ಕೋಲಾರ

ಇಂದು ಪಟ್ಟಣದಲ್ಲಿ ವಿದ್ಯುತ್ ವ್ಯತ್ಯಯ

Published On :

ಚಿಂತಾಮಣಿ: ಪಟ್ಟಣದಲ್ಲಿ ಜೂನ್ 25ರಂದು ಬೆಳಿಗ್ಗೆ 10ರಿಂದ ಸಂಜೆ 5ರ ತನಕ ವಿದ್ಯುತ್ ಸರಬರಾಜನ್ನು ಕಡಿತಗೊಳಿಸಲಾಗುವುದೆಂದು ಬೆಸ್ಕಾಂ ಅಧಿಕಾರಿ ಸೀನಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅಂದು ಚೇಳೂರು ರಸ್ತೆ, ಎಪಿಎಂಸಿ ಯಾರ್ಡ್, ಡೈಮಂಡ್ ಟಾಕೀಸ್ ರಸ್ತೆ, ಆಜಾದ್‌ಚೌಕ ವೃತ್ತ, ನಾರಸಿಂಹಪೇಟೆ, ದೊಡ್ಡಪೇಟೆ, ನಕ್ಕುಂದಿಪೇಟೆ, ಅಗ್ರಹಾರ ವ್ಯಾಪ್ತಿಗಳಲ್ಲಿ ಬೆಸ್ಕಾಂ ವಿದ್ಯುತ್ ಕಂಬಗಳನ್ನು ಬದಲಿಸುವ ಹಿನ್ನೆಲೆ ವಿದ್ಯುತ್ ಕಡಿತಗೊಳಿಸಲಾಗುವುದೆಂದು ಬೆಸ್ಕಾಂ ಅಧಿಕಾರಿ  ತಿಳಿಸಿದ್ದಾರೆ.
ವಿಶ್ವಕರ್ಮ ಸಂಘಪ್ರತಿಭಾ ಪುರಸ್ಕಾರ
ಚಿಂತಾಮಣಿ: ವಿಶ್ವಕರ್ಮ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಪ್ರತಿಭಾವಂತ ವಿಶ್ವಕರ್ಮ ವಿದ್ಯಾರ್ಥಿಗಳು ಹೆಸರು ನೋಂದಾಯಿಸಲು ಅಧ್ಯಕ್ಷ ಎಂ.ರಾಘವಾಚಾರಿ ಪ್ರಕಟಣೆಯಲ್ಲಿ ಕೋರಿದ್ದಾರೆ. ಪಟ್ಟಣದ ಎನ್.ಆರ್.ಬಡಾವಣೆಯಲ್ಲಿ ನೆಲೆಸಿರುವ ಶ್ರೀ ಕಾಳಿಕಾಂಬ ಕಮಠೇಶ್ವರ ಸ್ವಾಮಿರವರ 62ನೇ ವಾರ್ಷಿಕೋತ್ಸವ ಪೂಜೆ ಉತ್ಸವ ಸಮಾರಂಭವನ್ನು ವಿಶ್ವಕರ್ಮ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಜೂ.27ರಂದು ಹಮ್ಮಿಕೊಳ್ಳಲಾಗಿದೆ. ಇದೇ ಸಂದರ್ಭದಲ್ಲಿ ವಿಶ್ವಕರ್ಮ ಪ್ರತಿಭಾವಂತ ವಿದ್ಯಾರ್ಥಿಗಳು ಶೇ.80ಕ್ಕಿಂತಾ ಹೆಚ್ಚು ಅಂಕ ಪಡೆದ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ 2013ನೇ ಸಾಲಿನ ಎಲ್ಲ ವಿದ್ಯಾರ್ಥಿಗಳಿಗೂ ಪ್ರತಿಭಾ ಪುರಸ್ಕಾರಕ್ಕೆ ಅರ್ಹರಾಗಿರುತ್ತಾರೆಂದು ತಿಳಿಸಿದ್ದಾರೆ.
ವಿಶೇಷ ಕಾರ್ಯಕ್ರಮಗಳು: 27ರಂದು ಬೆಳಿಗ್ಗೆ 5 ಗಂಟೆಗೆ 108 ಲೀ. ಕ್ಷೀರ ಅಭಿಷೇಕ ಶ್ರೀ ಕಾಳಿಕಾಂಬ ಮತ್ತು ಕಮಠೇಶ್ವರಸ್ವಾಮಿಗೆ ನಡೆಯುವುದು ಮತ್ತು ಎಲ್ಲ ದೇವರಿಗೆ ಪಂಚಾಮೃತಾಭಿಷೇಕ ಮತ್ತು ರುದ್ರಾಭಿಷೇಕ ಮತ್ತು ಹೂವಿನ ಅಲಂಕಾರ ಹಾಗೂ ಅಮ್ಮನವರಿಗೂ ಕಮಠೇಶ್ವರಸ್ವಾಮಿಗೆ ಅಷ್ಟೋತ್ತರ ಪೂಜೆ, ಬೆಳಿಗ್ಗೆ 11 ಗಂಟೆಗೆ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ವಿತರಣೆ ಮಾಡಲಾಗುವುದು. 1-30 ಕ್ಕೆ ಚಿಂತಾಮಣಿ ಟೌನ್ ಹಳೇಪೇಟೆಯಲ್ಲಿರುವ ಶ್ರೀ ಕನ್ಯಕಾಪರಮೇಶ್ವರಿ ಕಲ್ಯಾಣ ಮಂಟಪದಲ್ಲಿ ಅನ್ನಸಂತರ್ಪಣೆ ಇರುತ್ತದೆ. ಸಂಜೆ 5 ಗಂಟೆಗೆ ಶ್ರೀ ಅಮ್ಮನವರ ಪಲ್ಲಕ್ಕಿ ಉತ್ಸವವನ್ನು ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಗುತ್ತದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.