ಗುಡಿ ಕೈಗಾರಿಕೆ ಯೋಜನೆಗೆ ಹುಣಸೂರು ಆಯ್ಕೆ: ವಿಶ್ವನಾಥ್
ಹುಣಸೂರು: ಕೇಂದ್ರ ಸರ್ಕಾರ ಗುಡಿ ಕೈಗಾರಿಕೆಯನ್ನು ನಂಬಿ ಬದುಕುತ್ತಿರುವ ಹಾಗೂ ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸುವ ಯೋಜನೆ ರೂಪಿಸಿದ್ದು, ಇದನ್ನು ಗ್ರಾಮೀಣ ಪ್ರದೇಶದದಲ್ಲಿ ಪರಿಚಯಿಸಲು ಹುಣಸೂರು ತಾಲೂಕನ್ನು ಪ್ರಾಯೋಗಿಕವಾಗಿ ಆಯ್ಕೆ ಮಾಡಲಾಗಿದೆ ಎಂದು ಸಂಸದ ಎಚ್. ವಿಶ್ವನಾಥ್ ಹೇಳಿದರು.
ಹುಣಸೂರಿನಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಗ್ರಾಮೀಣ ಭಾಗದಲ್ಲಿ ಅಳಿವಿನ ಸ್ಥಿತಿಗೆ ಬಂದಿರುವ ಕುಂಬಾರಿಕೆ, ತೆಂಗಿನ ನಾರಿನ ಬಳಕೆ, ಈಚಲು ಮರದಿಂದ ತಯಾರಿಸುವ ಹಲವಾರು ವಸ್ತುಗಳು, ಹೂವಿನ ಮಾರಾಟ, ಇದ್ದಿಲು ಉಪಯೋಗ, ಮರದ ಕೆತ್ತನೆಗಳಂತಹ ಕಲೆ ನಾಶವಾಗುತ್ತಿದ್ದು, ಇದನ್ನೆ ನಂಬಿಕೊಂಡು ಬದುಕಿರುವ ಕುಟುಂಬಗಳ ಆರ್ಥಿಕ ಪರಿಸ್ಥಿತಿ ಸುಧಾರಿಸಲು ಸರ್ಕಾರ ನಿರ್ಧರಿಸಿದೆ ಎಂದರು.
ಸಹಭಾಗಿತ್ವ: ಬೆಂಗಳೂರಿನ ಐಡಿಯಾ- ಸಿಒಇ ಸಂಸ್ಥೆಯು ಗ್ರಾಮೀಣರಲ್ಲಿ ಬೇರೂರಿದ್ದ ಇಂತಹ ಕೈಗಾರಿಕೆಗಳ ಕುರಿತು ಅರಿವು ಮೂಡಿಸುವ ಕಾರ್ಯ ಮಾಡುತ್ತಿದೆ. ನಂತರದ ದಿನಗಳಲ್ಲಿ ಆಧುನಿಕ ತಂತ್ರಜ್ಞಾನದ ಮೂಲಕ ಉತ್ಪಾದನೆ ಹಾಗೂ ಮಾರುಕಟ್ಟೆ ನಿರ್ಮಿಸಲಾಗುವುದು. ಈ ಸಂಸ್ಥೆಯು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸಿ ಯಶಸ್ಸು ಸಾಧಿಸಿದೆ. ಅಲ್ಲದೆ, ರೈತರಲ್ಲಿ ಭರವಸೆ ಮೂಡಿಸಿದೆ ಎಂದರು.
ಮೈಸೂರು ಲೋಕಸಭಾ ಕ್ಷೇತ್ರದ ಹುಣಸೂರು ತಾಲೂಕಿನಲ್ಲಿ ಈ ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೆ ತರಲು ಪ್ರಾಯೋಗಿಕ ಕ್ಷೇತ್ರವನ್ನಾಗಿ ಆಯ್ದುಕೊಳ್ಳಲಾಗಿದೆ. ಶೀಘ್ರದಲ್ಲಿ ಸ್ತ್ರೀ ಶಕ್ತಿ ಸಂಘಗಳು ಹಾಗೂ ಇನ್ನಿತರ ಸಂಘ- ಸಂಸ್ಥೆಗಳೊಂದಿಗೆ ಪೂರ್ವಭಾವಿ ಸಭೆ ನಡೆಸಲಾಗುವುದು ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

