ಅನುಮತಿ ಇಲ್ಲದೆ ನಿವೇಶನದಲ್ಲಿ ಮೊಬೈಲ್ ಟವರ್: ಸಾರ್ವಜನಿಕರ ಆಕ್ರೋಶ
ಚಿಕ್ಕಬಳ್ಳಾಪುರ: ಖಾಸಗಿ ಮೊಬೈಲ್ ಕಂಪನಿಯೊಂದು ನಗರಸಭೆ ಅನುಮತಿ ಪಡೆಯದೇ ಕಾನೂನು ಬಾಹಿರವಾಗಿ ನಿವೇಶನದಲ್ಲಿ ಮೊಬೈಲ್ ಟವರನ್ನು ಹಾಕಲು ಮುಂದಾದ ಕಾರಣ ಆಕ್ರೋಶಗೊಂಡ ಸಾರ್ವಜನಿಕರು ನಗರದಲ್ಲಿ ಪ್ರತಿಭಟನೆ ನಡೆಸಿದರು. ನಗರದ ನಿಮ್ಮಾಕುಲಕುಂಟೆಯ ನಿವಾಸಿ ಶ್ರೀನಿವಾಸ್ ಅವರಿಗೆ ಸೇರಿದ ನಿವೇಶನವೊಂದರಲ್ಲಿ ಮೊಬೈಲ್ ಟವರನ್ನು ಅಳವಡಿಸಲು ಕಾಮಗಾರಿಯನ್ನು ಕೈಗೊಳ್ಳುತ್ತಿರುವುದನ್ನು ಕಂಡು ಆಕ್ರೋಶಗೊಂಡ ಸ್ಥಳೀಯ ನಿವಾಸಿಗಳು, ಟವರ್ ಅಳವಡಿಸುತ್ತಿದ್ದ ಸ್ಥಳದಲ್ಲಿ ಧರಣಿ ಕುಳಿತರು. ಈಗಾಗಲೇ ಸಮೀಪದಲ್ಲಿಯೇ ಮೊಬೈಲ್ ಟವರೊಂದು ಕಾರ್ಯ ನಿರ್ವಹಿಸುತ್ತಿದ್ದು ಇದೀಗ ಮತ್ತೊಂದು ಟವರ್ ಸ್ಥಾಪನೆ ಮಾಡಲು ಮುಂದಾಗಿರುವುದು ಖಂಡನೀಯ. ಅಲ್ಲದೇ ನಗರಸಭೆಯ ಅನುಮತಿಯನ್ನು ಪಡೆಯದೇ ಮೊಬೈಲ್ ಟವರನ್ನು ಅಳವಡಿಸುವುದು ಕಾನೂನು ಪ್ರಕಾರ ಅಪರಾಧ. ಈ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನಹರಿಸಿ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ಸ್ಥಳಕ್ಕೆ ನಗರಸಭೆ ಪೌರಾಯುಕ್ತ ರುದ್ರಮುನಿ ಬಂದು, ಮೊಬೈಲ್ ಟವರನ್ನು ಇಲ್ಲಿ ಅಳವಡಿಸಲು ಬಿಡುವುದಿಲ್ಲ ಎಂದು ಭರವಸೆ ನೀಡಿದ ನಂತರ ಜನರು ತಮ್ಮ ಪ್ರತಿಭಟನೆಯನ್ನು ಹಿಂಪಡೆದರು. ಪ್ರತಿಭಟನೆಯಲ್ಲಿ ಶಾಂತಮ್ಮ, ಮುನಿಯಪ್ಪ, ಮನೋಜರ್ರಾಜ್, ನಾರಾಯಣಮ್ಮ, ಚಂದ್ರಕಲಾ, ಮಂಜುಳಾ, ನಂದೀಶ್, ಅನಿಲ್ಕುಮಾರ್ ಮುಂತಾದವರು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

