ಕೋಲಾರ

ಮೌಲ್ಯ ಕುಸಿತದಿಂದ ಸಾಮಾಜಿಕ ಅನಾಹುತ: ನ್ಯಾ. ನಾಗಮೋಹನದಾಸ್

Published On :

ಮುಳಬಾಗಲು: ಸಾಮಾಜಿಕ ಮೌಲ್ಯಗಳು ಹಾದಿ ತಪ್ಪಿರುವ ಕಾರಣ ಸಾಮಾಜಿಕವಾಗಿ ಹಲವಾರು ಅನಾಹುತಗಳಾಗುತ್ತಿವೆ ಎಂದು ಹೈಕೋರ್ಟ್ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನದಾಸ್ ಕಳವಳ ವ್ಯಕ್ತಪಡಿಸಿದರು.
ಪಟ್ಟಣದ ಶ್ರೀನಿವಾಸ ಕಲ್ಯಾಣ ಮಂಟಪದಲ್ಲಿ ಶನಿವಾರ ರಾಜ್ಯ ಪ್ರಾಥಮಿಕ ಶಿಕ್ಷಕರ ಸಂಘದ ಆಶ್ರಯದಲ್ಲಿ ನಿರಂತರ ಮೌಲ್ಯಮಾಪನ ಬಗ್ಗೆ ನಡೆದ ವಿಚಾರ ಸಂಕಿರಣವನ್ನು ಪ್ರಾರಂಭಿಸಿ ಮಾತವಾಡಿದರು. ಶಿಕ್ಷಕ ಸಮುದಾಯ ಜವಾಬ್ದಾರಿಯಿಂದ ಕಾರ್ಯಪ್ರವೃತ್ತರಾದರೆ ಸದೃಢ ಸಮಾಜ ನಿರ್ಮಾಣವಾಗುವುದೆಂದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಕೊತ್ತೂರು ಮಂಜುನಾಥ್, ಪಟ್ಟಣದಲ್ಲಿ ನಿರ್ಮಿಸಲಾಗುತ್ತಿರುವ ಶಿಕ್ಷಕರ ಭವನ ನಿರ್ಮಾಣ ಕಾಮಗಾರಿ ಪೂರ್ಣಗೊಳ್ಳಲು ಇನ್ನೂ 18 ಲಕ್ಷ ರು. ಅವಶ್ಯಕವಿದ್ದು ಇನ್ನು ಮೂರು ತಿಂಗಳ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸಿ ಮುಂದಿನ ಶಿಕ್ಷಕರ ದಿನಾಚರಣೆ ಅಲ್ಲಿಯೇ ನಡೆಸಲಾಗುವುದು ಎಂದರು.
ಸಾರ್ವಜನಿಕ ಉಪ ನಿರ್ದೇಶಕ ಎಸ್.ವಿ.ಪದ್ಮನಾಭ್, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮಂಜುನಾಥ್ ಮಾತನಾಡಿದರು.
ಕ್ಷೇತ್ರಶಿಕ್ಷಣಾಧಿಕಾರಿ ಎನ್.ದೇವರಾಜ್, ಜಿಲ್ಲಾ ನೌಕರರ ಸಂಘದ ಕಾರ್ಯದರ್ಶಿ ರವಿಚಂದ್ರ, ಪುರಸಭೆ ಸದಸ್ಯರಾದ ಜಗಮೋಹನ್ ರೆಡ್ಡಿ, ವಾಸು, ಆರ್. ವೆಂಕಟೇಶ್ ಬಾಬು,ಆರ್.ಪ್ರಭಾಕರ್, ಗೊಲ್ಲಹಳ್ಳಿ ವೆಂಕಟೇಶ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎನ್.ರಾಜಕುಮಾರ್, ಎಂ.ವಿ.ಜನಾರ್ಧನ್, ತಾಲೂಕು ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ವಿ.ಜಗನ್ನಾಥ್, ಎಂ.ವಿ.ಜನಾರ್ಧನ್ ಮುಂತಾದವರು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.