ಕೋಲಾರ

ಸಮ್ಮೇಳನ ಯಶಸ್ವಿ: ಶಾಸಕರ ಅಭಿನಂದನೆ

Published On :

ಚಿಂತಾಮಣಿ: ದ್ವಿತೀಯ ಕನ್ನಡ ಸಾಹಿತ್ಯ ಸಮ್ಮೇಳನ ಅದ್ಧೂರಿಯಾಗಿ ಕಾರ್ಯಕ್ರಮ ಯಶಸ್ವಿಯಾಗಲು ಸಹಕರಿಸಿದ ಎಲ್ಲಾ ಅಧಿಕಾರಿ ಹಾಗೂ ವಿವಿಧ ಸಂಘ ಸಂಸ್ಥೆಯ ಪದಾಧಿಕಾರಿಗಳಿಗೂ ಹಾಗೂ ಸಮಸ್ಥ ನಾಗರೀಕ ಬಂಧುಗಳಿಗೂ ಶಾಸಕ ಜೆ.ಕೆ. ಕೃಷ್ಣಾರೆಡ್ಡಿ ಅಭಿನಂದನೆಗಳನ್ನು ಸಲ್ಲಿಸಿದರು.  ಪಟ್ಟಣದಲ್ಲಿ ನಡೆಯುತ್ತಿರುವ ಕನ್ನಡ ದ್ವಿತೀಯ ಸಾಹಿತ್ಯ ಸಮ್ಮೇಳನ ಅಂತಿಮ ದಿನವಾದ ಇಂದು ಸಂಜೆ ನಡೆದ 2012-13 ಸಾಲಿನ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ಯಲ್ಲಿ ಕನ್ನಡ ಭಾಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಪ್ರತಿಭಾ ಪುರಸ್ಕಾರಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಶಾಸಕ ಜೆ.ಕೆ. ಕೃಷ್ಣಾರೆಡ್ಡಿ ತನ್ನ ವೈಯಕ್ತಿಕವಾಗಿ 5 ಸಾವಿರ ರು.ಗಳನ್ನು ಪ್ರೋತ್ಸಾಹಧನ ನೀಡಿ ವಿದ್ಯಾರ್ಥಿಗಳನ್ನು ಸಭೆಯಲ್ಲಿ ಸನ್ಮಾನಿಸಿ ನಂತರ ಮಾತನಾಡಿದರು. ಈ ಸಭೆಯಲ್ಲಿ ತಾಲೂಕು ದಂಡಾಧಿಕಾರಿಗಳಾದ ಎಂ.ಎನ್. ಮಂಜುನಾಥ ರವರನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು. ಕಾರ್ಯಕ್ರಮಕ್ಕೂ ಮುನ್ನ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದಂತಹ ಸಾಹಿತ್ಯ ಸಮಾಜ ಸೇವೆ, ಕೃಷಿ, ಶಿಕ್ಷಣ, ಸಂಗೀತ, ಧಾರ್ಮಿಕ ಕ್ಷೇತ್ರ, ನಾಟಕ ರಂಗ ಸೇರಿದಂತೆ 14 ಜನರನ್ನು ಸನ್ಮಾನಿಸಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.