಾಶಕ ಔಷಧಿ ಮಾರಾಟಗಾರರನ್ನು ಎತ್ತಿ ಕಟ್ಟಿ ಕೃಷಿ ಅಧಿಕಾರಿಗಳು ಹಲ್ಲೆ ಮಾಡಿಸಿದ್ದಾರೆಂದು ರಾಜ್ಯ ರೈತ ಸಂಘಟನೆ ಜಿಲ್ಲಾ ಸಂಚಾಲಕ ಕೆ. ಶ್ರೀನಿವಾಸಗೌಡ ಆರೋಪಿಸಿದ್ದಾರೆ.
ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು ನಕಲಿ ಔಷಧಿ ಮಾರಾಟಗಾರರ ಸಂಬಂಧಿಗಳಾದ ಕಾಮಧೇನಹಳ್ಳಿ ಧರ್ಮೇಗೌಡ, ಸಂಜಯ್, ಜಯಪ್ಪ ಮತ್ತು ಇನ್ನಿತರ ಹತ್ತು ಜನ ಅಪರಿಚಿತ ವ್ಯಕ್ತಿಗಳಿಂದ ಹಲ್ಲೆ ನಡೆಸಿ ಪ್ರಾಣ ಬೆದರಿಕೆ ಹಾಕಿದ್ದಾರೆ. ಈ ಪ್ರಕರಣ ನಗರದ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲು ಆಗಿದ್ದರೂ ಆರೋಪಿಗಳ ವಿರುದ್ಧ ಕ್ರಮ ಕೈಗೊಂಡಿಲ್ಲವೆಂದು ದೂರಿದ್ದಾರೆ.
ನನ್ನ ಮೇಲೆ ಹಲ್ಲೆ ಮಾಡಿದವರನ್ನು ಶಿಕ್ಷಿಸಬೇಕಾದ ಪೊಲೀಸರು ಆರೋಪಿಗಳ ರಕ್ಷಣೆಗೆ ನಿಂತಿದ್ದಾರೆ, ಹಲ್ಲೆಗೊಳಗಾದ ನನ್ನನ್ನು ಗಲ್ಪೇಟೆ ಪೊಲೀಸ್ ಠಾಣೆಯಲ್ಲಿ ಗಂಟೆಗಟ್ಟಲೆ ಕೂಡಿ ಹಾಕಿದರು. ನಂತರ ರಾತ್ರಿ ಬಿಡುಗಡೆ ಮಾಡಿದರೆಂದು ತಿಳಿಸಿದ್ದಾರೆ.
ರೈತ ಸಂಘ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿದ ಹಿನ್ನೆಲೆಯಲ್ಲಿ ಆರೋಪಿಗಳ ಮೇಲೆ ಸೂಕ್ತ ತನಿಖೆ ಮಾಡಿ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾ ಎಸ್ಪಿ ಅವರ ಗಮನಕ್ಕೆ ತಂದಾಗ ಹಲ್ಲೆ ಮಾಡಿದ ಆರೋಪಿಗಳ ಮೇಲೆ ಪ್ರಕರಣ ದಾಖಲಿಸಿದ್ದಾರೆ. ಇಡೀ ಪ್ರಕರಣದಲ್ಲಿ ಕೃಷಿ ಇಲಾಖೆ ಅಧಿಕಾರಿಗಳ ಮತ್ತು ನಕಲಿ ಮಾರಾಟಗಾರರ ವ್ಯವಸ್ಥಿತ ಜಾಲ ಕೆಲಸ ಮಾಡುತ್ತಿದ್ದು ಕಣಷಿ ಅಧಿಕಾರಿಗಳಿಗೆ ಇಂತಹ ಪ್ರಕರಣಗಳು ಪತ್ತೆಯಾಗುವುದು ಬೇಕಾಗಿಲ್ಲ. ಈ ಮಾರಾಟದ ಹಿಂದೆ ನೇರ ಪ್ರೋತ್ಸಾಹ ಕೃಷಿ ಅಧಿಕಾರಿಗಳದಿದ್ದು ಇದೇ ರೀತಿ ಮುಂದುವರೆದರೆ ಜಿಲ್ಲೆಯಾದ್ಯಂತ ರೈತರ ಉಳಿವಿಗಾಗಿ ಕೃಷಿ ಅಧಿಕಾರಿಗಳ ವಿರುದ್ಧ ಹೋರಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

