ಕೋಲಾರ

ಕುಡಿವ ನೀರಿಗೆ ಆಗ್ರಹಿಸಿ ಮಹಿಳೆಯರ ಪ್ರತಿಭಟನೆ

Published On :

ಚಿಂತಾಮಣಿ: ನಗರಸಭೆ ಆಯುಕ್ತರು ಹಾಗೂ ಜನಪ್ರತಿನಿಧಿಗಳು ಕುಡಿಯುವ ನೀರು ಕಲ್ಪಿಸಲು ವಿಫಲಗೊಂಡಿದ್ದಾರೆಂದು ಆರೋಪಿಸಿ ವೆಂಕಟಗಿರಿಕೋಟೆಯ ನೂರಾರು ಮಹಿಳೆಯರು ಖಾಲಿ ಬಿಂದಿಗೆಗಳೊಂದಿಗೆ ಪಟ್ಟಣದ ಮುಖ್ಯ ಬೀದಿಗಳಲ್ಲಿ ಸಂಚರಿಸುತ್ತಾ ಪ್ರತಿಭಟನೆ ನಡೆಸಿದರು.
ಪಟ್ಟಣದ ವಾರ್ಡ್ ನಂ.1 ವೆಂಕಟಗಿರಿಕೋಟೆ ನಿವಾಸಿಗಳಿಗೆ ಕಳೆದ ನಾಲ್ಕು ತಿಂಗಳಿಂದ ಕುಡಿಯುವ ನೀರು ವ್ಯವಸ್ಥೆ ಕಲ್ಪಿಸಲು ನಗರಸಭೆ ಅಧಿಕಾರಿಗಳು ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಮೀನಮೇಷ ಎಣಿಸುತ್ತಿರುವುದಾಗಿ ಹಾಗೂ ವಿರೋಧ ಪಕ್ಷದ ಸದಸ್ಯರೆಂದು ಭಾವಿಸಿ ಹಲವು ಬಾರಿ ಮನವಿ ಸಲ್ಲಿಸಿದರೂ ಪ್ರಯೋಜನವಿಲ್ಲದ ಕಾರಣ ಬುಧವಾರ ಈ ಭಾಗದ ನೂರಾರು ಮಹಿಳೆಯರು ಖಾಲಿ ಬಿಂದಿಗೆಗಳೊಂದಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ವಿರುದ್ಧ ದಿಕ್ಕಾರಗಳನ್ನು ಕೂಗಿ ಪ್ರತಿಭಟನೆ ನಡೆಸಿದರು.
ನಗರಸಭೆಗೆ ಮುತ್ತಿಗೆ: ಹಲವು ಬಾರಿ ಕುಡಿಯುವ ನೀರನ್ನು ಕಲ್ಪಿಸುವಲ್ಲಿ ನಗರಸಭೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ವಿಫಲಗೊಂಡಿದ್ದಾರೆಂದು ನಗರಸಭಾ ಸದಸ್ಯ ದೇವರಾಜ್ ನೇತೃತ್ವದಲ್ಲಿ ಖಾಲಿ ಬಿಂದಿಗೆಗಳು ಹೊತ್ತ ನೂರಾರು ಮಹಿಳೆಯರು ನಗರಸಭೆ ಕಚೇರಿಗೆ ಮುತ್ತಿಗೆ ಹಾಕಿ ಸಂಬಂಧಪಟ್ಟ ಅಧಿಕಾರಿಗಳ ತರಾಟೆಗೆ ತೆಗೆದುಕೊಂಡರು.
ನಗರಸಭೆ ಅಧಿಕಾರಿಗಳು ಒಂದೆರಡು ದಿನಗಳಲ್ಲಿ ನೀರಿನ ವ್ಯವಸ್ಥೆ ಕಲ್ಪಿಸಿಕೊಡುವುದಾಗಿ ಭರವಸೆ ನೀಡಿದ ನಂತರ ಪ್ರತಿಭಟನೆಯನ್ನು ಹಿಂಪಡೆಯಲಾಯಿತು.
ಪ್ರತಿಭಟನೆಯಲ್ಲಿ ರಾಧಮ್ಮ, ಗಾಯತ್ರಿ, ನಾಗಲಕ್ಷ್ಮಮ್ಮ, ಪ್ರಮೀಳಮ್ಮ, ಮಂಜುಳಮ್ಮ, ವರಲಕ್ಷ್ಮಮ್ಮ, ಬತ್ಯಪ್ಪ,ನಾರಾಯಣಪ್ಪ ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.