ಕೋಲಾರ

ಅಕ್ರಮ ಕಲ್ಲು ಗಾಣಿಗಾರಿಕೆ ತಡೆಯಲು ಆಗ್ರಹ

Published On :

ಕೋಲಾರ: ತಾಲೂಕಿನ ಕಲ್ಲಂಡೂರು ಗ್ರಾಮದ ಸರ್ವೇ ನಂ.87,117 ರಲ್ಲಿ  ನಡೆಯುತ್ತಿರುವ ಅಕ್ರಮ ಕಲ್ಲುಗಣಿಗಾರಿಕೆಯನ್ನು ನಿಲ್ಲಿಸುವಂತೆ ಒತ್ತಾಯಿಸಿ ಗ್ರಾಮದ ನಿವಾಸಿಗಳು ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.
ಸರ್ಕಾರದ ವತಿಯಿಂದ ಗ್ರಾಮದ ಬಡವರಿಗೆ ಮನೆ ನಿವೇಶನಗಳು ಹಾಗೂ ವ್ಯವಸಾಯಕ್ಕೆ ಜಮೀನು ನೀಡಿದ್ದು ಜೀವನ ಸಾಗಿಸುತ್ತಿದ್ದ ಜನರಿಗೆ ಅದರ ಪಕ್ಕದಲ್ಲಿಯೇ ಸುಮಾರು ವರ್ಷಗಳಿಂದ ಅಕ್ರಮ ಗಣಿಗಾರಿಕೆ ನಡೆಸುತ್ತಿದ್ದು, ಕಲ್ಲುಬಂಡೆಗಳನ್ನು ಸಿಡಿಸಲು ಡೈನಾಮೈಟ್‌ಗಳನ್ನು ಬಳಸುವುದರಿಂದ ಅಕ್ಕಪಕ್ಕದ ಮನೆಗಳ ಮೇಲೆ ಮತ್ತು ಜಮೀನುಗಳಲ್ಲಿ ಬೆಳೆದಂತಹ ಬೆಳೆಗಳ ಮೇಲೆ ಕಲ್ಲುಚೂರುಗಳು ಬಿದ್ದು ಹಾನಿಯಾಗುತ್ತಿದೆ ಎಂದೂ ದೂರಿದ್ದಾರೆ.
ಕಲ್ಲುಗಣಿಗಾರಿಕೆ ನಿಲ್ಲಿಸುವಂತೆ ಸಂಬಂಧಪಟ್ಟ ಗಣಿ ಮತ್ತು ಭೂ ವಿಜ್ಞಾನಿ ಇಲಾಖೆಗೆ ಅನೇಕ ಸಾರಿ ಮನವಿ ಪತ್ರ ಸಲ್ಲಿಸಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲವೆಂದು ಗ್ರಾಮಸ್ಥರು ತಿಳಿಸಿದ್ದಾರೆ. ಜಿಲ್ಲಾಧಿಕಾರಿಗಳು ಈ ಕೂಡಲೇ ಅಕ್ರಮ ಗಣಿಗಾರಿಕೆ ನಡೆಸುತ್ತಿರುವವರ ಮೇಲೆ ಮತ್ತು ಅದಕ್ಕೆ ಕುಮ್ಮಕ್ಕು ನೀಡುತ್ತಿರುವ ಗಣಿ ಮತ್ತು ಭೂ ವಿಜ್ಞಾನಿ ಇಲಾಖೆಯ ಅಧಿಕಾರಿಗಳ ಮೇಲೆ ಕ್ರಮ ಜರುಗಿಸಿ ಗಣಿಗಾರಿಕೆಯನ್ನು ತಡೆಯಬೇಕು,ಮತ್ತು ಗಣಿಗಾರಿಕೆ ನಡೆಸಲು ಅನುಮತಿ ನೀಡಬಾರದೆಂದು ಗ್ರಾಮಸ್ಥರಾದ ಮುನಿರಾಜು, ಮುನಿಯಮ್ಮ, ಗಂಗಮ್ಮ, ನಾರಾಯಣಾಚಾರಿ, ರಾಮಚಂದ್ರಪ್ಪ, ನಾರಾಯಣಮ್ಮ, ಮಂಜುನಾಥ, ವಿನಯ್, ಮಲ್ಲಪ್ಪ, ಅನೇಕರು ಆಗ್ರಹಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.