'ಆಟೋ ಹಾವಳಿ ತಪ್ಪಿಸಿ'
ಚಿಂತಾಮಣಿ: ಖಾಸಗಿ ಟಾಟಾ ಮ್ಯಾಜಿಕ್ (ಪ್ಯಾಸೆಂಜರ್ ಆಟೋ)ವಾಹನಗಳ ಹಾವಳಿ ಹೆಚ್ಚಾಗಿದ್ದು, ಇದರಿಂದ ಸಾರಿಗೆ ವಾಹನಗಳಿಗೆ ಹೊಡೆತ ಬಿದ್ದಿದೆ ಎಂದು ಆರೋಪಿಸಿ ಕೆಎಸ್‌ಆರ್‌ಟಿಸಿ ನೌಕರರು ಬುಧವಾರ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದರು.
ಪಟ್ಟಣದ ಕೆಂಪು ಬಸ್ ನಿಲ್ದಾಣದ ಹತ್ತಿರ ಪ್ಯಾಸೆಂಜರ್ ಆಟೋಗಳು ಹೆಚ್ಚಾಗಿ ಪ್ರಯಾಣಿಕರನ್ನು ಬಲವಂತದಿಂದ ಕರೆದುಕೊಂಡು ಹೋಗುತ್ತಿರುವುದರಿಂದ ಸಾರಿಗೆ ವಾಹನಗಳಿಗೆ ಬರಬೇಕಾದ ಆದಾಯ ತಪ್ಪುತ್ತಿದೆ. ಹೀಗಾಗಿ ಖಾಸಗಿ ವಾಹನಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ನಿಲ್ದಾಣದಲ್ಲಿಯೇ ಬಸ್‌ಗಳನ್ನು ನಿಲ್ಲಿಸಿ ಚಾಲಕರು, ನಿರ್ವಾಹಕರು ಪ್ರತಿಭಟನೆ ನಡೆಸಿದರು.
ಬಸ್ ನಿಲ್ದಾಣಕ್ಕೆ ಬಂದು ಪ್ರಯಾಣಿಕರನ್ನು ಕೂಗಿ ಖಾಸಗಿ ವಾಹನಗಳ ಮಾಲೀಕರು ಕರೆದುಕೊಂಡು ಹೋಗುತ್ತಿದ್ದರೂ ಸ್ಥಳೀಯ ಅಧಿಕಾರಿಗಳು ನಿರ್ಲಕ್ಷ್ಯದಿಂದಾಗಿ ಸಂಸ್ಥೆಗೆ ನಷ್ಟ ಉಂಟಾಗುತ್ತಿದೆ. ಅಷ್ಟೇ ಅಲ್ಲ, ಆದಾಯ ತರಲು ವಿಫಲರಾದ ನೌಕರರಿಗೆ ಆಪಾದನೆ ಪತ್ರವನ್ನೂ ಅಧಿಕಾರಿಗಳು ನೀಡುತ್ತಿದ್ದಾರೆ. ಹೀಗಾಗಿ ನೌಕರರಿಗೆ ನಿತ್ಯ ಖಾಸಗಿ ವಾಹನಗಳ ಹಾವಳಿ ತಪ್ಪಿಸಲು ಪೊಲೀಸರು ಹಾಗೂ ಘಟಕ ವ್ಯವಸ್ಥಾಪಕರು ನ್ಯಾಯ ಒದಗಿಸಿಕೊಡಬೇಕೆಂದು ಆಗ್ರಹಿಸಿದರು.
ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಸಬ್ ಇನ್ಸ್‌ಪೆಕ್ಟರ್ ಮುರಳಿ, ಪ್ರತಿಭಟನಾಕಾರರನ್ನು ಸಮಾಧಾನ ಪಡಿಸಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಧರಣಿ ಹಿಂಪಡೆಯಬೇಕೆಂದು ನುಡಿದರು. ಸಮಸ್ಯೆಗಳು ಇದ್ದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ಜತೆ ಚರ್ಚಿಸಿ ಎಂದೂ ಮನವಿ ಮಾಡಿದರು. ನಂತರ ಸಾರಿಗೆ ನೌಕರರ ಸಿಬ್ಬಂದಿ ಪ್ರತಿಭಟನೆ ಕೈಬಿಟ್ಟರು. ಪ್ರತಿಭಟನೆಯಲ್ಲಿ ಅಶೋಕ್‌ಕುಮಾರ್, ಮೋಹನ್, ಮಂಜುನಾಥ್, ರವಿ, ಕುಮಾರ್, ಬಾಬಾಸಾಬಿ, ರಮೇಶ್ ಸೇರಿದಂತೆ ಇನ್ನೂ ಹಲವಾರು ಮಂದಿ ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

