ಕೋಲಾರ

ಗಣಪತಿ ಶ್ರೀಗೆ ಗೌಡಾ ಪ್ರದಾನ

Published On :

ಕ.ಪ್ರ.ವಾರ್ತೆ   ಮೈಸೂರು   ಜೂ. 22
ಮೈಸೂರಿನ ದತ್ತಪೀಠದ ಗಣಪತಿ ಸಚ್ಚಿದಾನಂದ ಸ್ವಾಮಿಗಳು ಸಂಗೀತ ಕ್ಷೇತ್ರದಲ್ಲಿ ಸಲ್ಲಿಸಿದ ಅಮೋಘ ಸೇವೆ ಗುರುತಿಸಿ ಬಳ್ಳಾರಿ ಶ್ರೀಕೃಷ್ಣದೇವರಾಯ ವಿವಿ ನೀಡಿದ ಗೌರವ ಡಾಕ್ಟರೇಟ್ ಪದವಿಯನ್ನು ಉನ್ನತ ಶಿಕ್ಷಣ ಸಚಿವ ಆರ್.ವಿ. ದೇಶಪಾಂಡೆ ಪ್ರದಾನ ಮಾಡಿದರು.
ಶನಿವಾರ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಈ ಸಂಬಂಧ ಸರಳ ಸಮಾರಂಭ ನಡೆಯಿತು. ಶ್ರೀಕೃಷ್ಣದೇವರಾಯ ವಿವಿ ಕುಲಪತಿ ಪ್ರೊ. ಮಂಜಪ್ಪ ಟಿ. ಹೊಸಮನಿ, ಕುಲಸಚಿವರಾದ ಕೆ. ವಿಜಯಕುಮಾರ್, ಪ್ರೊ. ರಂಗರಾಜು ಇದ್ದರು.
ನಂತರ ಮಾತನಾಡಿದ ಸಚಿವ ಆರ್.ವಿ. ದೇಶಪಾಂಡೆ, ಶ್ರೀಗಳಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿರುವುದು ಶ್ಲಾಘನೀಯ. ಶ್ರೀಗಳು ಆಶ್ರಮ ಸ್ಥಾಪಿಸಿ ಪ್ರಾಥಮಿಕ ಶಿಕ್ಷಣದಿಂದ ಪ್ರೌಢ ಶಿಕ್ಷಣದ ವರೆಗೆ ಅಕ್ಷರ ಸೇವೆ ಮಾಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಉನ್ನತ ಶಿಕ್ಷಣದಲ್ಲೂ ಸಂಸ್ಥೆಗಳನ್ನು ಆರಂಭಿಸಲಿ ಎಂಬುದು ನಮ್ಮ ಆಶಯವಾಗಿದೆ ಎಂದರು.
ಗೌಡಾ ಸ್ವೀಕರಿಸಿ ಮಾತನಾಡಿದ ಗಣಪತಿ ಸಚ್ಚಿದಾನಂದ ಸ್ವಾಮೀಜಿ, ಗೌರವ ಡಾಕ್ಟರೇಟ್ ಪದವಿಯನ್ನು ಶಾಸ್ತ್ರನಿಧಿಗೆ ನೀಡುವ ಮೂಲಕ ಗುರುವಿನ ಪಾದಕ್ಕೆ ಅರ್ಪಿಸುತ್ತೇನೆ. ತಾವು ಸಂಗೀತದ ಮೂಲಕ ಪಶು, ಪಕ್ಷಿಗಳ ಮನಸ್ಸನ್ನು ಅರ್ಥ ಮಾಡಿಕೊಂಡಿದ್ದೇನೆ. ಮುಂದಿನ ದಿನಗಳಲ್ಲಿಯೂ ಸಂಗೀತ ಕ್ಷೇತ್ರದಲ್ಲಿಯೇ ಸೇವೆ ಸಲ್ಲಿಸುತ್ತೇನೆ. ಕಿರಿಯ ಶ್ರೀಗಳು ಉನ್ನತ ಶಿಕ್ಷಣ ನೋಡಿಕೊಳ್ಳಲಿದ್ದಾರೆ ಎಂದು ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.