ಕೋಲಾರ

ಶಿವಶಂಕರರೆಡ್ಡಿಗೆ ಮಾತೃ ವಿಯೋಗ

Published On :

ಗೌರಿಬಿದನೂರು: ವಿಧಾನಸಭೆ ಉಪಾಧ್ಯಕ್ಷ ಎನ್.ಎಚ್.ಶಿವಶಂಕರರೆಡ್ಡಿ ಅವರ ತಾಯಿ ಸುಭಾಷಿಣಿ(82)ಮಂಗಳವಾರ ರಾತ್ರಿ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರಿಗೆ ಉಪಸಭಾಧ್ಯಕ್ಷ ಎನ್.ಎಚ್.ಶಿವಶಂಕರರೆಡ್ಡಿ ಸೇರಿ ನಾಲ್ಕು ಮಂದಿ ಪುತ್ರರು, ಮೂವರು ಪುತ್ರಿಯರಿದ್ದಾರೆ.
ತೀವ್ರ ಅನಾರೋಗ್ಯದಿಂದ ಹಲವು ದಿನಗಳಿಂದ ಬೆಂಗಳೂರಿನ ಬಿಜಿಎಸ್ ಗ್ಲೋಬಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು ಎಂದು ಕುಟುಂಬದ ಮೂಲಗಳ ತಿಳಿಸಿದ್ದು ಮೃತರ ಪಾರ್ಥಿವ ಶರೀರವನ್ನು ಸ್ವಗ್ರಾಮ ನಾಗಸಂದ್ರಕ್ಕೆ ಕರೆತಂದು ಅಂತ್ಯಕ್ರಿಯೆ ನಡೆಸಲಾಯಿತು. ವಿಧಾನಸಭೆ ಮುಖ್ಯ ಸಚೇತಕ ಪಿ.ಎಂ. ಅಶೋಕ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕೆಂಚೇಗೌಡ, ಚಿಂತಾಮಣಿ ಮಾಜಿ ಶಾಸಕ ಸುಧಾಕರ್, ಶಿಡ್ಲಘಟ್ಟ ಶಾಸಕ ರಾಜಣ್ಣ, ಜಿಲ್ಲಾ ಪಂಚಾಯ್ತಿ ಅಧ್ಯಕ್ಷ ಚಿನ್ನಪ್ಪ, ಉಪಾಧ್ಯಕ್ಷ ರಾಘವೇಂದ್ರ ಹನುಮಾನ್, ಸೇರಿದಂತೆ ಸಾವಿರಾರು ಕಾರ್ಯಕರ್ತರು ಅಂತಿಮ ದರ್ಶನವನ್ನು ಪಡೆದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.